ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಸೋಮನಾಥ್​ ಅವರಿಗೆ ಕ್ಯಾನ್ಸರ್​ ಇರುವುದು ಗೊತ್ತಾಗಿತ್ತು
ಎಸ್​ ಸೋಮನಾಥ್​
Follow us
ನಯನಾ ರಾಜೀವ್
|

Updated on:Mar 04, 2024 | 3:24 PM

ಆದಿತ್ಯ ಎಲ್​-1 ಉಡಾವಣೆ ದಿನವೇ ಇಸ್ರೋ ಅಧ್ಯಕ್ಷ ಎಸ್​ ಸೋಮನಾಥ್(S Somnath)​ ಅವರಿಗೆ ಕ್ಯಾನ್ಸರ್(Cancer)​ ಇರುವುದು ಗೊತ್ತಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತದ ಸೂರ್ಯ ಮಿಷನ್ ಆದಿತ್ಯ ಎಲ್​1 ಉಡಾವಣೆ ಸಮಯದಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಖ್ಯಸ್ಥ ಎಸ್​ ಸೋಮನಾಥ್​ ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿದ್ದರು.

ಸೋಮನಾಥ್​ ಸಂದರ್ಶನದಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಸ್ಕ್ಯಾನಿಂಗ್​ನಲ್ಲಿ ಕ್ಯಾನ್ಸರ್​ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಚಂದ್ರಯಾನ 3 ಮಿಷನ್ ಉಡಾವಣೆ ಸಮಯದಲ್ಲಿಯೂ ಕೆಲವು ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದವು, ಆದರೆ ಅಲ್ಲಿಯವರೆಗೆ ಏನೂ ಸ್ಪಷ್ಟವಾಗಿರಲಿಲ್ಲ, ಆದಿತ್ಯ ಮಿಷನ್ ದಿನದಂದು ಕಾಯಿಲೆ ಇರುವುದು ಪತ್ತೆಯಾಗಿತ್ತು. ಇದರಿಂದ ಅವರು ಮತ್ತವರ ಕುಟುಂಬದವರು ತುಂಬಾ ಬೇಸರಗೊಂಡಿದ್ದರು ಎಂದು ಹೇಳಿದರು.

ಮತ್ತಷ್ಟು ಓದಿ: ಹೊಟ್ಟೆಯ ಕ್ಯಾನ್ಸರ್ ಏಕೆ ಅಪಾಯಕಾರಿ; ತಜ್ಞರ ಉತ್ತರ ಇಲ್ಲಿದೆ

ಈ ಸುದ್ದಿ ಕೇಳಿ ಎಲ್ಲಾ ವಿಜ್ಞಾನಿಗಳು ಕೂಡ ಬೇಸರಗೊಂಡಿದ್ದಾರೆ, ಉಡಾವಣೆ ಬಳಿಕ ಹೊಟ್ಟೆಯ ಸ್ಕ್ಯಾನ್ ಮಾಡಲಾಯಿತು. ಆಗ ರೋಗ ಬಹಿರಂಗವಾಯಿತು. ಹೆಚ್ಚಿನ ತನಿಖೆ ಹಾಗೂ ಚಿಕಿತ್ಸೆಗಾಗಿ ಚೆನ್ನೈಗೆ ಹೋಗಿದ್ದರು. ಅನುವಂಶಿಕವಾಗಿ ಕ್ಯಾನ್ಸರ್ ಬಂದಿದೆ. ಅವರಿಗೆ ಉದರದ ಕ್ಯಾನ್ಸರ್​ ಇತ್ತು, ತಕ್ಷಣವೇ ಕಿಮೋ ಥೆರಪಿ ನಡೆಸಿದ್ದಾರೆ.

ಚಿಕಿತ್ಸೆ ನಡೆದು ಚೇತರಿಸಿಕೊಂಡಿದ್ದಾರೆ. ಇದು ಸುದೀರ್ಘ ಪ್ರಕ್ರಿಯೆ, ನಾನು ಈ ಯುದ್ಧದಲ್ಲಿ ಹೋರಾಡುತ್ತೇನೆ, ನಾಲ್ಕು ದಿನ ಮಾತ್ರ ಆಸ್ಪತ್ರೆಯಲ್ಲಿದ್ದೆ, ಯಾವುದೇ ನೋವಿಲ್ಲದೆ ಇಸ್ರೋದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದೇನೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:12 pm, Mon, 4 March 24

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ