AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಬಲ್​​ಪುರ: 5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ಮಹಿಳೆ

ಶುಭಾಂಗಿ ಯಾದವ್ ಎಂಬುವವರು ಜಬಲ್ಪುರದಲ್ಲಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಸಾಮಾನ್ಯವಾಗಿ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಈ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದೇ ಹೇಳುತ್ತಿದ್ದಾರೆ.

ಜಬಲ್​​ಪುರ: 5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ಮಹಿಳೆ
ಮಗು Image Credit source: India TV
ನಯನಾ ರಾಜೀವ್
|

Updated on: Sep 05, 2025 | 2:39 PM

Share

ಜಬಲ್ಪುರ, ಸೆಪ್ಟೆಂಬರ್ 05: ಶುಭಾಂಗಿ ಯಾದವ್ ಎಂಬುವವರು ಜಬಲ್ಪುರದಲ್ಲಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶು(Baby)ವಿಗೆ ಜನ್ಮ ನೀಡಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಸಾಮಾನ್ಯವಾಗಿ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದೇ ಹೇಳುತ್ತಿದ್ದಾರೆ.

ನವಜಾತ ಶಿಶುವಿನ ಗಾತ್ರವು ದೊಡ್ಡದಾಗಲು ಒಂದು ಕಾರಣವೆಂದರೆ ಗರ್ಭಾವಸ್ಥೆಯಲ್ಲಿ ಶುಭಾಂಗಿ ಸೇವಿಸಿದ ಪೌಷ್ಟಿಕ ಆಹಾರ. ತಾಯಿ ಯಾವುದೇ ವಿಶೇಷ ಆಹಾರವನ್ನು ತಿನ್ನಲಿಲ್ಲ.ಬೇಳೆ, ಅನ್ನ, ರೊಟ್ಟಿ ಮತ್ತು ತರಕಾರಿಗಳನ್ನು ಒಳಗೊಂಡಂತೆ ನಿಯಮಿತ ಊಟವನ್ನು ಸೇವಿಸಿದ್ದರು.ಆದರೆ ಆರೋಗ್ಯಕರ ಜೀವನಶೈಲಿಯು ಸಕಾರಾತ್ಮಕವಾಗಿ ಸಹಾಯ ಮಾಡಿದೆ.

ಅಂತಹ ಸಂದರ್ಭಗಳಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚು ಸವಾಲಿನದಾಗಿದೆ, ಆದರೆ ವೈದ್ಯರು ತಾಯಿ ಮತ್ತು ಮಗುವಿಗೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಶಸ್ತ್ರಚಿಕಿತ್ಸೆಯನ್ನು ತೀರಾ ಎಚ್ಚರಿಕೆಯಿಂದ ಮಾಡಿದ್ದಾರೆ.

ಮತ್ತಷ್ಟು ಓದಿ:  ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು

ಇದು ನಮಗೆ ಸಂತಸದ ಕ್ಷಣ, ಗಣೇಶ ಹಬ್ಬದಂದೇ ಹೆರಿಗೆಯಾಗಿದೆ ಮತ್ತು ಮಗುವಿನ ಜನನವು ತಮ್ಮ ಕುಟುಂಬದಲ್ಲಿ ಜನಿಸಿದ ಗಣೇಶ ದೇವರ ಆಶೀರ್ವಾದ ಎಂದು ಭಾವಿಸುವುದಾಗಿ ಶುಭಾಂಗಿ ಹೇಳಿದ್ದಾರೆ.

ಜುಲೈನಲ್ಲಿ ಇಂದೋರ್‌ನ ಪಿಸಿ ಸೇಥಿ ಸಿವಿಲ್ ಆಸ್ಪತ್ರೆಯಲ್ಲಿ 5.43 ಕಿಲೋಗ್ರಾಂಗಳಷ್ಟು ತೂಕದ ಆರೋಗ್ಯವಂತ ಹೆಣ್ಣು ಮಗು ಜನಿಸಿತ್ತು.ಇದು ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ದಾಖಲಾದ ಅತ್ಯಂತ ಭಾರವಾದ ನವಜಾತ ಶಿಶುವಾಗಿದೆ.ಈ ಜನನವು 2021 ರಲ್ಲಿ ಮಾಂಡ್ಲಾ ಜಿಲ್ಲೆಯಲ್ಲಿ ಜನಿಸಿದ 5.1 ಕೆಜಿ ಮಗುವಿನ ಹಿಂದಿನ ದಾಖಲೆಯನ್ನು ಮೀರಿಸಿದೆ.

ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಮಾಧವ್ ಹಸಾನಿ ಅವರು ವೈದ್ಯಕೀಯ ತಂಡವನ್ನು ಅಭಿನಂದಿಸಿದ್ದರು.ಜನನಿ ಸುರಕ್ಷಾ ಯೋಜನೆಯಂತಹ ಬಲಪಡಿಸಿದ ಸರ್ಕಾರಿ ಆರೋಗ್ಯ ಯೋಜನೆಗಳ ಯಶಸ್ಸನ್ನು ಎತ್ತಿ ತೋರಿಸಿದ್ದರು. ಇದು ಸರ್ಕಾರಿ ಆಸ್ಪತ್ರೆಗಳಲ್ಲಿ ಸುರಕ್ಷಿತ, ಉತ್ತಮ ಗುಣಮಟ್ಟದ ಹೆರಿಗೆ ಆರೈಕೆಯನ್ನು ಪಡೆಯಲು ಉತ್ತಮವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ