ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ

ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇನ್ನೂ ಹೆಚ್ಚು ದೃಢನಿಶ್ಚಯದಿಂದ ಭಯೋತ್ಪಾದನೆಯ ವಿರುದ್ಧ ಹೋರಾಡುವ ಸಂಕಲ್ಪವನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದ್ದಾರೆ. ಹಾಗೇ, ಗಾಜಾ ಶಾಂತಿ ಯೋಜನೆಯ ಸ್ಥಿತಿಗತಿಯ ಕುರಿತು ನೆತನ್ಯಾಹು ಅವರಿಂದ ಪ್ರಧಾನಿ ಮೋದಿ ಸಂಕ್ಷಿಪ್ತ ಮಾಹಿತಿ ಪಡೆದರು.

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ
Pm Modi And Netanyahu

Updated on: Jan 07, 2026 | 5:32 PM

ನವದೆಹಲಿ, ಜನವರಿ 7: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದರು. ಫೋನ್​ನಲ್ಲಿ ತಮ್ಮ ಗೆಳೆಯ ನೆತನ್ಯಾಹು ಜೊತೆ ಮಾತನಾಡಿದ ಮೋದಿ (PM Modi) ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. “ಇಬ್ಬರು ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಎರಡೂ ದೇಶಗಳ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದರು” ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಕುರಿತು ನೆತನ್ಯಾಹು ಪ್ರಧಾನ ಮಂತ್ರಿ ಮೋದಿಗೆ ವಿವರಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪವನ್ನು ಹೆಚ್ಚಿನ ದೃಢನಿಶ್ಚಯದಿಂದ ಪುನರುಚ್ಚರಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಫೋನ್; ಭಯೋತ್ಪಾದನೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಚರ್ಚೆ

“ನನ್ನ ಸ್ನೇಹಿತರಾದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಕ್ಕೆ, ಅವರಿಗೆ ಮತ್ತು ಇಸ್ರೇಲ್ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿ ಸಂತೋಷವಾಗಿದೆ. ಮುಂಬರುವ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ನಾವು ಚರ್ಚಿಸಿದ್ದೇವೆ” ಎಂದು ನರೇಂದ್ರ ಮೋದಿ ಹೇಳಿದರು.


“ನಾವು ಪ್ರಾದೇಶಿಕ ಪರಿಸ್ಥಿತಿಯ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಇನ್ನೂ ಹೆಚ್ಚಿನ ದೃಢನಿಶ್ಚಯದಿಂದ ಭಯೋತ್ಪಾದನೆಯನ್ನು ಎದುರಿಸಲು ನಮ್ಮ ದೃಢಸಂಕಲ್ಪವನ್ನು ಪುನರುಚ್ಚರಿಸಿದ್ದೇವೆ” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

2026ರಲ್ಲಿ ಭಾರತ ಮತ್ತು ಇಸ್ರೇಲ್ ನಾಯಕರ ನಡುವಿನ ಮೊದಲ ನೇರ ಸಂಭಾಷಣೆ ಇದಾಗಿದೆ. ಕಳೆದ ವರ್ಷ ಡಿಸೆಂಬರ್ 11ರಂದು ಪ್ರಧಾನಿ ಮೋದಿ ಅವರಿಗೆ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ