ತಿರುಮಲ ಭೇಟಿ ಮುನ್ನ ನಿಷೇಧಾಜ್ಞೆ ಧಿಕ್ಕರಿಸದಂತೆ ಜಗನ್ ರೆಡ್ಡಿಗೆ ಪೊಲೀಸ್ ನೋಟಿಸ್ ಸಾಧ್ಯತೆ: ವರದಿ

ಹಿಂದಿನ ವೈಎಸ್‌ಸಿಆರ್‌ಪಿ ಸರ್ಕಾರವು ತಿರುಪತಿ ಲಡ್ಡುಗಳಲ್ಲಿ ಅಶುದ್ಧ ಪದಾರ್ಥಗಳನ್ನು ಬಳಸಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ‘ಪಾಪ’ಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಮಾಜಿ ಮುಖ್ಯಮಂತ್ರಿ ರೆಡ್ಡಿ ಅವರು ರಾಜ್ಯಾದ್ಯಂತ ನಡೆಸುತ್ತಿರುವ ಧಾರ್ಮಿಕ ವಿಧಿಗಳ ಭಾಗವಾಗಿ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಲು ಯೋಜಿಸಿದ್ದಾರೆ.

ತಿರುಮಲ ಭೇಟಿ ಮುನ್ನ ನಿಷೇಧಾಜ್ಞೆ ಧಿಕ್ಕರಿಸದಂತೆ ಜಗನ್ ರೆಡ್ಡಿಗೆ ಪೊಲೀಸ್ ನೋಟಿಸ್ ಸಾಧ್ಯತೆ: ವರದಿ
ಜಗನ್ ರೆಡ್ಡಿ
Follow us
ರಶ್ಮಿ ಕಲ್ಲಕಟ್ಟ
|

Updated on:Sep 27, 2024 | 2:15 PM

ದೆಹಲಿ ಸೆಪ್ಟೆಂಬರ್ 27: ಶುಕ್ರವಾರ ತಿರುಮಲ ಬೆಟ್ಟದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ(Venkateswara Swamy temple) ಭೇಟಿ ನೀಡುವ ಮುನ್ನ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy ಅವರಿಗೆ ನಿಷೇಧಾಜ್ಞೆ ಧಿಕ್ಕರಿಸದಂತೆ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪೊಲೀಸ್ ಕಾಯಿದೆಯ ಸೆಕ್ಷನ್ 30 ಅನ್ನು ಉಲ್ಲಂಘಿಸದಂತೆ ಪಕ್ಷದ ಹಲವಾರು ಸದಸ್ಯರಿಗೆ ಜಿಲ್ಲಾ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸೆಕ್ಷನ್ 30 ಸಾರ್ವಜನಿಕ ಸಭೆಗಳು ಮತ್ತು ಮೆರವಣಿಗೆಗಳನ್ನು ನಿಯಂತ್ರಿಸುತ್ತದೆ. ಪ್ರಸಿದ್ಧ ತಿರುಪತಿ ಲಡ್ಡುಗಳಲ್ಲಿ ಪ್ರಾಣಿ ಕೊಬ್ಬು ಬಳಕೆಯ ಬಗ್ಗೆ ವಿವಾದಗಳು ಹೊರಹೊಮ್ಮಿದ ನಂತರ ತಿರುಪತಿ ದೇವಸ್ಥಾನದ ನಿಷೇಧಾಜ್ಞೆ ವಿಧಿಸಲಾಗಿದೆ.

ಜಗನ್ ಮೋಹನ್ ರೆಡ್ಡಿ ಅವರು ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ, ಒಗ್ಗಟ್ಟಿನ ಪ್ರದರ್ಶನವಾಗಿ ತಿರುಪತಿಯ ಸ್ಥಳಗಳಲ್ಲಿ ಪಕ್ಷದ ಸದಸ್ಯರನ್ನು ಸೇರುವಂತೆ ಆನ್‌ಲೈನ್‌ನಲ್ಲಿ ಸಂದೇಶಗಳು ಹರಡುತ್ತಿರುವ ಕಾರಣ ಪೊಲೀಸರು ಅವರಿಗೆ ನೋಟಿಸ್ ನೀಡಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

“ತಿರುಪತಿಯ ಕೆಲವು ಸ್ಥಳಗಳಲ್ಲಿ ಜನರು ಸೇರುವಂತೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹಲವಾರು ಪೋಸ್ಟ್‌ಗಳನ್ನು ನಾವು ಗಮನಿಸಿದ್ದೇವೆ. ಈ ನೋಟಿಸ್‌ಗಳು ಆದೇಶಗಳನ್ನು ಧಿಕ್ಕರಿಸದಂತೆ ಎಚ್ಚರಿಕೆ ನೀಡುವುದೇ ಹೊರತು ಬೇರೇನೂ ಅಲ್ಲ ಎಂದು ಪೊಲೀಸರೊಬ್ಬರು ಪಿಟಿಐಗೆ ಹೇಳಿದ್ದಾರೆ.

ಹಿಂದಿನ ವೈಎಸ್‌ಸಿಆರ್‌ಪಿ ಸರ್ಕಾರವು ತಿರುಪತಿ ಲಡ್ಡುಗಳಲ್ಲಿ ಅಶುದ್ಧ ಪದಾರ್ಥಗಳನ್ನು ಬಳಸಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ‘ಪಾಪ’ಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಮಾಜಿ ಮುಖ್ಯಮಂತ್ರಿ ರೆಡ್ಡಿ ಅವರು ರಾಜ್ಯಾದ್ಯಂತ ನಡೆಸುತ್ತಿರುವ ಧಾರ್ಮಿಕ ವಿಧಿಗಳ ಭಾಗವಾಗಿ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಲು ಯೋಜಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಮಾಜಿ ಅಧ್ಯಕ್ಷ ಬಿ ಕರುಣಾಕರ್ ರೆಡ್ಡಿ, ತನಗೆ ಮತ್ತು ಪಕ್ಷದ ಇತರ ಹಲವು ಮುಖಂಡರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ಏಳು ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ನನಗೆ ಅರ್ಹತೆ ಇದೆ ಎಂದು ಹೇಳಿದರು.

‘ನಮ್ಮ ಕೆಲ ನಾಯಕರಿಗೆ ಮಧ್ಯರಾತ್ರಿಯಲ್ಲಿ ಹೊರಗೆ ಬರದಂತೆ ನೋಟಿಸ್‌ ನೀಡಲಾಗಿತ್ತು. ಹಬ್ಬ ಹರಿದಿನಗಳಲ್ಲಿ ವೆಂಕಟೇಶ್ವರ ಸ್ವಾಮಿಗೆ ಹಲವು ಬಾರಿ ರೇಷ್ಮೆ ವಸ್ತ್ರವನ್ನು ಅರ್ಪಿಸಿದ ಕಾರಣಕ್ಕೆ ಅಧಿಕಾರಿಗಳು ಜಗನ್ ಮೋಹನ್ ರೆಡ್ಡಿ ಅವರು ಪ್ರಕಟಣೆ ನೀಡಬೇಕು ಎಂದು ಹೇಳಿದ್ದು ಹುಚ್ಚುತನವಲ್ಲದೆ ಮತ್ತೇನಲ್ಲ ಎಂದು ರೆಡ್ಡಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ವೈಎಸ್‌ಆರ್‌ಸಿಪಿ ಪ್ರಧಾನ ಕಾರ್ಯದರ್ಶಿ ಗಡಿಕೋಟ ಶ್ರೀಕಾಂತ್ ರೆಡ್ಡಿ ಮಾತನಾಡಿ, ಅಣ್ಣಮಯ್ಯ ಜಿಲ್ಲೆಯ ರಾಯಚೋಟಿಯಲ್ಲಿ ಪಕ್ಷದ ಮುಖಂಡರಿಗೂ ಹೊರಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ತಮ್ಮ ನಂಬಿಕೆಯನ್ನು ಘೋಷಿಸಬೇಕೆಂಬ ಆಡಳಿತಾರೂಢ ಎನ್‌ಡಿಎ ಸರ್ಕಾರದ ಬೇಡಿಕೆಯಿಂದಾಗಿ ವೈಎಸ್‌ಆರ್‌ಸಿಪಿ ಮುಖ್ಯಸ್ಥರು ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ಭೇಟಿ ನೀಡಿದ್ದು ವಿವಾದಕ್ಕೆ ಸಿಲುಕಿದೆ.

ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ ಹಿನ್ನೆಲೆ ಪ್ರಸಾದದ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡ ರಾಮ ಮಂದಿರ

ಮಾಜಿ ಅಧಿಕಾರಿಯೊಬ್ಬರು, ನಿಯಮಗಳ ಪ್ರಕಾರ, ವಿದೇಶಿಗರು ಮತ್ತು ಹಿಂದೂಯೇತರರು ದೇಗುಲವನ್ನು ಪ್ರವೇಶಿಸುವ ಮೊದಲು ಪ್ರಧಾನ ದೇವತೆಯಲ್ಲಿ ತಮ್ಮ ನಂಬಿಕೆಯನ್ನು ಘೋಷಿಸಬೇಕು. ಜಗನ್ ಮೋಹನ್ ರೆಡ್ಡಿ ಇಂದು ಸಂಜೆ 4 ಗಂಟೆಗೆ ಗನ್ನವರಂ ವಿಮಾನ ನಿಲ್ದಾಣದಿಂದ ರೇಣಿಗುಂಟಕ್ಕೆ ಹೊರಟು ಸಂಜೆ 7 ಗಂಟೆಗೆ ತಿರುಮಲ ತಲುಪುವ ನಿರೀಕ್ಷೆಯಿದೆ. ಅವರು ಶನಿವಾರ ಬೆಳಗ್ಗೆ 10.20ಕ್ಕೆ ತಿರುಮಲದಲ್ಲಿರುವ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಲು ತೆರಳಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Fri, 27 September 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!