ಭಾರತದಲ್ಲಿ 2028ರ ಹೊತ್ತಿಗೆ ನಿರ್ಮಾಣವಾಗಲಿದೆ ದೇಶದ ಮೊದಲ ಅಂತರಿಕ್ಷ ನಿಲ್ದಾಣ

ಭಾರತದಲ್ಲಿ 2028ರಷ್ಟೊತ್ತಿಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಮಾತನಾಡಿ, ಭಾರತವು ತನ್ನ ಅಸ್ತಿತ್ವದಲ್ಲಿರುವ ಸಾಮರ್ಥ್ಯಗಳನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ ಎಂದಿದ್ದಾರೆ.

ಭಾರತದಲ್ಲಿ 2028ರ ಹೊತ್ತಿಗೆ ನಿರ್ಮಾಣವಾಗಲಿದೆ  ದೇಶದ ಮೊದಲ ಅಂತರಿಕ್ಷ ನಿಲ್ದಾಣ
ಎಸ್​ ಸೋಮನಾಥ್​
Image Credit source: The Week

Updated on: Jan 12, 2024 | 9:30 AM

ಭಾರತದಲ್ಲಿ 2028ರಷ್ಟೊತ್ತಿಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(Isro) ಮಾಹಿತಿ ನೀಡಿದೆ. ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮಾತನಾಡಿ, ಭಾರತವು ತನ್ನ ಅಸ್ತಿತ್ವದಲ್ಲಿರುವ ಸಾಮರ್ಥ್ಯಗಳನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ ಎಂದಿದ್ದಾರೆ.

ಭಾರತದ ಪ್ರತಿಭೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ, ಮುಂದಿನ 5 ರಿಂದ 10 ವರ್ಷಗಳಲ್ಲಿ ಭೂಮಿಯ ಮೇಲಿನ ವಿವಿಧ ಕಾರ್ಯಗಳಿಗಾಗಿ ಕೈಗಾರಿಕೆಗಳು ನೂರಾರು ಬಾಹ್ಯಾಕಾಶ ನೌಕೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಭಾರತದ ಮೊದಲ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾದ ನಂತರ, ನೀವು (ಗಗನಯಾತ್ರಿಗಳು) ಬಂದು ಪ್ರಯೋಗಗಳನ್ನು ನಡೆಸಲು ಪ್ರಯೋಗಾಲಯವಾಗಿ ಅಭಿವೃದ್ಧಿಪಡಿಸಲು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

2035 ರ ವೇಳೆಗೆ ನಾವು ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳನ್ನು ಮಾಡಬಹುದಾದ ಪ್ರಯೋಗಾಲಯಗಳು, ಸಂಸ್ಥೆಗಳು, ವೈಜ್ಞಾನಿಕ ಸಂಸ್ಥೆಗಳನ್ನು ನಾವು ಹೊಂದಿರಲಿದ್ದೇವೆ.

ಮತ್ತಷ್ಟು ಓದಿ: ಅಂತಿಮ ಕಕ್ಷೆ ಸೇರಿದ ಆದಿತ್ಯ ಎಲ್1; ಇದು ದೀರ್ಘ ಪ್ರಯಾಣದ ಅಂತ್ಯ: ಇಸ್ರೋ ಮುಖ್ಯಸ್ಥ ಸೋಮನಾಥ್

ಮುಂದಿನ ದಿನಗಳಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣದಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ. ಉದ್ಯಮವು ಬಾಹ್ಯಾಕಾಶ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶವನ್ನು ಪಡೆಯುತ್ತದೆ.
ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಲು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅವುಗಳನ್ನು ನಿರ್ವಹಿಸುವ ಪ್ರಾವೀಣ್ಯತೆಯ ವಿಚಾರದಲ್ಲಿ ಭಾರೀ ಪ್ರಮಾಣದ ಸಂಪನ್ಮೂಲಗಳನ್ನು ಹೊಂದುವ ಅವಶ್ಯಕತೆಯಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us