ಯಾರೂ ಕಾಳಜಿ ವಹಿಸದಿರುವುದ ಬೇಸರದ ಸಂಗತಿ: ದೆಹಲಿಯ ಡಿಇಆರ್‌ಸಿ ಮುಖ್ಯಸ್ಥರ ನೇಮಕ ಕುರಿತು ಸುಪ್ರೀಂಕೋರ್ಟ್

ಎಲ್‌ಜಿ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ, ರಾಷ್ಟ್ರಪತಿಗಳು ಡಿಇಆರ್‌ಸಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ನ್ಯಾಯಾಲಯವು ಅಧ್ಯಕ್ಷರ ವಿರುದ್ಧ ತಡೆಯಾಜ್ಞೆ ನೀಡಬೇಕು ಅಥವಾ ಅವರನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಯಾರೂ ಕಾಳಜಿ ವಹಿಸದಿರುವುದ ಬೇಸರದ ಸಂಗತಿ: ದೆಹಲಿಯ ಡಿಇಆರ್‌ಸಿ ಮುಖ್ಯಸ್ಥರ ನೇಮಕ ಕುರಿತು ಸುಪ್ರೀಂಕೋರ್ಟ್
ಅರವಿಂದ ಕೇಜ್ರಿವಾಲ್- ಲೆಫ್ಟಿನೆಂಟ್ ಗವರ್ನರ್
Follow us
ರಶ್ಮಿ ಕಲ್ಲಕಟ್ಟ
|

Updated on: Jul 20, 2023 | 8:28 PM

ದೆಹಲಿ ಜುಲೈ 20: ದೆಹಲಿ ಸರ್ಕಾರ (Delhi) ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಮುಖಾಮುಖಿಯ ಕೇಂದ್ರಬಿಂದುವಾಗಿರುವ ಅಧಿಕಾರಿ ಮತ್ತು ನಗರದ ವಿದ್ಯುತ್ ನಿಯಂತ್ರಕ ಮುಖ್ಯಸ್ಥರ ನೇಮಕದ ಕುರಿತ ದೆಹಲಿ ಸುಗ್ರೀವಾಜ್ಞೆಯ(ordinance) ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ (Supreme Court), ಸುಗ್ರೀವಾಜ್ಞೆ ವಿಷಯವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿತು ಮತ್ತು ನೇಮಕಾತಿಯನ್ನು ಸ್ವತಃ ಮಾಡಲು ನಿರ್ಧರಿಸಿತು. ದೆಹಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (DERC) ಮುಖ್ಯಸ್ಥರ ನೇಮಕ ಬಗ್ಗೆ ಒಮ್ಮತಕ್ಕೆ ಬರಲು ಎಎಪಿ ಆಡಳಿತದ ದೆಹಲಿ ಸರ್ಕಾರ ಮತ್ತು ಎಲ್‌ಜಿ ವಿಫಲವಾಗಿದೆ ಎಂದು ಸುಪ್ರೀಂಕೋರ್ಟ್‌ಗೆ ಗುರುವಾರ ತಿಳಿಸಿದಾಗ ಸಂಸ್ಥೆ ಬಗ್ಗೆ ಯಾರೂ ಕಾಳಜಿ ವಹಿಸದಿರುವುದ ಬೇಸರದ ಸಂಗತಿ ಎಂದು ಪೀಠ, ನೇಮಕಾತಿಯನ್ನು ತಾವೇ ಮಾಡುವುದಾಗಿ ಹೇಳಿದೆ.

ಎಲ್‌ಜಿ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ, ರಾಷ್ಟ್ರಪತಿಗಳು ಡಿಇಆರ್‌ಸಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ನ್ಯಾಯಾಲಯವು ಅಧ್ಯಕ್ಷರ ವಿರುದ್ಧ ತಡೆಯಾಜ್ಞೆ ನೀಡಬೇಕು ಅಥವಾ ಅವರನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ದೆಹಲಿ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸುಗ್ರೀವಾಜ್ಞೆಯ ಆಧಾರದ ಮೇಲೆ ನೇಮಕಾತಿ ಮಾಡಲಾಗಿದೆ ಎಂದು ಸೂಚಿಸಿದ್ದು, ಇದನ್ನು ಪ್ರಶ್ನಿಸಲಾಗಿದೆ ಎಂದಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಸುಗ್ರೀವಾಜ್ಞೆಯ ಸಿಂಧುತ್ವವು ಸಾಂವಿಧಾನಿಕ ಪೀಠಕ್ಕೆ ಹೋಗುತ್ತದೆ. ಇದು ಒಂದು ಅಥವಾ ಎರಡು ತಿಂಗಳು ತೆಗೆದುಕೊಳ್ಳುತ್ತದೆ. ಡಿಇಆರ್‌ಸಿ ಅಲ್ಲಿಯವರೆಗೆ ಹೇಗೆ ಕಾರ್ಯನಿರ್ವಹಿಸದಿರುತ್ತದೆ ಎಂದು ಕೇಳಿದೆ.

ತಾತ್ಕಾಲಿಕ ನೇಮಕಾತಿ ಮತ್ತು ನಿಯಂತ್ರಕ ಮುಖ್ಯಸ್ಥರನ್ನು ಆಯ್ಕೆ ಮಾಡಬೇಕಾದ ಪಟ್ಟಿಯ ಬಗ್ಗೆ ನ್ಯಾಯಾಲಯವು ವಾದಗಳನ್ನು ಆಲಿಸಿತು.

ಕೇಂದ್ರದ ಪರ ವಾದ ಮಂಡಿಸುತ್ತಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೇರಿದಂತೆ ವಕೀಲರಿಗೆ ಸ್ವಲ್ಪ ಸಮಯ ಕಾಯುವಂತೆ ಮುಖ್ಯ ನ್ಯಾಯಮೂರ್ತಿಗಳು ಸೂಚಿಸಿದರು. “ನಾವು ನಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ನಾವು ಯಾವುದೇ ಪಟ್ಟಿಯನ್ನು ನೋಡುವುದಿಲ್ಲ” ಎಂದು ಸಿಜೆಐ ಚಂದ್ರಚೂಡ್ ಹೇಳಿದರು. ಆಗಸ್ಟ್ 4 ರಂದು ಮುಂದಿನ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಮಣಿಪುರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

ಜುಲೈ 17 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ರಾಜಕೀಯ ಜಗಳದಿಂದ ಬಿಟ್ಟು ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ