Gaganyaan Mission Test Flight: ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ, ಇಸ್ರೋ ಮತ್ತೊಂದು ಮೈಲಿಗಲ್ಲು

ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಮಾನವಸಹಿತ ಗಗನಯಾನ ಯೋಜನೆಯ ನೌಕೆ ಪ್ರಯೋಗ ಯಶಸ್ವಿಯಾಗಿದೆ.

Gaganyaan Mission Test Flight: ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ, ಇಸ್ರೋ ಮತ್ತೊಂದು ಮೈಲಿಗಲ್ಲು
ಗಗನಯಾನ
Follow us
|

Updated on:Oct 21, 2023 | 10:28 AM

ಅ.21ರ ಶನಿವಾರ ಬೆಳಗ್ಗೆ 10 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆ ಯಶಸ್ವಿಯಾಗಿ ನೆರವೇರಿದೆ (Gaganyaan Mission Test Flight). ಮಾನವಸಹಿತ ಗಗನಯಾನ ಯೋಜನೆಯ ನೌಕೆ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಇಸ್ರೋ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್​ ಮಾಡೆಲ್​​ ಒಳಗೊಂಡ ಎರಡೂ ಮಾಡೆಲ್​ಗಳನ್ನು ಹೊತ್ತು ರಾಕೆಟ್​​​​​ ಸಾಗಿದ್ದು ನೌಕೆಯನ್ನು ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಹಾರಿಸಲಾಗಿತ್ತು. ಸದ್ಯ ನೌಕೆ ಸಮುದ್ರಕ್ಕೆ ಬಿದ್ದಿದೆ. ಈ ಮೂಲಕ ನೌಕೆ ಸೇಫ್ ಲಾಂಡಿಂಗ್ ಮಾಡಿದೆ.

ಇಸ್ರೋದ ಮಹತ್ವಾಕಾಂಕ್ಷಿ ಗಗನಯಾನಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿಯಾಗಿ ನಡೆದಿದೆ. ರಾಕೆಟ್​​ನಿಂದ ಬೇರ್ಪಟ್ಟು ಕ್ರ್ಯೂ ಮಾಡೆಲ್ ಮತ್ತು ಕ್ರ್ಯೂ ಎಸ್ಕೇಪ್​ ಮಾಡೆಲ್​ಗಳು ಪ್ಯಾರಚೂಟ್ ಮೂಲಕ ಯಶಸ್ವಿಯಾಗಿ ಭೂಮಿಗೆ ಬಂದಿಳಿದಿವೆ. ವಿಜ್ಞಾನಿಗಳ ತಂಡದ ಶ್ರಮದಿಂದ ನೌಕೆ ಪ್ರಯೋಗ ಯಶಸ್ವಿಯಾಗಿದೆ. ಹೀಗಾಗಿ ವಿಜ್ಞಾನಿಗಳಿಗೆ ಇಸ್ರೋ ಮುಖ್ಯಸ್ಥ ಸೋಮನಾಥ್​​​​ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: Gaganyaan Mission Test Flight: ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ತಾತ್ಕಾಲಿಕ ಸ್ಥಗಿತ

ಈ ಪರೀಕ್ಷೆ ಕೇವಲ 9 ನಿಮಿಷಗಳಲ್ಲಿ ಮುಕ್ತಾಯಗೊಂಡಿದ್ದು, ರಾಕೆಟ್​​ನಿಂದ ಬೇರ್ಪಟ್ಟು ಕ್ರ್ಯೂ ಮಾಡೆಲ್ ಮತ್ತು ಕ್ರ್ಯೂ ಎಸ್ಕೇಪ್​ ಮಾಡೆಲ್​ಗಳು ಪ್ಯಾರಚೂಟ್ ಮೂಲಕ ಯಶಸ್ವಿಯಾಗಿ ಬಂಗಾಳಕೊಲ್ಲಿಯಲ್ಲಿ ಇಳಿದಿವೆ., ಅಲ್ಲಿಂದ ಅದನ್ನು ಹಡಗಿನ ಮೂಲಕ ವಶಕ್ಕೆ ಪಡೆಯಲಾಗಿದೆ.

ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ಇಂದು ಬೆಳಗ್ಗೆ 8 ಗಂಟೆಗೆ ಶೆಡ್ಯೂಲ್ ಆಗಿತ್ತು. ಆದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಕೆಲ ಕಾಲ ಮುಂದೂಡಿಕೆಯಾಗಿದ್ದು ಕೊನೆಗೆ ಬೆಳಗ್ಗೆ 10 ಗಂಟೆಗೆ ಉಡಾವಣೆ ಯಶಸ್ವಿಯಾಗಿದೆ. ಈ ಪ್ರಯೋಗದಿಂದ ನೌಕೆಯ ಸುರಕತೆ ಹಾಗೂ ತುರ್ತು ಸಂದರ್ಭಗಳಲ್ಲಿ ಗಗನ ಯಾತ್ರಿಕರು ಸುರಕ್ಷಿತವಾಗಿ ಲ್ಯಾಂಡಿಂಗ್ ಆಗುವ ಕುರಿತು ಇಸ್ರೋ ಅಧ್ಯಯನ ನಡೆಸಲು ಸಹಾಯಕವಾಗಿದೆ. ನೌಕೆಯನ್ನು ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಉಡಾವಣೆ ಮಾಡಿ, ಅಲ್ಲಿಂದ ಸಮುದ್ರಕ್ಕೆ ಬೀಳಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಮಾನವಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ಮುಂದುವರೆಸಿದೆ.

ದೇಶದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:06 am, Sat, 21 October 23

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು