ಜಗನ್​​​​ಮೋಹನ್​​​ ರೆಡ್ಡಿ ಪಕ್ಷದ ಕಾರ್ಯಕರ್ತರಿಂದ ಚಂದ್ರಬಾಬು ನಾಯ್ಡು ಪಕ್ಷದ ಮುಖಂಡನ ಬರ್ಬರ ಹತ್ಯೆ

ಆಂಧ್ರಪ್ರದೇಶದ ರಾಜಕೀಯದಲ್ಲಿ ಭಾರೀ ತಲ್ಲಣ ಉಂಟಾಗಿದೆ. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಪಕ್ಷ ಮುಖಂಡನನ್ನು ಜಗನ್​​​​ಮೋಹನ್​​​ ರೆಡ್ಡಿ ಪಕ್ಷದ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ. ಈ ಘಟನೆ ಭಾನುವಾರ ರಾತ್ರಿ ನಡೆದಿದೆ. ಇದೀಗ ಈ ಬಗ್ಗೆ ಪೊಲೀಸ್​​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಜಗನ್​​​​ಮೋಹನ್​​​ ರೆಡ್ಡಿ ಪಕ್ಷದ ಕಾರ್ಯಕರ್ತರಿಂದ ಚಂದ್ರಬಾಬು ನಾಯ್ಡು ಪಕ್ಷದ ಮುಖಂಡನ ಬರ್ಬರ ಹತ್ಯೆ
Follow us
|

Updated on:Jun 10, 2024 | 4:43 PM

ಕರ್ನೂಲ್, ಜೂ.10: ಆಂಧ್ರಪ್ರದೇಶ ವಿಧಾನ ಸಭೆ ಹಾಗೂ ಲೋಕಸಭೆ ಚುನಾವಣೆ ನಂತರ ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ನಡುವೆ ರಾಜಕೀಯ ದ್ವೇಷಕ್ಕೆ ಕಾರಣವಾಗಿದೆ. ಇದೀಗ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ಮಂಡಲದ ಬೊಮ್ಮಿರೆಡ್ಡಿಪಲ್ಲೆ ಗ್ರಾಮದಲ್ಲಿ ಭಾನುವಾರ (ಜೂ.9) ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷದ (TDP) ಬೆಂಬಲಿಗನನ್ನು ಜಗನ್​​​​ಮಹೋನ್​​​ ರೆಡ್ಡಿ ಅವರ ವೈಎಸ್‌ಆರ್‌ಸಿಪಿ ಪಕ್ಷದ ಕಾರ್ಯಕರ್ತರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತರನ್ನು ಗೌರಿನಾಥ್ ಚೌಧರಿ ಎಂದು ಗುರುತಿಸಲಾಗಿದೆ.

ಬೊಮ್ಮಿರೆಡ್ಡಿಪಲ್ಲೆ ಗ್ರಾಮ ಈ ಘಟನೆ ನಡೆದಿದೆ. ಈ ಹತ್ಯೆಯನ್ನು ಮಾಡಿದವರು ವೈಎಸ್‌ಆರ್‌ಸಿಪಿ ಪಕ್ಷದ ಪಮಯ್ಯ ಮತ್ತು ರಾಮಕೃಷ್ಣ ಎಂದು ಹೇಳಲಾಗಿದೆ. ಕುಡಗೋಲು ಮತ್ತು ಇತರ ಮಾರಕಾಯುಧಗಳಿಂದ ಸಂಜೆಯ ವೇಳೆ ಚೌಧರಿ ಮೇಲೆ ದಾಳಿ ಮಾಡಿದ್ದಾರೆ. ಟಿಡಿಪಿ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಫಲಿತಾಂಶದ ದಿನದಂದು ಈ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ನಂತರ ಈ ಉದ್ವಿಗ್ನತೆ ಉತ್ತುಂಗಕ್ಕೇರಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು

ಇನ್ನು ಕೊಲೆಗಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತೆಲುಗುದೇಶಂ ಕಾರ್ಯಕರ್ತರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಪೊಲೀಸರು ಇನ್ನು ಆರೋಪಿಗಳ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಜಿಲ್ಲಾ ಎಸ್ಪಿ ಜಿ.ಕೃಷ್ಣಕಾಂತ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ವೆಲ್ದುರ್ತಿ ವೃತ್ತ ನಿರೀಕ್ಷಕರು ವಿವರಗಳನ್ನು ಸಂಗ್ರಹಿಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:42 pm, Mon, 10 June 24

ತಾಜಾ ಸುದ್ದಿ
ದರ್ಶನ್​ಗೆ ಕೌನ್ಸಲಿಂಗ್ ಅಗತ್ಯವಿದೆ ಎಂದು ಜನವರಿಯಲ್ಲೇ ಹೇಳಿದ್ದೆ; ವೈದ್ಯೆ
ದರ್ಶನ್​ಗೆ ಕೌನ್ಸಲಿಂಗ್ ಅಗತ್ಯವಿದೆ ಎಂದು ಜನವರಿಯಲ್ಲೇ ಹೇಳಿದ್ದೆ; ವೈದ್ಯೆ
ತುಳಸಿ ಗಿಡಕ್ಕೆ ಅತಿಯಾಗಿ ನೀರು ಹಾಕುವುದು ಕೂಡ ಶುಭವಲ್ಲ ಏಕೆ? ವಿಡಿಯೋ ನೋಡಿ
ತುಳಸಿ ಗಿಡಕ್ಕೆ ಅತಿಯಾಗಿ ನೀರು ಹಾಕುವುದು ಕೂಡ ಶುಭವಲ್ಲ ಏಕೆ? ವಿಡಿಯೋ ನೋಡಿ
Daily Horoscope: ಭೂಮಿಯ ಖರೀದಿಯ ಬಗ್ಗೆ ಬಂಧುಗಳಿಂದ ಒತ್ತಡ ಬರಬಹುದು
Daily Horoscope: ಭೂಮಿಯ ಖರೀದಿಯ ಬಗ್ಗೆ ಬಂಧುಗಳಿಂದ ಒತ್ತಡ ಬರಬಹುದು
ರಾಜ್ಯದ ವರಮಾನ ಹೆಚ್ಚಿಸಲು ವಿದೇಶಿ ಕಂಪನಿಗಳಿಂದ ಸಲಹೆ: ಬಿಜೆಪಿ ಕಿಡಿ
ರಾಜ್ಯದ ವರಮಾನ ಹೆಚ್ಚಿಸಲು ವಿದೇಶಿ ಕಂಪನಿಗಳಿಂದ ಸಲಹೆ: ಬಿಜೆಪಿ ಕಿಡಿ
ಒಂದೇ ಒಂದು ಅವಕಾಶ ಕೊಡಿ ಎಂದು ಪೊಲೀಸರ ಬಳಿ ಬೇಡಿಕೆ ಇಟ್ಟ ಪ್ರಜ್ವಲ್ ರೇವಣ್ಣ!
ಒಂದೇ ಒಂದು ಅವಕಾಶ ಕೊಡಿ ಎಂದು ಪೊಲೀಸರ ಬಳಿ ಬೇಡಿಕೆ ಇಟ್ಟ ಪ್ರಜ್ವಲ್ ರೇವಣ್ಣ!
ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ..
ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ..
ಅಂತಾರಾಷ್ಟ್ರೀಯ ಯೋಗ ದಿನ; ದಟ್ಟ ಹಿಮದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು
ಅಂತಾರಾಷ್ಟ್ರೀಯ ಯೋಗ ದಿನ; ದಟ್ಟ ಹಿಮದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು
ದರ್ಶನ್-ಪ್ರೇಮ್ ಸಿನಿಮಾ ಆರಂಭವಾಗುತ್ತ? ಅಥವಾ ನಿಲ್ಲುತ್ತಾ?
ದರ್ಶನ್-ಪ್ರೇಮ್ ಸಿನಿಮಾ ಆರಂಭವಾಗುತ್ತ? ಅಥವಾ ನಿಲ್ಲುತ್ತಾ?
‘ದರ್ಶನ್​ ಒಳ್ಳೆ ವ್ಯಕ್ತಿ, ಜೊತೆಗಾರರಿಂದ ಏನೋ ಮೋಸ ನಡೆದಿದೆ’: ಶ್ರೀನಿವಾಸ್​
‘ದರ್ಶನ್​ ಒಳ್ಳೆ ವ್ಯಕ್ತಿ, ಜೊತೆಗಾರರಿಂದ ಏನೋ ಮೋಸ ನಡೆದಿದೆ’: ಶ್ರೀನಿವಾಸ್​
ಮೊಟ್ಟೆಯ ಮೇಲೆ 60 ಯೋಗಾಸನ ಭಂಗಿ; ಬೆರಗು ಮೂಡಿಸಿದ ಕಲಾವಿದನ ಕೈಚಳಕ
ಮೊಟ್ಟೆಯ ಮೇಲೆ 60 ಯೋಗಾಸನ ಭಂಗಿ; ಬೆರಗು ಮೂಡಿಸಿದ ಕಲಾವಿದನ ಕೈಚಳಕ