SCO Summit 2022 ಇದು ಯುದ್ಧದ ಯುಗವಲ್ಲ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​​ ಪುಟಿನ್​​ಗೆ ಹೇಳಿದ ಪ್ರಧಾನಿ ಮೋದಿ

ಶೃಂಗಸಭೆಯು ಪ್ರಾದೇಶಿಕ ಭದ್ರತಾ ಸವಾಲುಗಳು, ವ್ಯಾಪಾರ ಮತ್ತು ಇಂಧನ ಪೂರೈಕೆಯನ್ನು ಉತ್ತೇಜಿಸುವ ಇತರ ವಿಷಯಗಳ ಕುರಿತು ಚರ್ಚಿಸಲು ಸಿದ್ಧವಾಗಿದೆ.

SCO Summit 2022 ಇದು ಯುದ್ಧದ ಯುಗವಲ್ಲ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​​ ಪುಟಿನ್​​ಗೆ ಹೇಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Sep 16, 2022 | 7:44 PM

ಸಮರ್‌ಕಂಡ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಉಲ್ಲೇಖಿಸಿ, ಇದು ಯುದ್ಧದ ಯುಗವಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​​ಗೆ (Vladimir Putin) ಹೇಳಿದ್ದಾರೆ. ಏತನ್ಮಧ್ಯೆ, ಉಜ್ಬೇಕಿಸ್ತಾನ್ ಶುಕ್ರವಾರ ಎಂಟು ಸದಸ್ಯರ ಎಸ್‌ಸಿಒ ರೊಟೇಟಿಂಗ್ ಅಧ್ಯಕ್ಷ ಸ್ಥಾನವನ್ನು ಭಾರತಕ್ಕೆ ಹಸ್ತಾಂತರಿಸಿದೆ. ಈ ಬಗ್ಗೆಉಜ್ಬೆಕ್ ವಿದೇಶಾಂಗ ಸಚಿವ ವ್ಲಾಡಿಮಿರ್ ನೊರೊವ್ ಟ್ವೀಟ್ ಮಾಡಿದ್ದು ಸಮರ್‌ಕಂಡ್‌ನಲ್ಲಿ ಶೃಂಗಸಭೆಯಲ್ಲಿ ಭಾರತವು 2023 ರಲ್ಲಿ ಸಂಸ್ಥೆಯ ಅಧ್ಯಕ್ಷರಾಗಿ ಮುಂದಿನ ಎಸ್‌ಸಿಒ ಶೃಂಗಸಭೆಯನ್ನು ಆಯೋಜಿಸುತ್ತದೆ. ಜವಾಬ್ದಾರಿಯುತ ಮಿಷನ್​​ನ ಅನುಷ್ಠಾನದಲ್ಲಿ ನಮ್ಮ ಕಾರ್ಯತಂತ್ರದ ಪಾಲುದಾರರಾದ ಭಾರತಕ್ಕೆ ಸಹಾಯ ಮಾಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದಿದ್ದಾರೆ. ಶುಕ್ರವಾರ ಎಸ್‌ಸಿಒ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಈ ವರ್ಷ ಭಾರತದ ಆರ್ಥಿಕತೆಯು ಶೇಕಡಾ 7.5 ರಷ್ಟು ಬೆಳವಣಿಗೆಯಾಗುವ ನಿರೀಕ್ಷೆಯಿದೆ. ಇದರಿಂದಾಗಿ ವಿಶ್ವದ ಅತಿದೊಡ್ಡ ಆರ್ಥಿಕತೆಗಳಲ್ಲಿ ಭಾರತ ದೊಡ್ಡ ಮಟ್ಟದ್ದಾಗಲಿದೆ ಎಂದಿದ್ದಾರೆ. ಉಜ್ಬೆಕಿಸ್ತಾನದ ಸಮರ್ಕಂಡ್ ನಗರದಲ್ಲಿ ಮಾಡಿದ ಭಾಷಣದಲ್ಲಿ, ಭಾರತವು ಉತ್ಪಾದನಾ ಕೇಂದ್ರವಾಗುವತ್ತ ಸಾಗುತ್ತಿದೆ ಎಂದು ಪ್ರಧಾನಿ ಹೇಳಿದರು. ಶಾಂಘೈ ಸಹಕಾರ ಸಂಘಟನೆ  ಶೃಂಗಸಭೆಯ ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಇತರರ ಉಪಸ್ಥಿತಿಯಲ್ಲಿ ಪ್ರಾರಂಭವಾಗಿದೆ.

ಶೃಂಗಸಭೆಯು ಪ್ರಾದೇಶಿಕ ಭದ್ರತಾ ಸವಾಲುಗಳು, ವ್ಯಾಪಾರ ಮತ್ತು ಇಂಧನ ಪೂರೈಕೆಯನ್ನು ಉತ್ತೇಜಿಸುವ ಇತರ ವಿಷಯಗಳ ಕುರಿತು ಚರ್ಚಿಸಲು ಸಿದ್ಧವಾಗಿದೆ. ಪ್ರಧಾನಿ ಮೋದಿ ಅವರು ಪುಟಿನ್ ಮತ್ತು ಉಜ್ಬೆಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಸೇರಿದಂತೆ ಇತರ ನಾಯಕರು ಸೇರಿದಂತೆ ಶೃಂಗಸಭೆಯ ವೇಳೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.

ಟರ್ಕಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಶಾಂಘೈ ಸಹಕಾರ ಶೃಂಗಸಭೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ವಿವಿಧ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅವರು ಸಮರ್ಕಂಡ್‌ನಲ್ಲಿ ಎಸ್​​ಸಿಒ ಶೃಂಗಸಭೆಯ ಬದಿಯಲ್ಲಿ ಅಧ್ಯಕ್ಷ ಎರ್ಡೊಗನ್ ಅವರೊಂದಿಗೆ ಮಾತುಕತೆ ನಡೆಸಿದರು. ಉಭಯ ನಾಯಕರು ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ಮಾರ್ಗಗಳನ್ನು ಚರ್ಚಿಸಿದರು ಎಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

Published On - 7:38 pm, Fri, 16 September 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ