ಜಗದೀಪ್ ಧನಕರ್ ಬಿಜೆಪಿ ಸರ್ಕಾರದ ವಕ್ತಾರ; ಅವಿಶ್ವಾಸ ನಿರ್ಣಯಕ್ಕೆ ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಬಿಜೆಪಿ ಸರ್ಕಾರದ ವಕ್ತಾರ, ನಮ್ಮ ವಾದಕ್ಕೆ ಪ್ರತಿ ಬಾರಿಯೂ ಅಡ್ಡಪಡಿಸುತ್ತಾರೆ ಎಂದು ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಜಗದೀಪ್ ಧನಕರ್ ಅವರ ಕ್ರಮಗಳು ಭಾರತದ ಘನತೆಗೆ ಧಕ್ಕೆ ತಂದಿವೆ. ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಯಾವುದೇ ವೈಯಕ್ತಿಕ ಹೋರಾಟ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಜಗದೀಪ್ ಧನಕರ್ ಬಿಜೆಪಿ ಸರ್ಕಾರದ ವಕ್ತಾರ; ಅವಿಶ್ವಾಸ ನಿರ್ಣಯಕ್ಕೆ ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ
ಮಲ್ಲಿಕಾರ್ಜುನ ಖರ್ಗೆ
Follow us
ಸುಷ್ಮಾ ಚಕ್ರೆ
|

Updated on:Dec 11, 2024 | 8:26 PM

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ತಮ್ಮ ಕ್ರಮವನ್ನು ಇಂದು ಇಂಡಿಯಾ ಬ್ಲಾಕ್ ನಾಯಕರು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭಾ ಅಧ್ಯಕ್ಷ ರಾಜ್ಯಸಭೆಯ ಕಲಾಪಗಳಿಗೆ ಅಡ್ಡಿಯಾಗಿದ್ದಾರೆ ಮತ್ತು ಅವರ ನಡವಳಿಕೆಯಿಂದಾಗಿ ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಬಲವಂತವಾಗಿ ಈ ಹೆಜ್ಜೆ ಇಡಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಜಗದೀಪ್ ಧನಕರ್ ಅವರನ್ನು ‘ಸರ್ಕಾರದ ವಕ್ತಾರ’ ಎಂದು ಕರೆದಿದ್ದಾರೆ.

ಇಂದು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಜಗದೀಪ್ ಧನಕರ್ ಅವರ ಕ್ರಮಗಳು ಭಾರತದ ಘನತೆಗೆ ಧಕ್ಕೆ ತಂದಿವೆ. ನಮಗೆ ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಯಾವುದೇ ವೈಯಕ್ತಿಕ ಆಕ್ರೋಶವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ವಿರುದ್ಧ ವಿಪಕ್ಷಗಳ ಸಂಸದರಿಂದ ಅವಿಶ್ವಾಸ ನಿರ್ಣಯ ಮಂಡನೆ

ಜಗದೀಪ್ ಧನಕರ್ ಅವರನ್ನು “ಸರ್ಕಾರದ ಅತಿದೊಡ್ಡ ವಕ್ತಾರ” ಎಂದು ಟೀಕಿಸಿದ ಖರ್ಗೆ, ಧನಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸೂಚನೆಯ ಬಗ್ಗೆ ಮಾತನಾಡುವಾಗ ರಾಜ್ಯಸಭೆಯಲ್ಲಿ ಅಡೆತಡೆಗಳಿಗೆ ಅಧ್ಯಕ್ಷರೇ ದೊಡ್ಡ ಕಾರಣ ಎಂದು ಹೇಳಿದರು.

ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ರಾಜ್ಯಸಭೆಯಲ್ಲಿ ಪ್ರಸ್ತಾವನೆಯನ್ನು ತರಲು ಇಂಡಿಯಾ ಬ್ಲಾಕ್ ನೋಟಿಸ್ ಸಲ್ಲಿಸಿದೆ. ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ಪದಚ್ಯುತಿಗೆ ಪ್ರಸ್ತಾವನೆ ತರಲು ನೋಟಿಸ್‌ ಮಂಡನೆಯಾಗುತ್ತಿರುವುದು ಇದೇ ಮೊದಲು. 14 ದಿನಗಳ ನೋಟಿಸ್ ನೀಡಬೇಕಾಗಿದ್ದು, ಪ್ರಸ್ತಾವನೆಯನ್ನು ಕೈಗೆತ್ತಿಕೊಳ್ಳುವ ಮೊದಲು ಉಪಸಭಾಪತಿಯಿಂದ ಅನುಮೋದನೆ ಪಡೆಯಬೇಕು.

ಇದನ್ನೂ ಓದಿ: ಜಗದೀಪ್ ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ವಿಪಕ್ಷಗಳ ವಿರುದ್ಧ ಸಚಿವ ಕಿರಣ್ ರಿಜಿಜು ವಾಗ್ದಾಳಿ

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ರಾಜ್ಯಸಭೆಯಲ್ಲಿ 121 ಸದಸ್ಯರನ್ನು ಹೊಂದಿದ್ದರೆ, ವಿರೋಧ ಪಕ್ಷಗಳು 86 ಸದಸ್ಯರನ್ನು ಹೊಂದಿವೆ. ಅಲಿಪ್ತ ಪಕ್ಷಗಳಾದ ವೈಎಸ್‌ಆರ್‌ಸಿಪಿ, ಬಿಜೆಡಿ, ಎಐಎಡಿಎಂಕೆ, ಬಿಆರ್‌ಎಸ್ ಮತ್ತು ಬಿಎಸ್‌ಪಿ ಒಟ್ಟು 24 ಸದಸ್ಯರನ್ನು ಹೊಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:25 pm, Wed, 11 December 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ