ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ(Jagan Mohan Reddy) ಸಹೋದರಿ ವೈಎಸ್ ಶರ್ಮಿಳಾ( YS Sharmila) ಜನವರಿ 4 ರಂದು ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವೈಎಸ್ ಶರ್ಮಿಳಾ ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕರು ಮತ್ತು ಅಧ್ಯಕ್ಷರೂ ಆಗಿದ್ದಾರೆ.
ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪ್ರಾಬಲ್ಯವನ್ನು ಕೊನೆಗೊಳಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಏತನ್ಮಧ್ಯೆ, ವೈಎಸ್ ಶರ್ಮಿಳಾ ಅವರು ಇಂದು ಬೆಳಗ್ಗೆ 11 ಗಂಟೆಗೆ ಪಕ್ಷದ ಎಲ್ಲಾ ನಾಯಕರೊಂದಿಗೆ ಸಭೆ ಕರೆದಿದ್ದು, ಇದರಲ್ಲಿ ಪಕ್ಷ ವಿಲೀನ ಮತ್ತು ಮುಂದಿನ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತೆಲಂಗಾಣದಲ್ಲಿ ಇತ್ತೀಚೆಗಷ್ಟೇ ಮುಕ್ತಾಯವಾದ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ವೈಎಸ್ ಶರ್ಮಿಳಾ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಒತ್ತಿ ಹೇಳಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಅವಕಾಶವಿರುವುದರಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದೇನೆ ಎಂದು ಅವರು ಚುನಾವಣೆಗೂ ಮುನ್ನ ಹೇಳಿದ್ದರು.
ಮತ್ತಷ್ಟು ಓದಿ: Andhra Capital- ವಿಶಾಖಪಟ್ಟಣಂ ಆಂಧ್ರ ರಾಜಧಾನಿಯಾಗಲಿದೆ: ಸಿಎಂ ಜಗನ್ಮೋಹನ್ ರೆಡ್ಡಿ
ಕೆಸಿಆರ್ ಅವರು ತಮ್ಮ 9 ವರ್ಷಗಳ ಅಧಿಕಾರಾವಧಿಯಲ್ಲಿ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಹಾಗಾಗಿ ನಾನು ಕಾಂಗ್ರೆಸ್ಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:49 am, Tue, 2 January 24