ದೇಶದಲ್ಲಿ ಕೊರೊನಾ 2ನೇ ಅಲೆಯ ಆತಂಕ.. ಮತ್ತೊಮ್ಮೆ ತತ್ತರಿಸಿದ ಮಹಾರಾಷ್ಟ್ರ, ಕೇರಳ

Corona in India | ವ್ಯಾಕ್ಸಿನ್ ಸಿಕ್ತು, ಇನ್ನೇನು ಕೊರೊನಾ ದೇಶ ಬಿಟ್ಟು ತೊಲಗುತ್ತೆ ಅಂತಾ ಜನ ಭರವಸೆ ಇಟ್ಟುಕೊಂಡ ಹೊತ್ತಲ್ಲೇ ಮತ್ತೆ ಕ್ರೂರಿ ಅಬ್ಬರಿಸಲು ಶುರು ಮಾಡಿದೆ. ದೇಶದಲ್ಲಿ ಹೊಸ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವ ಹೊತ್ತಲ್ಲೇ 2ನೇ ಅಲೆಯ ಆತಂಕ ತೀವ್ರವಾಗಿದ್ದು, ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಸರ್ವ ಸನ್ನದ್ಧವಾಗಿದೆ.

ದೇಶದಲ್ಲಿ ಕೊರೊನಾ 2ನೇ ಅಲೆಯ ಆತಂಕ.. ಮತ್ತೊಮ್ಮೆ ತತ್ತರಿಸಿದ ಮಹಾರಾಷ್ಟ್ರ, ಕೇರಳ
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on: Feb 24, 2021 | 6:49 AM

ದೆಹಲಿ: ಕೊರೊನಾ ಎಷ್ಟೋ ಜನರ ಬದುಕನ್ನ ಬೀದಿ ಪಾಲು ಮಾಡಿದೆ. ಲಕ್ಷಾಂತರ ಜನರ ಜೀವ ತೆಗೆದಿದೆ. 1 ವರ್ಷ ಇಡೀ ಜಗತ್ತನ್ನು ಕಾಡಿರುವ ಈ ಕ್ರೂರಿ ಇನ್ನೂ ತಣ್ಣಗಾಗಿಲ್ಲ. ತಣ್ಣಗಾಗುವ ಲಕ್ಷಗಳು ಕೂಡ ಕಾಣ್ತಿಲ್ಲ. ಭಾರತದಲ್ಲೀಗ 2ನೇ ಅಲೆಯ ಆತಂಕ ಕೂಡ ಶುರುವಾಗಿಬಿಟ್ಟಿದೆ. ಭಾರತದಲ್ಲಿ ಕೊರೊನಾ 2ನೇ ಅಲೆಯ ಆತಂಕ ಎದುರಾಗಿದೆ. ಕೆಲವು ರಾಜ್ಯಗಳಲ್ಲಿ ಕೊರೊನಾ 2ನೇ‌ ರೂಪ ತಾಳಿ ಅಬ್ಬರಿಸುತ್ತಿದೆ. ಅದರಲ್ಲೂ ಮಹಾರಾಷ್ಟ್ರ ಮತ್ತೆ ಕೇರಳದಲ್ಲಿ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ ಎರಡೂವರೆ ಸಾವಿರ ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಮಹಾರಾಷ್ಟ್ರವೊಂದರಲ್ಲೇ 6 ಸಾವಿರ ಹೊಸ ಪ್ರಕರಣ ಪತ್ತೆಯಾಗಿ ಆತಂಕ‌ ಸೃಷ್ಟಿಯಾಗಿದೆ. ಈ ಎರಡೂ ರಾಜ್ಯಗಳಲ್ಲದೆ ಛತ್ತೀಸ್‌ಗಢ, ಮಧ್ಯಪ್ರದೇಶ, ಪಂಜಾಬ್‌, ರಾಜಸ್ಥಾನದಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.

ಕೊರೊನಾ ಸ್ಥಿತಿಗತಿ ಬಗ್ಗೆ ಪ್ರಧಾನಿ ಕಚೇರಿಯಿಂದ ತುರ್ತು ಸಭೆ ದೇಶದಲ್ಲಿ ಮತ್ತೆ 2ನೇ ಅಲೆಯಾಗಿ ವಕ್ಕರಿಸಿರುವ ಕೊರೊನಾ ಬಗ್ಗೆ ನಿರ್ಲಕ್ಷ್ಯ ಮಾಡುವಂತಿಲ್ಲ. ಹೀಗಾಗಿ ನಿನ್ನೆ‌ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಪ್ರಧಾನಿ ನೇತೃತ್ವದ ಈ ಸಭೆಯಲ್ಲಿ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಡಾ. ರಾಜೇಶ್ ಭೂಷಣ್ ಭಾಗಿಯಾಗಿ, ರಾಜ್ಯಗಳಲ್ಲಿನ ಕೊರೊನಾ ಸ್ಥಿತಿ ಬಗ್ಗೆ ವರದಿ ನೀಡಿದ್ದಾರೆ.ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳಿಗೆ ಕೆಲ ರಾಜ್ಯಗಳ ಕೇಸ್ ಏರಿಕೆ ಕುರಿತು ಮಾಹಿತಿ ನೀಡಲಾಗಿದೆ. ಕೊರೊನಾ ವೇಗವಾಗಿ ಹರಡದಂತೆ ತಡೆಯಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೇಶದ 6 ಜನರಲ್ಲಿ ದಕ್ಷಿಣ ಆಫ್ರಿಕಾದ ವೈರಸ್ ಪತ್ತೆ ಮಹಾರಾಷ್ಟ್ರ, ಕೇರಳ ಮತ್ತು ತೆಲಂಗಾಣದಲ್ಲಿ ದಕ್ಷಿಣ ಆಫ್ರಿಕಾದ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆ ಆಗಿದೆ ಅಂತಾ ನೀತಿ ಆಯೋಗದ ಸದಸ್ಯ ವಿ‌‌.ಕೆ. ಪೌಲ್ ಹೇಳಿದ್ದಾರೆ. ಆದ್ರೆ ಕೊರೊನಾ ಕೇಸ್​ಗಳ ಏರಿಕೆಗೆ ಈ ಹೊಸ ಪ್ರಭೇದದ ವೈರಸ್ ಕಾರಣವಲ್ಲ ಅನ್ನೋದನ್ನ ಪೌಲ್ ಸ್ಪಷ್ಟಪಡಿಸಿದ್ದಾರೆ.

ಇನ್ನು ದೇಶದ 5 ರಾಜ್ಯಗಳಲ್ಲಿ ಕೊರೊನಾ ಹೊಸ ಕೇಸ್ ಏರಿಕೆಯಾಗ್ತ್ತಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್, ಮಧ್ಯಪ್ರದೇಶ, ಜಮ್ಮು ಕಾಶ್ಮೀರದಲ್ಲಿ ಹೊಸ ಕೇಸ್​ಗಳ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದ ಸಕ್ರಿಯ ಪ್ರಕರಣಗಳಲ್ಲಿ ಕೇರಳದಲ್ಲಿ ಶೇಕಡಾ 38, ಮಹಾರಾಷ್ಟ್ರದಲ್ಲಿ ಶೇಕಡಾ 37 ರಷ್ಟು ಪ್ರಕರಣಗಳಿವೆ. ಹೀಗಾಗಿ ಈ ಎರಡೂ ರಾಜ್ಯಗಳನ್ನೇ ಗಮನದಲ್ಲಿಟ್ಟುಕೊಂಡು ಕೇಂದ್ರ ಹೊಸ ಕಾರ್ಯತಂತ್ರ ಹೆಣೆಯುತ್ತಿದೆ.

ಇದನ್ನೂ ಓದಿ: ಇಡೀ ದೇಶದಲ್ಲೇ No.1 ಕೊರೊನಾ ಹಾಟ್​ಸ್ಪಾಟ್: ಸಿಲಿಕಾನ್ ಸಿಟಿ ಬೆಂಗಳೂರು!

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ