ಆಂಧ್ರಪ್ರದೇಶ: ನಡುರಸ್ತೆಯಲ್ಲಿ ಜಗನ್ ರೆಡ್ಡಿ ಪಕ್ಷದ ನಾಯಕನನ್ನು ಕೊಚ್ಚಿ ಕೊಂದ ದುಷ್ಕರ್ಮಿ
ಆಂಧ್ರಪ್ರದೇಶದ ನಡುರಸ್ತೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ನಾಯಕನ ಶವ ಪತ್ತೆಯಾಗಿದೆ. ಯುವಕನೊಬ್ಬ ರಶೀದ್ ಎಂಬಾತನನ್ನು ಮಚ್ಚಿನಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ನ ನಾಯಕನೊಬ್ಬನನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ರಶೀದ್ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿದೆ, ಎರಡೂ ಕೈಗಳು ತುಂಡಾಗಿದ್ದು, ಕುತ್ತಿಗೆಗೆ ಆಳವಾದ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಲ್ನಾಡು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕಂಚಿ ಶ್ರೀನಿವಾಸ ರಾವ್ ಇಂಡಿಯಾ ಟುಡೇ ಜತೆ ಮಾತನಾಡಿದ್ದು, ವೈಯಕ್ತಿಕ ದ್ವೇಷವೇ ಈ ಭೀಕರ ಹತ್ಯೆಯ ಹಿಂದಿನ ಉದ್ದೇಶ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.
ಮತ್ತಷ್ಟು ಓದಿ: ತ್ರಿವಳಿ ಕೊಲೆ: ಪ್ರೇಯಸಿ, ಆಕೆಯ ಸಹೋದರಿ, ತಂದೆಯ ಕತ್ತು ಸೀಳಿದ ಹುಚ್ಚು ಪ್ರೇಮಿ, ತಾಯಿ ಬಚಾವ್
ಈ ಘಟನೆಯಲ್ಲಿ ಯಾವುದೇ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ಆದರೆ ಜನರು ಈ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಳ್ಳಬೇಕು ಮತ್ತು ರಾಜ್ಯದಲ್ಲಿ ಇಂತಹ ಹಿಂಸಾಚಾರಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಈ ಪ್ರದೇಶದಲ್ಲಿ ಹೆಚ್ಚು ಜನ ಒಂದೆಡೆ ಸೇರದಂತೆ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ. ಉದ್ವಿಗ್ನತೆಯನ್ನು ಉಂಟುಮಾಡುವ ಅಥವಾ ಪ್ರದೇಶದ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




