ಆರ್​ಜೆಡಿಯ ಮಾಜಿ ಸಂಸದ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನ

Covid 19: 2004ರಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಿಹಾರದ ಸಂಸದರಾಗಿದ್ದ ಮೊಹ್ಮದ್ ಶಹಾಬುದ್ದೀನ್​ ಮತ್ತು ಅವರ ಸಹಚರರಿಗೆ 2015ರ ಡಿಸೆಂಬರ್ 5ರಂದು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. 2018ರ ಫೆಬ್ರವರಿ 15ರಂದು ಸುಪ್ರೀಂಕೋರ್ಟ್​ನ ಸೂಚನೆ ಮೇರೆಗೆ ಅವರನ್ನು ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗಿತ್ತು.

ಆರ್​ಜೆಡಿಯ ಮಾಜಿ ಸಂಸದ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನ
ಬಿಹಾರದ ಮಾಜಿ ಸಂಸದ ಶಹಾಬುದ್ದೀನ್
Follow us
guruganesh bhat
|

Updated on: May 01, 2021 | 4:42 PM

ದೆಹಲಿ: ಆರ್​ಜೆಡಿಯ ಮಾಜಿ ಸಂಸದ, ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೊಹಮ್ಮದ್ ಶಹಾಬುದ್ದೀನ್ ಕೊವಿಡ್​ನಿಂದ ನಿಧನರಾಗಿದ್ದಾರೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕಳೆದ ಏಪ್ರಿಲ್ 20ರಂದು ದೆಹಲಿಯ ದೀನ್​ದಯಾಳ್​ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೊವಿಡ್ ಇರುವುದು ಬಹಿರಂಗವಾಗಿತ್ತು. ಚಿಕಿತ್ಸೆಯ ನಂತರವೂ ಗುಣಮುಖರಾಗದ ಮೊಹಮ್ಮದ್ ಶಹಾಬುದ್ದೀನ್​ರನ್ನು ಮೂರು ದಿನಗಳಿಂದ ಐಸಿಯುವಿನಲ್ಲಿ ಇರಿಸಲಾಗಿತ್ತು.

ಕಳೆದ ವಾರವಷ್ಟೇ ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಮತ್ತು ಜೈಲಿನ ಅಧಿಕಾರಿಗಳಿಗೆ ಮಾಜಿ ಸಂಸದ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಮೊಹಮ್ಮದ್ ಶಹಾಬುದ್ದೀನ್​ರಿಗೆ ಅಗತ್ಯ ವೈದ್ಯಕೀಯ ಸೌಲಭ್ಯವನ್ನು ಒದಗಿಸುವಂತೆ ಸೂಚಿಸಿತ್ತು.

2004ರಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಿಹಾರದ ಸಂಸದರಾಗಿದ್ದ ಮೊಹ್ಮದ್ ಶಹಾಬುದ್ದೀನ್​ ಮತ್ತು ಅವರ ಸಹಚರರಿಗೆ 2015ರ ಡಿಸೆಂಬರ್ 5ರಂದು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. 2018ರ ಫೆಬ್ರವರಿ 15ರಂದು ಸುಪ್ರೀಂಕೋರ್ಟ್​ನ ಸೂಚನೆ ಮೇರೆಗೆ ಅವರನ್ನು ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗಿತ್ತು.

ಭಾರತದಲ್ಲಿ ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪಕ್ಕೆ ತಿರುಗಿದ್ದು ಪರಿಸ್ಥಿತಿ ಬಿಗಡಾಯಿಸಿದೆ. ಮೊದಲ ಅಲೆಯ ವೇಳೆಯಲ್ಲಿ ಉಳಿದ ದೇಶಗಳು ಹುಬ್ಬೇರಿಸುವಂತೆ ಪರಿಸ್ಥಿತಿಯನ್ನು ಎದುರಿಸಿದ್ದ ಭಾರತವೀಗ ದಿನವೊಂದರಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ದಾಖಲಿಸಿದ ದೇಶ ಎಂದು ಗುರುತಿಸಿಕೊಂಡಿದೆ. ನಿನ್ನೆ (ಏಪ್ರಿಲ್ 30) ರಾತ್ರಿ 11 ಗಂಟೆಯ ಅಂಕಿ ಅಂಶಗಳ ಪ್ರಕಾರ ಕಳೆದ 24 ತಾಸಿನಲ್ಲಿ ಭಾರತದಲ್ಲಿ 4,08,323 ಕೊರೊನಾ ಪಾಸಿಟಿವ್ ಪ್ರಕರಣಗಳು ಹೊಸದಾಗಿ ಕಾಣಿಸಿಕೊಂಡಿದ್ದು, ಇದುವರೆಗೆ ಒಂದೇ ದಿನದಲ್ಲಿ 4 ಲಕ್ಷಕ್ಕೂ ಅಧಿಕ ಪ್ರಕರಣಗಳಿಗೆ ಸಾಕ್ಷಿಯಾದ ಏಕೈಕ ದೇಶವಾಗಿದೆ.

ಏಪ್ರಿಲ್ 28ರ ತನಕ ದಿನಕ್ಕೆ ಸರಾಸರಿ 3.49 ಲಕ್ಷ ಪ್ರಕರಣಗಳು ಭಾರತದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೀಗ 4 ಲಕ್ಷದ ಗಡಿ ದಾಟುವ ಮೂಲಕ ಅಪಾಯಕಾರಿ ಬೆಳವಣಿಗೆ ತೋರಿಸಿದೆ. ಪ್ರತಿನಿತ್ಯ 52,579 ಹೊಸ ಪ್ರಕರಣಗಳೊಂದಿಗೆ ಅಮೆರಿಕಾ ಎರಡನೇ ಸ್ಥಾನ, 27,250 ಪ್ರಕರಣಗಳೊಂದಿಗೆ ಫ್ರಾನ್ಸ್ ಮೂರನೇ ಸ್ಥಾನ, 20,788 ಪ್ರಕರಣಗಳೊಂದಿಗೆ ಜರ್ಮನಿ ನಾಲ್ಕನೇ ಸ್ಥಾನ, 7,980 ಪ್ರಕರಣಗಳೊಂದಿಗೆ ಕೆನಡಾ ಐದನೇ ಸ್ಥಾನದಲ್ಲಿದೆ.

ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ಭಾರತ ತೀರಾ ಅಪಾಯಕಾರಿ ಸನ್ನಿವೇಶವನ್ನು ಎದುರಿಸುತ್ತಿದ್ದು ಪ್ರತಿ ನಿಮಿಷಕ್ಕೆ ಸರಾಸರಿ 2 ಸಾವು ಹಾಗೂ 270 ಹೊಸ ಪ್ರಕರಣಗಳಿಗೆ ಸಾಕ್ಷಿಯಾಗುತ್ತಿದೆ. ಅಂದರೆ ಪ್ರತಿ ಸೆಕೆಂಡಿಗೆ 4ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಭಾರತದಲ್ಲಿ ದಾಖಲಾಗುತ್ತಿವೆ. ಪ್ರಸ್ತುತ ಭಾರತದಲ್ಲಿ 31 ಲಕ್ಷದ 70 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 1.87 ಕೋಟಿಯ ಗಡಿ ದಾಟುವ ಮೂಲಕ 2 ಕೋಟಿಗೆ ಸನ್ನಿಹಿತವಾಗುತ್ತಿದೆ.

ಏಪ್ರಿಲ್ 1 ರಿಂದ ಏಪ್ರಿಲ್ 30ರ ಒಳಗೆ ಭಾರತದಲ್ಲಿ ಸುಮಾರು 65.41 ಲಕ್ಷ ಕೊರೊನಾ ಪ್ರಕರಣಗಳು ಹೊಸದಾಗಿ ದಾಖಲಾಗಿದ್ದು, ಅದರಲ್ಲಿ ಬಹುಪಾಲು ಅರ್ಧಭಾಗ ಅಂದರೆ 31.46 ಲಕ್ಷದಷ್ಟು ಪ್ರಕರಣಗಳು ಕಳೆದ 10 ದಿನಗಳ ಅವಧಿಯಲ್ಲಿ ದಾಖಲಾಗಿವೆ. ಈ ಪ್ರಕರಣಗಳ ಶೇ.73.05ರಷ್ಟು ಭಾಗವನ್ನು ಮಹಾರಾಷ್ಟ್ರ, ಉತ್ತರಪ್ರದೇಶ, ದೆಹಲಿ, ಕರ್ನಾಟಕ, ಕೇರಳ, ಚತ್ತೀಸಗಡ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ರಾಜಸ್ಥಾನ ಹೊಂದಿವೆ.

ಇದನ್ನೂ ಓದಿ: ಕೊರೊನಾ ಸೋಂಕು ಹಿಮ್ಮೆಟ್ಟಿಸಲು ಭಾರತಕ್ಕೆ ನೆರವಾಗುತ್ತೇವೆ: ಚೀನಾ

ಲಸಿಕೆ ಪಡೆದವರಲ್ಲೂ ಕೊರೊನಾ ಸೋಂಕು ಹರಡಲು ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

(Jailed RJD former MP Shahabuddin died from Covid 19)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್