ಪಂಚರಾಜ್ಯ ಚುನಾವಣೆ: ಭಾನುವಾರ ದಿನಾಂಕ ಘೋಷಣೆ ಸಾಧ್ಯತೆ
ಕೇಂದ್ರ ಚುನಾವಣಾ ಆಯೋಗವು (Election Commission of India)ಭಾನುವಾರದಂದು (ಅ.6) ಪಂಚರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ ಛತ್ತೀಸಗಢ್ನಲ್ಲಿ ಚುನಾವಣೆ ನಡೆಸುವ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದೆಹಲಿ, ಅ.6: ಕೇಂದ್ರ ಚುನಾವಣಾ ಆಯೋಗವು (Election Commission of India)ಭಾನುವಾರದಂದು (ಅ.6) ಪಂಚರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ, ಛತ್ತೀಸಗಢ್ನಲ್ಲಿ ಚುನಾವಣೆ ನಡೆಸುವ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸುವ ಸಾಧ್ಯತೆ ಇದೆ. ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮೀಜೋರಾಂ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಮತ್ತು ಛತ್ತೀಸಗಢ್ದಲ್ಲಿ ಎರಡು ಹಂತದ ಮತದಾನ ನಡೆಯುವ ಸಾಧ್ಯತೆ ಎಂದು ಮೂಲಗಳು ಹೇಳಿವೆ.
ಕೇಂದ್ರ ಚುನಾವಣಾ ಆಯೋಗವು ಇಂದು ಮಹತ್ವದ ಸಭೆಯನ್ನು ಕರೆದಿದೆ. ಪಂಚ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಅಂತಿಮಗೊಳಿಸುವುದು ಸಭೆಯ ಕಾರ್ಯಸೂಚಿಯಾಗಿದೆ. ಈಗಾಗಲೇ ಚುನಾವಣಾ ಆಯೋಗವು ತನ್ನ ಅಧಿಕಾರಿಗಳು ಈ ಐದು ರಾಜ್ಯಗಳಿಗೆ ಕಳುಹಿಸಲಾಗಿದೆ.
ಚುನಾವಣಾ ಆಯೋಗ ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ಛತ್ತೀಸ್‌ಗಢಕ್ಕೆ ಭೇಟಿ ನೀಡಿವೆ. ಗುರುವಾರದಂದು ಅಂದರೆ ಇಂದು ತೆಲಂಗಾಣಕ್ಕೆ ಭೇಟಿ ನೀಡಲಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೆಲವು ವರದಿಗಳು ತಿಳಿಸಿದೆ.
ಇದನ್ನೂ ಓದಿ: ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ಮೌನಮುರಿದ ರಾಹುಲ್ ಗಾಂಧಿ
ಛತ್ತೀಸ್‌ಗಢ ಹೊರತುಪಡಿಸಿ, ಮತ್ತೆ ಎಲ್ಲಾ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇನ್ನು ಭದ್ರತಾ ಕಾರಣಗಳಿಂದಾಗಿ, ಛತ್ತೀಸ್‌ಗಢ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆಯನ್ನು ನಡೆಸಲಾಗುವುದು. ಈ ಐದು ರಾಜ್ಯಗಳ ವಿಧಾಸಭೆ ಅವಧಿ ಜನವರಿಯಲ್ಲಿ ಕೊನೆಗೊಳ್ಳಲಿದೆ.
ಪ್ರಸ್ತುತ ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ತೆಲಂಗಾಣದಲ್ಲಿ ಕೆಸಿಆರ್ ಅವರ ಬಿಆರ್‌ಎಸ್ ಅಧಿಕಾರದಲ್ಲಿದೆ. ಮಿಜೋರಾಂನಲ್ಲಿ ಮಿಜೋ ನ್ಯಾಶನಲ್ ಫ್ರಂಟ್‌ನ ಝೋರಂತಂಗ ಸರ್ಕಾರ ಇದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:50 am, Fri, 6 October 23