AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಖಾತೆ ಮೇಲೆ ಐಟಿ ಇಲಾಖೆ ಕ್ರಮಕ್ಕೆ ತಡೆ ತರಲು ಕಾಂಗ್ರೆಸ್ ವಿಫಲಯತ್ನ; ಕೈ ಪಾಳಯದ ಅರ್ಜಿ ತಿರಸ್ಕರಿಸಿದ ನ್ಯಾಯಮಂಡಳಿ

Income Tax Dept Action on Congress bank accounts: 210 ಕೋಟಿ ರುಪಾಯಿಯ ಟ್ಯಾಕ್ಸ್ ಡಿಮ್ಯಾಂಡ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳನ್ನು ಐಟಿ ಇಲಾಖೆ ಫ್ರೀಜ್ ಮಾಡಿದೆ. ತನ್ನ 65 ಕೋಟಿ ರೂ ಹಣವನ್ನು ಐಟಿ ಇಲಾಖೆ ಹೊರತೆಗೆದಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಹೈಕೋರ್ಟ್​ಗೆ ಹೋಗಲು ನಿರ್ಧರಿಸಿದೆ. ಅಲ್ಲಿಯವರೆಗೆ ಬ್ಯಾಂಕ್ ಖಾತೆಯ ಮೇಲೆ ಐಟಿ ಕ್ರಮ ಕೈಗೊಳ್ಳದಂತೆ ತಡೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಐಟಿ ಮೇಲ್ಮನವಿ ನ್ಯಾಯಮಂಡಳಿಗೆ ಮಾಡಿದ್ದ ಮನವಿ ತಿರಸ್ಕೃತಗೊಂಡಿದೆ.

ಬ್ಯಾಂಕ್ ಖಾತೆ ಮೇಲೆ ಐಟಿ ಇಲಾಖೆ ಕ್ರಮಕ್ಕೆ ತಡೆ ತರಲು ಕಾಂಗ್ರೆಸ್ ವಿಫಲಯತ್ನ; ಕೈ ಪಾಳಯದ ಅರ್ಜಿ ತಿರಸ್ಕರಿಸಿದ ನ್ಯಾಯಮಂಡಳಿ
ಕಾಂಗ್ರೆಸ್ ಪಕ್ಷ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 08, 2024 | 6:16 PM

ನವದೆಹಲಿ, ಮಾರ್ಚ್ 8: ಇನ್ನೂರು ಕೋಟಿ ರೂಗೂ ಹೆಚ್ಚು ಮೊತ್ತದ ತೆರಿಗೆ ಬಾಕಿ ಉಳಿಸಿಕೊಳ್ಳಲಾಗಿದೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ (IT dept) ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ಜಾರಿಗೊಳಿಸಿದೆ. ಇದಕ್ಕೆ ತಡೆ ತರಲು ಕಾಂಗ್ರೆಸ್ ವಿಫಲವಾಗಿದೆ. ಐಟಿ ಇಲಾಖೆ ಕ್ರಮಕ್ಕೆ ತಡೆ ನೀಡುವಂತೆ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಗೆ (ITAT- Income Tax Appellate Tribunal) ಕಾಂಗ್ರೆಸ್ ಮಾಡಿದ ಮನವಿ ಅರ್ಜಿ ತಿರಸ್ಕೃತಗೊಂಡಿದೆ. ತನ್ನ ಬ್ಯಾಂಕ್ ಖಾತೆಗಳನ್ನು ಐಟಿ ಇಲಾಖೆ ಸ್ಥಗಿತಗೊಳಿಸಿದೆ ಎಂದು ಫೆಬ್ರುವರಿ 16ರಂದು ಕಾಂಗ್ರೆಸ್ ಪಕ್ಷ ಹೇಳಿತ್ತು. ಈ ಬಗ್ಗೆ ಆದಾಯ ತೆರಿಗೆ ಇಲಾಖೆಯಿಂದ ಇನ್ನೂ ಅಧಿಕೃತ ಹೇಳಿಕೆ ಬಂದಿಲ್ಲ.

ಕಾಂಗ್ರೆಸ್ ಪಕ್ಷ 210 ಕೋಟಿ ರೂನಷ್ಟು ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಐಟಿ ಇಲಾಖೆ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ನೀಡಿತ್ತು. ಈ ಬಗ್ಗೆ ಪಕ್ಷದಿಂದ ಯಾವುದೇ ಸ್ಪಂದನೆ ಬರದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್​ನ ವಿವಿಧ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದೆ. ವರ್ಷಗಳಿಂದ ಆದಾಯ ತೆರಿಗೆ ಪಾವತಿಸದ ಯಾರದೇ ವಿರುದ್ಧ ಇಲಾಖೆ ತೆಗೆದುಕೊಳ್ಳುವ ಸಹಜ ಕ್ರಮ ಇದು ಎಂಬುದು ಇಲಾಖೆ ಮೂಲಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಜನರಿಗೆ ಒದ್ದ ದೆಹಲಿ ಪೊಲೀಸ್; ಅಧಿಕಾರಿ ಅಮಾನತು

‘ಒಬ್ಬ ಸಾಮಾನ್ಯ ಪ್ರಜೆ ಆದಾಯ ತೆರಿಗೆ ಬಾಕಿ ಪಾವತಿಸಲು ವಿಫಲವಾದರೆ ಐಟಿ ಇಲಾಖೆ ಏನು ಕ್ರಮ ಕೈಗೊಳ್ಳುತ್ತದೋ ಅದನ್ನೇ ಕಾಂಗ್ರೆಸ್ ಪಕ್ಷಕ್ಕೂ ಮಾಡಲಾಗಿದೆ,’ ಎಂಬುದು ಈ ಮೂಲಗಳ ಸ್ಪಷ್ಟನೆಯಾಗಿದೆ.

ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿರುವುದಲ್ಲದೇ ವಿವಿಧ ಬ್ಯಾಂಕುಗಳಿಂದ 65 ಕೋಟಿ ರೂ ಹಣವನ್ನು ವಿತ್​ಡ್ರಾ ಮಾಡಿದೆ. ಕೋರ್ಟ್​ನಲ್ಲಿ ಈ ಸಂಬಂಧ ಪ್ರಕರಣ ವಿಚಾರಣೆಯ ಹಂತದಲ್ಲಿದ್ದಾಗ್ಯೂ ಕಾನೂನು ಬಾಹಿರವಾಗಿ ಇಲಾಖೆ ಹಣ ಎತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

ಐಟಿ ಇಲಾಖೆ ವಿರುದ್ಧ ಉಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದಿದ್ದು, ಅದಕ್ಕೆ 10 ದಿನ ಕಾಲಾವಕಾಶ ಬೇಕಾಗುತ್ತದೆ. ಅಲ್ಲಿಯವರೆಗೆಯಾದರೂ ಆದಾಯ ತೆರಿಗೆ ಇಲಾಖೆಯ ಕ್ರಮಗಳಿಗೆ ತಡೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷವು ಐಟಿ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಮನವಿ ಮಾಡಿಕೊಂಡಿತ್ತು. ಆದರೆ, ತನಗೆ ಈ ತೀರ್ಪು ನೀಡುವ ಅಧಿಕಾರ ಇಲ್ಲ ಎಂದು ನ್ಯಾಯಮಂಡಳಿಯ ಜಡ್ಜ್ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:15 pm, Fri, 8 March 24

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು
VIDEO: ಚಮೀರ... ಚಮೀರ... ಚಮೀರ... ಇದು ದುಷ್ಮಂತನ ಕ್ಯಾಚ್
VIDEO: ಚಮೀರ... ಚಮೀರ... ಚಮೀರ... ಇದು ದುಷ್ಮಂತನ ಕ್ಯಾಚ್