2008ರ ಜೈಪುರ ಬಾಂಬ್ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು ಶಿಕ್ಷೆ
ಜೈಪುರ: 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಜೈಪುರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಸೈಫುರ್ ರಹಮಾನ್, ಸಾರ್ವರ್ ಅಜಾಮಿ, ಮೊಹಮದ್ ಸೈಫ್ ಮತ್ತು ಸಲ್ಮಾನ್ಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ. 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಸುಮಾರು 71 ಜನ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. 185ಕ್ಕೂ ಹೆಚ್ಚು ಜನ ಘಟನೆಯಲ್ಲಿ ಗಾಯಗೊಂಡಿದ್ದರು.
Follow us on
ಜೈಪುರ: 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಜೈಪುರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಸೈಫುರ್ ರಹಮಾನ್, ಸಾರ್ವರ್ ಅಜಾಮಿ, ಮೊಹಮದ್ ಸೈಫ್ ಮತ್ತು ಸಲ್ಮಾನ್ಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.
2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಸುಮಾರು 71 ಜನ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. 185ಕ್ಕೂ ಹೆಚ್ಚು ಜನ ಘಟನೆಯಲ್ಲಿ ಗಾಯಗೊಂಡಿದ್ದರು.