AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ದಾಖಲು; ನ್ಯಾಯಾಲಯ ಅನುಮತಿ ನೀಡಿದರೂ ಸಿಸೋಡಿಯಾಗೆ ಪತ್ನಿಯನ್ನು ಭೇಟಿಯಾಗಲು ಸಾಧ್ಯವಾಗಿಲ್ಲ

ಆಟೋಇಮ್ಯೂನ್ ಡಿಸಾರ್ಡರ್, ಮಲ್ಟಿಪಲ್ ಸ್ಕ್ಲೆರೋಸಿಸ್‌ನಿಂದ ಬಳಲುತ್ತಿರುವ ಸಿಸೋಡಿಯಾ ಅವರ ಪತ್ನಿಯನ್ನು ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಭೇಟಿಯಾಗಲು ದೆಹಲಿ ಹೈಕೋರ್ಟ್ ನಿನ್ನೆ (ಶುಕ್ರವಾರ) ದೆಹಲಿ ಮಾಜಿ ಉಪ ಮುಖ್ಯಮಂತ್ರಿಗೆ ಅನುಮತಿ ನೀಡಿದೆ.

ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ದಾಖಲು; ನ್ಯಾಯಾಲಯ ಅನುಮತಿ ನೀಡಿದರೂ ಸಿಸೋಡಿಯಾಗೆ ಪತ್ನಿಯನ್ನು ಭೇಟಿಯಾಗಲು ಸಾಧ್ಯವಾಗಿಲ್ಲ
ಮನೀಶ್ ಸಿಸೋಡಿಯಾ
ರಶ್ಮಿ ಕಲ್ಲಕಟ್ಟ
|

Updated on: Jun 03, 2023 | 9:00 PM

Share

ದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (AAP) ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ತನ್ನ ಪತ್ನಿಯನ್ನು ಇಂದು ಭೇಟಿಯಾಗಲು ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಆಟೋಇಮ್ಯೂನ್ ಡಿಸಾರ್ಡರ್, ಮಲ್ಟಿಪಲ್ ಸ್ಕ್ಲೆರೋಸಿಸ್‌ನಿಂದ ಬಳಲುತ್ತಿರುವ ಸಿಸೋಡಿಯಾ ಅವರ ಪತ್ನಿಯನ್ನು ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಭೇಟಿಯಾಗಲು ದೆಹಲಿ ಹೈಕೋರ್ಟ್ ನಿನ್ನೆ ದೆಹಲಿ ಮಾಜಿ ಉಪ ಮುಖ್ಯಮಂತ್ರಿಗೆ ಅನುಮತಿ ನೀಡಿದೆ. ಆದರೆ ಅವರು ತಮ್ಮ ಮನೆಗೆ ತಲುಪುವ ಮೊದಲು, ಪತ್ನಿಯ ಆರೋಗ್ಯ ಹದಗೆಟ್ಟಿತು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು ಎಂದು ಮೂಲಗಳು ತಿಳಿಸಿವೆ.

ಎಎಪಿ ನಾಯಕ, ತಮ್ಮ ಪತ್ನಿಯ ಆರೋಗ್ಯವನ್ನು ಉಲ್ಲೇಖಿಸಿ ಜಾಮೀನು ಕೋರಿದ್ದರು. ಈ ಜಾಮೀನು ಕೋರಿಕೆಯ ಮೇರೆಗೆ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ.

ಈ ತಿಂಗಳ ಆರಂಭದಲ್ಲಿ ಸಿಸೋಡಿಯಾ ಮತ್ತು ಅವರ ಅನಾರೋಗ್ಯದ ಪತ್ನಿ ನಡುವೆ ಪ್ರತಿ ಪರ್ಯಾಯ ದಿನದಲ್ಲಿ ಒಂದು ಗಂಟೆಗಳ ಕಾಲ ವಿಡಿಯೊ ಕರೆಗಳನ್ನು ಅನುಮತಿಸುವಂತೆ ತಿಹಾರ್ ಜೈಲು ಅಧೀಕ್ಷಕರಿಗೆ ಹೈಕೋರ್ಟ್ ನಿರ್ದೇಶನ ನೀಡಿತು.

ಸೋಮವಾರ, ದೆಹಲಿ ಹೈಕೋರ್ಟ್ ಸಿಸೋಡಿಯಾಗೆ ಜಾಮೀನು ತಿರಸ್ಕರಿಸಿದ್ದು, ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದರು. ಸಿಸೋಡಿಯಾ ಅವರನ್ನು ಮೊದಲ ಬಾರಿಗೆ ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತು. ಮಾರ್ಚ್ 9 ರಂದು, ತಿಹಾರ್ ಜೈಲಿನಲ್ಲಿ ಗಂಟೆಗಳ ವಿಚಾರಣೆಯ ನಂತರ, ಅದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಅವರನ್ನು ಬಂಧಿಸಿತು.

ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿಯಾಗಲು ಮನೀಶ್ ಸಿಸೋಡಿಯಾಗೆ ದೆಹಲಿ ಹೈಕೋರ್ಟ್ ಅನುಮತಿ

ದೆಹಲಿ ಸರ್ಕಾರವು ನವೆಂಬರ್ 2021 ರಲ್ಲಿ ಮದ್ಯ ನೀತಿಯನ್ನು ಜಾರಿಗೆ ತಂದಿತು ಆದರೆ ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022 ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ