AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ ಹೈಡ್ರಾಮಾ: ಸರ್ಕಾರಿ ಶಾಲೆ ತಪಾಸಣೆಗೆ ತೆರಳಿದ ಸಿಜೆಪಿ ನಾಯಕರ ವಿರುದ್ಧ ಎಫ್​ಐಆರ್

ಸಿಜೆಪಿ ಪಕ್ಷದ ನಾಯಕರು ಜೈಪುರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯ ತಪಾಸಣೆಗೆ ತೆರಳಿದಾಗ ಸ್ಥಳೀಯರೊಂದಿಗೆ ಘರ್ಷಣೆ ಉಂಟಾಗಿದೆ. ಈ ವಾಗ್ವಾದ ಕಲ್ಲುತೂರಾಟ ಮತ್ತು ಹಲ್ಲೆಯಾಗಿ ಮಾರ್ಪಟ್ಟಿದ್ದು, ಎರಡೂ ಕಡೆಯಿಂದಲೂ ಪರಸ್ಪರ ಕ್ರಾಸ್ ಎಫ್‌ಐಆರ್ ದಾಖಲಾಗಿದೆ. ಒಬ್ಬ ದಲಿತ ಯುವಕ ಸಿಜೆಪಿ ವಿರುದ್ಧ ಜಾತಿ ನಿಂದನೆ ಆರೋಪಿಸಿದರೆ, ಸಿಜೆಪಿ ನಾಯಕರು ಗ್ರಾಮಸ್ಥರ ಮೇಲೆ ದಾಳಿ ಆರೋಪಿಸಿದ್ದಾರೆ. ರಾಜಕೀಯವಾಗಿ ಮಹತ್ವ ಪಡೆದಿರುವ ಈ ಘಟನೆ ತನಿಖೆಗೊಳಪಟ್ಟಿದೆ.

ಜೈಪುರದಲ್ಲಿ ಹೈಡ್ರಾಮಾ: ಸರ್ಕಾರಿ ಶಾಲೆ ತಪಾಸಣೆಗೆ ತೆರಳಿದ ಸಿಜೆಪಿ ನಾಯಕರ ವಿರುದ್ಧ ಎಫ್​ಐಆರ್
ಸಿಜೆಪಿ
ನಯನಾ ರಾಜೀವ್
|

Updated on: Aug 24, 2026 | 11:12 AM

Share

ಜೈಪುರ, ಆಗಸ್ಟ್ 24: ಇತ್ತೀಚೆಗಷ್ಟೇ ಹುಟ್ಟಿಕೊಂಡಿರುವ ಕಾಕ್ರೋಚ್ ಜನತಾ ಪಾರ್ಟಿ(Cockroach Janata Party)ಯು, ಸರ್ಕಾರಿ ಶಾಲೆಗಳಿಗೆ ತೆರಳಿ ಮೂಲಸೌಕರ್ಯಗಳು, ಶಿಕ್ಷಕರ ಕೊರತೆ, ಶಿಕ್ಷಕರ ವರ್ತನೆ ಕುರಿತು ತಪಾಸಣೆ ನಡೆಸುತ್ತಿದೆ. ಹಾಗೆಯೇ ಜೈಪುರದ ಗ್ರಾಮೀಣ ಪ್ರದೇಶದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯೊಂದರ ವಾಸ್ತವಿಕ ಸ್ಥಿತಿ ಪರಿಶೀಲಿಸಲು ತೆರಳಿದ್ದ ರಾಜಕೀಯ ನಾಯಕರು ಹಾಗೂ ಗ್ರಾಮಸ್ಥರ ನಡುವೆ ನಡೆದ ವಾಗ್ವಾದವು ಈಗ ಉದ್ವಿಗ್ನ ಸ್ವರೂಪ ಪಡೆದುಕೊಂಡಿದೆ.

ಶಾಲಾ ತಪಾಸಣೆಯ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಎರಡೂ ಕಡೆಯಿಂದಲೂ ಪರಸ್ಪರ ‘ಕ್ರಾಸ್ ಎಫ್‌ಐಆರ್’ ದಾಖಲಾಗಿದ್ದು, ಪ್ರಕರಣ ತೀವ್ರ ಕುತೂಹಲ ಮೂಡಿಸಿದೆ. ಶಾಲೆಗಳನ್ನು ಸರಿಪಡಿಸಿ ಅಭಿಯಾನದ ಭಾಗವಾಗಿ ಸಿಜೆಪಿ (CJP) ಪಕ್ಷದ ನಾಯಕರು ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಎಮ್ಮೆಗಳ ಕೊಟ್ಟಿಗೆಯೊಂದರಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ಶಾಲೆಯನ್ನು ಪರಿಶೀಲಿಸಲು ತೆರಳಿದ್ದರು.

ಶಾಲೆಯನ್ನು ತಲುಪುವ ಮುನ್ನವೇ ಸ್ಥಳೀಯರು ಅವರನ್ನು ತಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಕಲ್ಲುತೂರಾಟ ಹಾಗೂ ಹಲ್ಲೆಯ ಹಂತಕ್ಕೆ ತಿರುಗಿದೆ ಎಂದು ಆರೋಪಿಸಲಾಗಿದೆ.

ಗ್ರಾಮದ ದಲಿತ ಯುವಕ ಭಗವಾನ್ ಸಹಾಯ್ ಧಂಕಾ ನೀಡಿದ ದೂರಿನ ಮೇರೆಗೆ, ಸಿಜೆಪಿ ವಕ್ತಾರ ಅಶುತೋಷ್ ರಂಕಾ ಹಾಗೂ 60ಕ್ಕೂ ಹೆಚ್ಚು ಜನರ ವಿರುದ್ಧ ಹಲ್ಲೆ, ಕೊಲೆ ಯತ್ನ ಹಾಗೂ ಜಾತಿ ನಿಂದನೆಗಾಗಿ ದೂರು ದಾಖಲಿಸಲಾಗಿದೆ.

ಮತ್ತೊಂದೆಡೆ, ಸಿಜೆಪಿ ನಾಯಕಿ ರೇಖಾ ಶರ್ಮಾ ದೂರು ನೀಡಿ, ತಮ್ಮ ತಂಡದ ಮೇಲೆ ಗ್ರಾಮಸ್ಥರು ಹಾಗೂ ಕೆಲ ರಾಜಕೀಯ ಪ್ರಭಾವಿಗಳು ಯೋಜಿತ ದಾಳಿ ನಡೆಸಿ ವಾಹನಗಳ ಗಾಜು ಒಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸರು ಆ ದೂರಿನ ಮೇಲೆಯೂ ಎಫ್‌ಐಆರ್ ದಾಖಲಿಸಿದ್ದಾರೆ. ಕಾಯ್ದೆಯಡಿ ಶಿವದಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಓದಿ: ‘ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ’; ಕಾಕ್ರೋಚ್ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಬೇಸರ

ಸಿಜೆಪಿ ಪಕ್ಷವು ತಮ್ಮ ಬಳಿ ಘಟನೆಯ ವಿಡಿಯೋ ದೃಶ್ಯಾವಳಿಗಳಿದ್ದು, ಗ್ರಾಮಸ್ಥರೇ ತಮ್ಮ ಮೇಲೆ ದಾಳಿ ನಡೆಸಿದ್ದಾರೆ ಎಂದು ವಾದಿಸುತ್ತಿದೆ. ಆದರೆ ಪೊಲೀಸರು ಎರಡೂ ಕಡೆಯ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಚಕ್ಸು ವೃತ್ತದ ಎಸಿಪಿ ಭವಾನಿ ಸಿಂಗ್ ಅವರ ನೇತೃತ್ವದಲ್ಲಿ ತನಿಖೆ ಮುಂದುವರಿಸಿದ್ದಾರೆ.

ಜೋಧಪುರ ಮಹಾನಗರ ಪಾಲಿಕೆ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲೇ ಈ ಘಟನೆ ನಡೆದಿರುವುದು ರಾಜಸ್ಥಾನ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಶಾಲಾ ಮೂಲಸೌಕರ್ಯಗಳ ಕೊರತೆಯ ವಿಷಯವು ಹಿನ್ನೆಲೆಗೆ ಸರಿದು ಸಂಘರ್ಷ ಮುನ್ನೆಲೆಗೆ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ