AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರ ಗ್ಯಾಸ್ ಟ್ಯಾಂಕರ್ ದುರಂತ; 11 ಜನರ ಸಾವಿಗೆ ಮೋದಿ ಸಂತಾಪ, 2 ಲಕ್ಷ ಪರಿಹಾರ ಘೋಷಣೆ

ರಾಜಸ್ಥಾನದ ಜೈಪುರ ಗ್ಯಾಸ್ ಟ್ಯಾಂಕರ್ ಅಪಘಾತ ಇಂದು ಬೆಳಿಗ್ಗೆ 5.45ರ ಸುಮಾರಿಗೆ ಸಂಭವಿಸಿದೆ. ದಟ್ಟ ಹೊಗೆಯಿಂದಾಗಿ ಕಣ್ಣಿನಲ್ಲಿ ತುರಿಕೆ ಮತ್ತು ಉಸಿರಾಟದ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಆಕಾಶದೆತ್ತರಕ್ಕೆ ಬೆಂಕಿ ಹರಡಿ ಇಡೀ ರಸ್ತೆಯಲ್ಲಿ ವಾಹನಗಳು ಚೆಲ್ಲಾಪಿಲ್ಲಿಯಾಗಿ ಬಿದ್ದ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ. ಈ ಘಟನೆಯಲ್ಲಿ 41 ಜನರಿಗೆ ಸುಟ್ಟ ಗಾಯಗಳಾಗಿವೆ.

ಜೈಪುರ ಗ್ಯಾಸ್ ಟ್ಯಾಂಕರ್ ದುರಂತ; 11 ಜನರ ಸಾವಿಗೆ ಮೋದಿ ಸಂತಾಪ, 2 ಲಕ್ಷ ಪರಿಹಾರ ಘೋಷಣೆ
Jaipur Gas Tanker Crash
ಸುಷ್ಮಾ ಚಕ್ರೆ
|

Updated on: Dec 20, 2024 | 5:50 PM

Share

ಜೈಪುರ: ಇಂದು ಮುಂಜಾನೆ ನಡೆದ ಜೈಪುರ ಗ್ಯಾಸ್ ಟ್ಯಾಂಕರ್ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ, 41 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜೈಪುರ ಅಗ್ನಿ ದುರಂತದ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

“ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಹಾಯ ಮಾಡಲಿದೆ. ಪ್ರತಿಯೊಬ್ಬ ಮೃತರ ಸಂಬಂಧಿಕರಿಗೆ PMNRFನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು” ಎಂದು ಪ್ರಧಾನಿ ಕಚೇರಿಯಿಂದ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಭಾರತ-ಯುಕೆ ಸಂಬಂಧ ಬಲಪಡಿಸಲು ಬದ್ಧ; ಕಿಂಗ್ ಚಾರ್ಲ್ಸ್ III ಜೊತೆ ಪ್ರಧಾನಿ ಮೋದಿ ಮಾತುಕತೆ

ಇಂದು ಬೆಳಿಗ್ಗೆ, ಜೈಪುರ-ಅಜ್ಮೀರ್ ಮಾರ್ಗದಲ್ಲಿ ಎಲ್‌ಪಿಜಿ ಮತ್ತು ಇತರ ವಾಹನಗಳನ್ನು ಸಾಗಿಸುತ್ತಿದ್ದ ಟ್ಯಾಂಕರ್‌ಗೆ ರಾಸಾಯನಿಕಗಳನ್ನು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಶೇ. 60ಕ್ಕೂ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಪ್ರಸ್ತುತ, 28 ರೋಗಿಗಳು ದಾಖಲಾಗಿದ್ದಾರೆ, ಆರು ಮಂದಿ ವೆಂಟಿಲೇಟರ್‌ಗಳಲ್ಲಿದ್ದಾರೆ.

ಇದನ್ನೂ ಓದಿ: ನೆಹರೂ ಕಾಲದಿಂದಲೂ ಕಾಂಗ್ರೆಸ್​ಗೆ​ ಸಂವಿಧಾನ ಬದಲಿಸುವ ಚಟ; ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ

ಘಟನೆಯ ನಂತರ, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಭನ್ಕ್ರೋಟಾ ಬೆಂಕಿಯ ಸ್ಥಳಕ್ಕೆ ಭೇಟಿ ನೀಡಿದರು ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆಗಳೊಂದಿಗೆ ಸಹಾಯವಾಣಿಯನ್ನು ಸ್ಥಾಪಿಸುವುದಾಗಿ ಘೋಷಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ