ಜೂನ್​​ 20ಕ್ಕೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಬಹುಮತ ಸಾಬೀತು ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್​​​ 20ಕ್ಕೆ ಲೋಕಸಭೆಯಲ್ಲಿ ಬಹುಮತ ಸಾಬೀತು ಮಾಡುವ ಸಾಧ್ಯತೆ ಎಂದು ಹೇಳಲಾಗಿದೆ. ಈಗಾಗಲೇ ಮೋದಿ ನೇತೃತ್ವದಲ್ಲಿ ಎನ್​​ಡಿಎ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿದ್ದು, ಮೋದಿ ಜತೆಗೆ 72 ಸಚಿವರು ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಇದೀಗ ಮೋದಿ ಅವರು ಲೋಕಸಭೆಯಲ್ಲಿ ತಮ್ಮ ಸರ್ಕಾರ ಬಲವನ್ನು ಸಾಬೀತು ಮಾಡಲಿದ್ದಾರೆ.

ಜೂನ್​​ 20ಕ್ಕೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಬಹುಮತ ಸಾಬೀತು ಸಾಧ್ಯತೆ
ನರೇಂದ್ರ ಮೋದಿ
Follow us
|

Updated on:Jun 11, 2024 | 3:57 PM

ದೆಹಲಿ, ಜೂ.11: ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರು ಜೂನ್​​ 20ಕ್ಕೆ ಲೋಕಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈಗಾಗಲೇ ಮೋದಿ ನೇತೃತ್ವದಲ್ಲಿ ಎನ್​​ಡಿಎ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಾಗಿದೆ. ಭಾನುವಾರದಂದು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ್ದಾರೆ. ಇದರ ಜತೆಗೆ 72 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನೆನ್ನೆ (ಜೂ.9)  ಎಲ್ಲರಿಗೂ ಖಾತೆಯನ್ನು ಕೂಡ ನೀಡಿಲಾಗಿದೆ. ಇಂದು (ಜೂ.10) ಅನೇಕ ಸಚಿವರು ದೆಹಲಿ ಕಚೇರಿಗೆ ಬಂದು ಅಧಿಕೃತವಾಗಿ ಅಧಿಕಾರ ಸ್ವೀಕಾರಿಸಿದ್ದಾರೆ. ಇದರ ನಡುವೆ ಮೋದಿಗೆ ಮತ್ತೊಂದು ಅಗ್ನಿ ಪರೀಕ್ಷೆ ಮುಂದಾಗಿದೆ.

ಇನ್ನು ಈ ದಿನದಂದು ಸ್ಪೀಕರ್​​ನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರು ಜೂನ್ 18 ಮತ್ತು 19 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಜೂನ್ 21 ರಂದು ರಾಷ್ಟ್ರಪತಿ ಭಾಷಣ ಮಾಡುತ್ತಾರೆ. ಪ್ರಧಾನಿ ಮೋದಿ ಅವರು ಜೂನ್​​ 20ಕ್ಕೆ ಒಂದು ಬಾರಿ ತಮ್ಮ ಬಲವನ್ನು ಸಾಬೀತು ಮಾಡಿದ್ರೆ, ಮುಂದಿನ ಆರು ತಿಂಗಳು ಸರ್ಕಾರ ಭದ್ರವಾಗಿರುತ್ತದೆ.

ಪ್ರಧಾನಿ ಮೋದಿ ಅವರು ಭಾನುವಾರ ಮೂರನೇ ಬಾರಿ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದರು. ಇನ್ನು ಇದರ ಜತೆಗೆ 72 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದರಲ್ಲಿ ಕರ್ನಾಟಕಕ್ಕೂ ದೊಡ್ಡ ಪಾಲು ಸಿಕ್ಕಿದೆ. ಕರ್ನಾಟಕದಿಂದ 5 ಜನ ಕೇಂದ್ರ ಮಂತ್ರಿಗಳಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಾಸ್ಟರ್​​ ಪ್ಲಾನ್: ಆಂಧ್ರದ ಪುರಂದೇಶ್ವರಿಗೆ ಲೋಕಸಭೆ ಸ್ಪೀಕರ್‌ ಹುದ್ದೆ? ಟಿಡಿಪಿಗೆ ತೃಪ್ತಿಯಾಗುವುದು ಖಂಡಿತ

ಇನ್ನು ಈ ಬಾರಿ ಲೋಕಸಭೆಯಲ್ಲಿ ಬಿಜೆಪಿ ಹೇಳಿಕೊಳ್ಳುವಷ್ಟು ದೊಡ್ಡ ಸಾಧನೆ ಮಾಡಿಲ್ಲ. 240 ಸ್ಥಾನಗಳನ್ನು ಪಡೆದುಕೊಂಡು ತೃಪ್ತಿಪಟ್ಟಿದೆ. ಆದರೆ ಎನ್​​ಡಿಎ ಮೈತ್ರಿಕೂಟ ಒಟ್ಟು ಹೆಚ್ಚು ಸ್ಥಾನ ಪಡೆದಿದೆ. ಸರ್ಕಾರ ರಚನೆಗೆ 36 ಸ್ಥಾನಗಳು ಅಗತ್ಯ ಇದ್ದ ಕಾರಣ ಬಿಜೆಪಿ ಚಂದ್ರಬಾಬು ನಾಯ್ಡು ನೇತೃತ್ವದ ಡಿಟಿಪಿ ಹಾಗೂ ಬಿಹಾರ್​​​​ ಮುಖ್ಯಮಂತ್ರಿ ನೀತಿಶ್​​​ ಕುಮಾರ್​​ ಅವರ ಜೆಡಿಯು ಪಕ್ಷದ ಬೆಂಬಲ ಪಡೆದಿದ್ದಾರೆ. ಇದೀಗ ಈ ಮೈತ್ರಿಕೂಟದ ಬೆಂಬಲ ಮೋದಿ ಸರ್ಕಾರಕ್ಕೆ ಇದೆ ಎಂಬುದನ್ನು ಲೋಕಸಭೆಯಲ್ಲಿ ಜೂನ್​​ 20ಕ್ಕೆ ಸಾಬೀತು ಮಾಡುವ ಸಾಧ್ಯತೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:15 pm, Tue, 11 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!