AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಭಾರತದಲ್ಲಿ ಲಾಕ್​​ಡೌನ್ ಪರಿಸ್ಥಿತಿ ಉದ್ಭವವಾಗಲಿದೆ ಎಂದು ಕೆಲವು ಕಡೆಗಳಲ್ಲಿ ಎದ್ದಿರುವ ಕಳವಳಗಳನ್ನು ತಳ್ಳಿಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾರತದಲ್ಲಿ ಲಾಕ್‌ಡೌನ್ ಇರುವುದಿಲ್ಲ ಎಂದು ಭರವಸೆ ನೀಡಿದ್ದಾರೆ. "ಭಾರತದಲ್ಲಿ ಲಾಕ್‌ಡೌನ್ ಆಗುವುದಿಲ್ಲ ಎಂದು ನಾನು ಜನರಿಗೆ ಭರವಸೆ ನೀಡಲು ಬಯಸುತ್ತೇನೆ" ಎಂದು ಅವರು ಹೇಳಿದ್ದಾರೆ. "ಲಾಕ್‌ಡೌನ್ ಮತ್ತು ಇಂಧನದ ಕೊರತೆ ಇರುತ್ತದೆ ಎಂದು ಕೆಲವರು ಹೇಳುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಈ ಹೇಳಿಕೆಗಳು ಆಧಾರರಹಿತ ಮತ್ತು ದಾರಿತಪ್ಪಿಸುವಂತಿವೆ" ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
Nirmala Sitharaman
ಸುಷ್ಮಾ ಚಕ್ರೆ
|

Updated on: Mar 27, 2026 | 7:38 PM

Share

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಲಾಕ್‌ಡೌನ್ (Lockdown) ಆಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಳ್ಳಿಹಾಕಿದ್ದಾರೆ. ಆ ವದಂತಿಗಳು “ಆಧಾರರಹಿತ” ಎಂದು ಕರೆದಿದ್ದಾರೆ. ರಾಜಕಾರಣಿಗಳು ಮತ್ತು ಸಾರ್ವಜನಿಕರು ವಿನಾಕಾರಣ ಭಯವನ್ನು ಹರಡದಂತೆ ಅವರು ಒತ್ತಾಯಿಸಿದ್ದಾರೆ. “ಲಾಕ್​ಡೌನ್ ಪರಿಸ್ಥಿತಿ ಪಾಕಿಸ್ತಾನದಲ್ಲಿ ಉಂಟಾಗಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ದೇಶಾದ್ಯಂತ ಆಧಾರರಹಿತ ವದಂತಿಗಳನ್ನು ಹರಡಲಾಗುತ್ತಿದೆ. ಜನರ ಮನಸ್ಸಿನಲ್ಲಿ ಭಯ ಹುಟ್ಟಿಸಲು ಏನೇನೋ ಹೇಳಲಾಗುತ್ತಿದೆ. ಈ ಲಾಕ್‌ಡೌನ್ ಎಲ್ಲಿ ನಡೆಯುತ್ತಿದೆ? ಪಾಕಿಸ್ತಾನದಲ್ಲಿ ಲಾಕ್​ಡೌನ್ ನಡೆಯುತ್ತಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ

“ಬಾಂಗ್ಲಾದೇಶದ ಪರಿಸ್ಥಿತಿಯನ್ನು ನೋಡಿ. ಅವರು ಸಂಕಷ್ಟದಲ್ಲಿ ಬಳಲುತ್ತಿದ್ದಾರೆ ಎಂದು ಸೂಚಿಸಲು ನಾನು ಈ ಮಾತನ್ನು ಹೇಳುತ್ತಿಲ್ಲ. ವಾಸ್ತವಿಕತೆಯ ಹೋಲಿಕೆಯಾಗಿ ಮಾತ್ರ ಇದನ್ನು ಉಲ್ಲೇಖಿಸುತ್ತಿದ್ದೇನೆ. ಉತ್ತಮ ನೆರೆಯವರಾಗಿ, ನಮ್ಮ ಕಡೆಯಿಂದ ಸಾಧ್ಯವಾಗುವ ಯಾವುದೇ ಸಹಾಯವನ್ನು ನಾವು ನೀಡಲು ಸಿದ್ಧರಿದ್ದೇವೆ. ನಾವು ಉತ್ತಮ ನೆರೆಹೊರೆಯ ಸಂಬಂಧಗಳನ್ನು ಕಾಪಾಡಿಕೊಳ್ಳುತ್ತಿದ್ದೇವೆ ಮತ್ತು ಅಗತ್ಯವಿರುವಲ್ಲಿ ಸಹಾಯವನ್ನು ಒದಗಿಸುತ್ತಿದ್ದೇವೆ. ನಮ್ಮ ದೇಶದಲ್ಲಿ ಯಾವ ಸಮಸ್ಯೆಯೂ ಇಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us