AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷ ಹಿಂದೆ ದೋಸೆ-ಚಟ್ನಿಯಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನ! ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಹೇಳೋದೇನು?

ಮೇ 3, 2017ರಂದು ನನಗೆ ದೋಸೆ ಮತ್ತು ಚಟ್ನಿಯಲ್ಲಿ ಮಾರಕ ಪ್ರಮಾಣದ ವಿಷ ನೀಡಲಾಗಿತ್ತು ಎಂದು ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಆರೋಪಿಸಿದ್ದು, ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

3 ವರ್ಷ ಹಿಂದೆ ದೋಸೆ-ಚಟ್ನಿಯಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನ! ಇಸ್ರೊ ವಿಜ್ಞಾನಿ ತಪನ್ ಮಿಶ್ರಾ ಹೇಳೋದೇನು?
ತಪನ್ ಮಿಶ್ರಾ (ಕೃಪೆ sac.gov.in)
ರಶ್ಮಿ ಕಲ್ಲಕಟ್ಟ
| Edited By: |

Updated on: Jan 06, 2021 | 12:17 PM

Share

ಬೆಂಗಳೂರು: ಮೂರು ವರ್ಷಗಳ ಹಿಂದೆ ನನಗೆ ಆಹಾರದಲ್ಲಿ ವಿಷ ಬೆರೆಸಿ ನೀಡಲಾಗಿತ್ತು, ನನ್ನ ಹತ್ಯೆಗೆ ಯತ್ನ ನಡೆದಿತ್ತು ಎಂದು ಇಸ್ರೋ ವಿಜ್ಞಾನಿ ತಪನ್ ಮಿಶ್ರಾ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿರುವ ಇಸ್ರೊ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ತಪನ್ ಮಿಶ್ರಾ, ಮೇ 3, 2017ರಂದು ನನಗೆ ದೋಸೆ ಮತ್ತು ಚಟ್ನಿಯಲ್ಲಿ ಮಾರಕ ಪ್ರಮಾಣದ ವಿಷ ನೀಡಲಾಗಿತ್ತು ಎಂದು ಹೇಳಿದ್ದಾರೆ. ಪ್ರಸ್ತುತ ಮಿಶ್ರಾ ಅವರು ಇಸ್ರೋದಲ್ಲಿ ಹಿರಿಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರು ಅಹಮದಾಬಾದ್ ಮೂಲದ ಅಪ್ಲಿಕೇಷನ್ ಸೆಂಟರ್ ಆಫ್ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಷನ್ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

‘Long Kept Secret’ ಎಂಬ ಶೀರ್ಷಿಕೆ ನೀಡಿ ಫೇಸ್​​ಬುಕ್​​ನಲ್ಲಿ ಈ ಘಟನೆ ಬಗ್ಗೆ ಬರೆದಿರುವ ಮಿಶ್ರಾ ಜುಲೈ 2017ರಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಆರ್ಸೆನಿಕ್ ವಿಷದ ಕುರಿತು ಎಚ್ಚರಿಸಿದ್ದರು. ಇದಕ್ಕೆ ವೈದ್ಯರು ನಿಖರವಾದ ಪರಿಹಾರ ನೀಡಿದ್ದಾರೆ ಎಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ, ಚರ್ಮ ರೋಗ ಮತ್ತು ಫಂಗಸ್ ಸೋಂಕು ಮೊದಲಾದ ಆರೋಗ್ಯ ಸಮಸ್ಯೆಗಳಿಂದ ನಾನು ಬಳಲಿದ್ದೆ ಎಂದು ಹೇಳಿದ ಮಿಶ್ರಾ ಆರ್ಸೆನಿಕ್ ವಿಷ ಸೇವನೆಯಿಂದಾಗಿ ಉಂಟಾದ ಸಮಸ್ಯೆಗಳಿಗೆ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ದಾಖಲೆಯನ್ನೂ ತಮ್ಮ ಫೇಸ್​​ಬುಕ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ತನಿಖೆ ಮಾಡಬೇಕು ಎಂದು ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಮಿಶ್ರಾ ಒತ್ತಾಯಿಸಿದ್ದಾರೆ.  ಮಿಶ್ರಾ ಅವರ ಆರೋಪದ ಬಗ್ಗೆ ಇಸ್ರೊ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೀರ್ತಿಶನಿಯಿಂದ ದೂರವಿದ್ದ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!