ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ

ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ.

ಕಕ್ಷೆ ಸೇರಿತು CMS-01 ಉಪಗ್ರಹ: ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸುಧಾರಿಸುವ ನಿರೀಕ್ಷೆ
CMS-01 ಉಪಗ್ರಹ ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ ನಭಕ್ಕೆ ಜಿಗಿದ ಕ್ಷಣ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 17, 2020 | 6:27 PM

ಶ್ರೀಹರಿಕೋಟಾ: ಭಾರತವು ಸಂವಹನ ಸುಧಾರಣೆಗೆ ಸಂಬಂಧಿಸಿದ ಉಪಗ್ರಹವೊಂದನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ CMS-01 ಉಪಗ್ರಹವನ್ನು ಇಂದು ಮಧ್ಯಾಹ್ನ ಯಶಸ್ವಿಯಾಗಿ ಉಡಾಯಿಸಿತು. ಕೊರೊನಾ ಪಿಡುಗಿನ ನಂತರ ಇಸ್ರೋ ಉಡಾಯಿಸಿದ ಎರಡನೇ ಉಪಗ್ರಹ ಇದು.

ಜಿಸ್ಯಾಟ್ ಮತ್ತು ಇನ್​ಸ್ಯಾಟ್​ ನಂತರ CMS ಉಪಗ್ರಹ ಸರಣಿಯ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಅಂಡಮಾನ್ ನಿಕೋಬಾರ್, ಲಕ್ಷದ್ವೀಪಗಳನ್ನು ಒಳಗೊಂಡ ದೇಶದ ದೂರದ ಭೂಭಾಗಗಳಿಗೆ ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಸಂವಹನ ಸೇವೆ ಒದಗಿಸಲಿದೆ. ಸಂವಹನ ಸುಧಾರಣೆಗೆ ಮೀಸಲಾದ 42ನೇ ಉಪಗ್ರವಾದ CMS-01, ಈ ಸರಣಿಯ ಮೊದಲ ಉಪಗ್ರಹವಾಗಿದೆ.

PSLV-C50 ರಾಕೆಟ್​ ಈ ಉಪಗ್ರಹವನ್ನು ಅಂತರಿಕ್ಷಕ್ಕೆ ಹೊತ್ತೊಯ್ದಿತು. 2011ರಲ್ಲಿ ಉಡಾವಣೆಗೊಂಡ GSAT-12 ಉಪಗ್ರಹದ ಕೆಲಸಗಳನ್ನು CMS-01 ಇನ್ನು ಮುಂದೆ ನಿರ್ವಹಿಸಲಿದೆ. ಇದು PSLV-C50 ರಾಕೆಟ್​ ಹೊತ್ತೊಯ್ದ 52ನೇ ಉಪಗ್ರಹ. ದೇಶದ ಸಂವಹನ ವ್ಯವಸ್ಥೆಯಲ್ಲಿ ಬದಲಾವಣೆಯ ಗಾಳಿ ಬೀಸುವ ನಿರೀಕ್ಷೆಯನ್ನು ಇಸ್ರೋ ವ್ಯಕ್ತಪಡಿಸಿದೆ.

PSLV-ಸಿ-49 ರಾಕೆಟ್​ ಮೂಲಕ 10 ಉಪಗ್ರಹಗಳನ್ನು ಕಕ್ಷೆಗೆ‌ ಸೇರಿಸಿದ ISRO

Published On - 6:25 pm, Thu, 17 December 20

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್