AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೊ ಗೂಢಚಾರಿಕೆ ಪ್ರಕರಣ: ಆರೋಪಿ ಅಧಿಕಾರಿಗಳಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

1994 ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಗೂಢಾಚಾರಿಕೆ ನಡೆಸಿದ್ದರು ಎಂದು ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದ ಆರೋಪ ಹೊಂದಿರುವ ಆರೋಪಿಗಳ ನಿರೀಕ್ಷಣಾ ಜಾಮೀನನ್ನು ಇದೀಗ ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಇಸ್ರೊ ಗೂಢಚಾರಿಕೆ ಪ್ರಕರಣ: ಆರೋಪಿ ಅಧಿಕಾರಿಗಳಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್
ನಂಬಿ ನಾರಾಯಣನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Dec 02, 2022 | 2:00 PM

Share

ಇಸ್ರೊ ಗೂಢಚಾರಿಕೆ ಪ್ರಕರಣದಲ್ಲಿ ಮಾಜಿ ಉನ್ನತ ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನಿನ ಕುರಿತ ಕೇರಳ ಹೈಕೋರ್ಟ್ ಆದೇಶವನ್ನು (Kerala HC) ಸುಪ್ರೀಂಕೋರ್ಟ್ (Supreme Court) ಶುಕ್ರವಾರ ರದ್ದುಗೊಳಿಸಿದೆ. 1994 ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಾಜಿ ವಿಜ್ಞಾನಿ ನಂಬಿ ನಾರಾಯಣನ್ (Nambi Narayanan) ಗೂಢಾಚಾರಿಕೆ ನಡೆಸಿದ್ದರು ಎಂದು ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದ ಆರೋಪ ಹೊಂದಿರುವ ಆರೋಪಿಗಳ ನಿರೀಕ್ಷಣಾ ಜಾಮೀನನ್ನು ಇದೀಗ ಸುಪ್ರೀಂಕೋರ್ಟ್ ರದ್ದು ಮಾಡಿದೆ. ನಾಲ್ಕು ವಾರಗಳಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ಕೇರಳ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಹೇಳಿದೆ. ಜಾಮೀನಿಗಾಗಿ ಹೈಕೋರ್ಟ್‌ಗೆ ತೆರಳಲು ಅಧಿಕಾರಿಗೆ ಅವಕಾಶ ನೀಡಲು ನ್ಯಾಯಾಲಯ ಐದು ವಾರಗಳ ಅವಧಿಗೆ ಬಂಧನದಿಂದ ರಕ್ಷಣೆ ನೀಡಿದೆ. ನ್ಯಾಯಮೂರ್ತಿಗಳಾದ ಎಂ ಆರ್ ಷಾ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ಪೀಠವು ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಿದೆ. ಈ ಎಲ್ಲಾ ಮೇಲ್ಮನವಿಗಳನ್ನು ಅನುಮತಿಸಲಾಗಿದೆ. ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾದ ಹೈಕೋರ್ಟ್ ಆದೇಶಗಳನ್ನು ರದ್ದುಗೊಳಿಸಲಾಗಿದೆ. ಎಲ್ಲಾ ವಿಷಯಗಳನ್ನು ಅದರ ಸ್ವಂತ ಅರ್ಹತೆಯ ಮೇಲೆ ಹೊಸದಾಗಿ ನಿರ್ಧರಿಸಲು ಹೈಕೋರ್ಟ್ ಗೆ ಹಿಂತಿರುಗಿಸಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ಅಂತಿಮವಾಗಿ ಹೈಕೋರ್ಟ್ ಆದೇಶಗಳನ್ನು ರವಾನಿಸುತ್ತದೆ. ಈ ಆದೇಶದ ದಿನಾಂಕದಿಂದ ನಾಲ್ಕು ವಾರಗಳೊಳಗೆ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಶೀಘ್ರವಾಗಿ ನಿರ್ಧರಿಸಲು ನಾವು ಹೈಕೋರ್ಟ್ ಅನ್ನು ವಿನಂತಿಸುತ್ತೇವೆ” ಎಂದು ಪೀಠ ಹೇಳಿದೆ. ಪ್ರಕರಣದ ಆರೋಪಿಗಳಲ್ಲಿ ಕೇರಳದ ಮಾಜಿ ಡಿಜಿಪಿ ಸಿಬಿ ಮ್ಯಾಥ್ಯೂಸ್, ಗುಜರಾತ್ ಮಾಜಿ ಎಡಿಜಿಪಿ ಆರ್.ಬಿ.ಶ್ರೀಕುಮಾರ್ ಸೇರಿದಂತೆ ಮೂವರು ಸೇರಿದ್ದಾರೆ. 1994 ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದಕ್ಕಾಗಿ ಮ್ಯಾಥ್ಯೂಸ್ ಅವರನ್ನು ಆರೋಪಿಗಳಲ್ಲಿ ಒಬ್ಬರು ಎಂದು ಹೆಸರಿಸಲಾಯಿತು.

ಗುಜರಾತ್‌ನ ಮಾಜಿ ಡಿಜಿಪಿ ಆರ್‌ಬಿ ಶ್ರೀಕುಮಾರ್‌, ಕೇರಳದ ಇಬ್ಬರು ಮಾಜಿ ಪೊಲೀಸ್‌ ಅಧಿಕಾರಿಗಳಾದ ಎಸ್‌ ವಿಜಯನ್‌ ಮತ್ತು ತಂಬಿ ಎಸ್‌ ದುರ್ಗಾ ದತ್‌ ಮತ್ತು ನಿವೃತ್ತ ಗುಪ್ತಚರ ಅಧಿಕಾರಿ ಪಿ ಎಸ್‌ ಜಯಪ್ರಕಾಶ್‌ ಅವರಿಗೆ ಜಾಮೀನು ನೀಡಿದ್ದ ಹೈಕೋರ್ಟ್‌ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಈ ತೀರ್ಪು ಹೊರಬಿದ್ದಿದೆ.

ಇದನ್ನೂ ಓದಿ
Image
Bilkis Bano Case: ಅತ್ಯಾಚಾರವೆಸಗಿದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ ಬಿಲ್ಕಿಸ್ ಬಾನೋ
Image
ಕೊವಿಡ್ ಲಸಿಕೆಗೆ ಸಂಬಂಧಿಸಿದ ಸಾವಿಗೆ ನಾವು ಜವಾಬ್ದಾರರಲ್ಲ; ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರ ಸ್ಪಷ್ಟನೆ
Image
ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಬಗ್ಗೆ  ಕಾನೂನು ಸಚಿವ ಕಿರಣ್ ರಿಜಿಜು ಹೇಳಿಕೆಗೆ ಸುಪ್ರೀಂಕೋರ್ಟ್ ಆಕ್ಷೇಪ

ನವೆಂಬರ್ 28 ರಂದು, 1994 ರಲ್ಲಿ ಬೇಹುಗಾರಿಕೆ ಪ್ರಕರಣದಲ್ಲಿ ಪಿತೂರಿಯ ಭಾಗವೆಂದು ಆರೋಪಿಸಿ ಮಾಜಿ ಪೊಲೀಸ್ ಅಧಿಕಾರಿಗಳಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮೇಲ್ಮನವಿಗಳ ಸರಣಿಯ ಆದೇಶಗಳನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿತ್ತು. ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ಕಳುಹಿಸಿದರೆ ಬಂಧನದಿಂದ ರಕ್ಷಣೆ ನೀಡಬೇಕು ಎಂದು ಅರ್ಜಿದಾರರೊಬ್ಬರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಒತ್ತಾಯಿಸಿದ್ದಾರೆ.

ನವೆಂಬರ್‌ನಲ್ಲಿ, ಕೇರಳದ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಿಬಿ ಮ್ಯಾಥ್ಯೂಸ್‌ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಏನಿದು ಪ್ರಕರಣ?

ಇಸ್ರೊದ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು 1994 ರಲ್ಲಿ ಬೇಹುಗಾರಿಕೆ ಪ್ರಕರಣದಲ್ಲಿ ಸುಳ್ಳೇ ಸುಳ್ಳು ಆರೋಪ ಮಾಡಿ ಸಿಲುಕಿಸಲಾಯಿತು. ಇವರ ಮೇಲೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಗೌಪ್ಯ ದಾಖಲೆಗಳನ್ನು ವಿದೇಶಗಳಿಗೆ ವರ್ಗಾಯಿಸಿದ ಆರೋಪ ಹೊರಿಸಲಾಯಿತು. ನಾರಾಯಣನ್ ಮಾತ್ರವಲ್ಲದೆ ಇತಕ ಐವರು ಬೇಹುಗಾರಿಕೆ ಮತ್ತು ರಾಕೆಟ್ ತಂತ್ರಜ್ಞಾನವನ್ನು ವಿದೇಶಗಳಿಗೆ ವರ್ಗಾಯಿಸಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದರು. ಇದರಲ್ಲಿ ಇನ್ನೊಬ್ಬ ಇಸ್ರೋ ವಿಜ್ಞಾನಿ ಮತ್ತು ಇಬ್ಬರು ಮಾಲ್ಡೀವಿಯನ್ ಮಹಿಳೆಯರು ಸೇರಿದ್ದಾರೆ.ಸಿಬಿಐ ತನ್ನ ವಿರುದ್ಧದ ಆರೋಪಗಳನ್ನು ಸುಳ್ಳು ಎಂದು ತೀರ್ಮಾನಿಸುವ ಮೊದಲು ನಾರಾಯಣನ್ ಎರಡು ತಿಂಗಳು ಜೈಲಿನಲ್ಲಿ ಕಳೆಯಬೇಕಾಯಿತು. ಈ ಪ್ರಕರಣವನ್ನು ಮೊದಲು ರಾಜ್ಯ ಪೊಲೀಸರು ತನಿಖೆ ನಡೆಸಿ ನಂತರ ಸಿಬಿಐಗೆ ಹಸ್ತಾಂತರಿಸಿದ್ದರು. ಸಿಬಿಐ ಸುಳ್ಳು ಆರೋಪಗಳನ್ನು ಪತ್ತೆ ಹಚ್ಚಿ ನಂಬಿ ನಾರಾಯಣ್ ನಿರ್ದೋಷಿ ಎಂದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Fri, 2 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?