ಭಾರತದಲ್ಲಿ 2028ರ ಹೊತ್ತಿಗೆ ನಿರ್ಮಾಣವಾಗಲಿದೆ ದೇಶದ ಮೊದಲ ಅಂತರಿಕ್ಷ ನಿಲ್ದಾಣ

ಭಾರತದಲ್ಲಿ 2028ರಷ್ಟೊತ್ತಿಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಮಾತನಾಡಿ, ಭಾರತವು ತನ್ನ ಅಸ್ತಿತ್ವದಲ್ಲಿರುವ ಸಾಮರ್ಥ್ಯಗಳನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ ಎಂದಿದ್ದಾರೆ.

ಭಾರತದಲ್ಲಿ 2028ರ ಹೊತ್ತಿಗೆ ನಿರ್ಮಾಣವಾಗಲಿದೆ  ದೇಶದ ಮೊದಲ ಅಂತರಿಕ್ಷ ನಿಲ್ದಾಣ
ಎಸ್​ ಸೋಮನಾಥ್​Image Credit source: The Week
Follow us
ನಯನಾ ರಾಜೀವ್
|

Updated on: Jan 12, 2024 | 9:30 AM

ಭಾರತದಲ್ಲಿ 2028ರಷ್ಟೊತ್ತಿಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(Isro) ಮಾಹಿತಿ ನೀಡಿದೆ. ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮಾತನಾಡಿ, ಭಾರತವು ತನ್ನ ಅಸ್ತಿತ್ವದಲ್ಲಿರುವ ಸಾಮರ್ಥ್ಯಗಳನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ ಎಂದಿದ್ದಾರೆ.

ಭಾರತದ ಪ್ರತಿಭೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ, ಮುಂದಿನ 5 ರಿಂದ 10 ವರ್ಷಗಳಲ್ಲಿ ಭೂಮಿಯ ಮೇಲಿನ ವಿವಿಧ ಕಾರ್ಯಗಳಿಗಾಗಿ ಕೈಗಾರಿಕೆಗಳು ನೂರಾರು ಬಾಹ್ಯಾಕಾಶ ನೌಕೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಭಾರತದ ಮೊದಲ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾದ ನಂತರ, ನೀವು (ಗಗನಯಾತ್ರಿಗಳು) ಬಂದು ಪ್ರಯೋಗಗಳನ್ನು ನಡೆಸಲು ಪ್ರಯೋಗಾಲಯವಾಗಿ ಅಭಿವೃದ್ಧಿಪಡಿಸಲು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

2035 ರ ವೇಳೆಗೆ ನಾವು ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳನ್ನು ಮಾಡಬಹುದಾದ ಪ್ರಯೋಗಾಲಯಗಳು, ಸಂಸ್ಥೆಗಳು, ವೈಜ್ಞಾನಿಕ ಸಂಸ್ಥೆಗಳನ್ನು ನಾವು ಹೊಂದಿರಲಿದ್ದೇವೆ.

ಮತ್ತಷ್ಟು ಓದಿ: ಅಂತಿಮ ಕಕ್ಷೆ ಸೇರಿದ ಆದಿತ್ಯ ಎಲ್1; ಇದು ದೀರ್ಘ ಪ್ರಯಾಣದ ಅಂತ್ಯ: ಇಸ್ರೋ ಮುಖ್ಯಸ್ಥ ಸೋಮನಾಥ್

ಮುಂದಿನ ದಿನಗಳಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣದಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ. ಉದ್ಯಮವು ಬಾಹ್ಯಾಕಾಶ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶವನ್ನು ಪಡೆಯುತ್ತದೆ. ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅವುಗಳನ್ನು ನಿರ್ವಹಿಸುವ ಪ್ರಾವೀಣ್ಯತೆಯ ವಿಚಾರದಲ್ಲಿ ಭಾರೀ ಪ್ರಮಾಣದ ಸಂಪನ್ಮೂಲಗಳನ್ನು ಹೊಂದುವ ಅವಶ್ಯಕತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು