AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕಿಸ್ತಾನ ಗಡಿಯಲ್ಲಿ ಜೋಡಿ ಶವ ಪತ್ತೆ

ಜೈಸಲ್ಮೇರ್​ನ ಭಾರತ-ಪಾಕಿಸ್ತಾನ ಗಡಿಯ ಬಳಿ ಜೋಡಿ ಶವ ಪತ್ತೆಯಾಗಿದೆ. ಅದರಲ್ಲಿ ಒಬ್ಬಳು ಅಪ್ರಾಪ್ತೆ. ಸುಮಾರು6-7 ದಿನಗಳ ಹಿಂದೆ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಭಾರತ-ಪಾಕಿಸ್ತಾನ ಅಂtAರಾಷ್ಟ್ರೀಯ ಗಡಿಯ ಬಳಿಯ ಮರಳು ದಿಬ್ಬಗಳಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಇಬ್ಬರೂ ಪಾಕಿಸ್ತಾನಿ ನಾಗರಿಕರು ಎಂದು ಗುರುತಿಸಲಾಗಿದೆ.ಅವರು ಹಸಿವು, ಬಾಯಾರಿಕೆಯಿಂದ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿತ್ತು.

ಭಾರತ-ಪಾಕಿಸ್ತಾನ ಗಡಿಯಲ್ಲಿ ಜೋಡಿ ಶವ ಪತ್ತೆ
ಸಾಂದರ್ಭಿಕ ಚಿತ್ರImage Credit source: Hindustan Times
ನಯನಾ ರಾಜೀವ್
|

Updated on: Jun 30, 2025 | 12:24 PM

Share

ಜೈಸಲ್ಮೇರ್, ಜೂನ್ 30: ರಾಜಸ್ಥಾನದ ಜೈಸಲ್ಮೇರ್​ ಸಮೀಪವಿರುವ ಭಾರತ-ಪಾಕಿಸ್ತಾನ ಗಡಿ ಬಳಿ ಜೋಡಿ ಶವ ಪತ್ತೆಯಾಗಿದೆ. ಅದರಲ್ಲಿ ಒಬ್ಬಳು ಅಪ್ರಾಪ್ತೆ. ಸುಮಾರು 6-7 ದಿನಗಳ ಹಿಂದೆ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ರಾಜಸ್ಥಾನ(Rajasthan)ದ ಜೈಸಲ್ಮೇರ್ ಜಿಲ್ಲೆಯ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿಯ ಮರಳು ದಿಬ್ಬಗಳಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಇಬ್ಬರೂ ಪಾಕಿಸ್ತಾನಿ ನಾಗರಿಕರು ಎಂದು  ತಿಳಿದುಬಂದಿದೆ. ಅವರು ಹಸಿವು, ಬಾಯಾರಿಕೆಯಿಂದ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

ಆದರೆ ಭಾರತವನ್ನು ತಲುಪಿದ್ದು ಏಕೆ ಮತ್ತು ಹೇಗೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಹಾಗೆಯೇ ಸಾವಿನ ಹಿಂದೆ ಯಾರದ್ದಾದರೂ ಪಿತೂರಿ ಇರಬಹುದು ಎಂದು ಅಂದಾಜಿಸಲಾಗಿದೆ. ಜೈಸಲ್ಮೇರ್ ಬಳಿಯ ಭಾರತ-ಪಾಕಿಸ್ತಾನ ಗಡಿಯ ಬಳಿಯ ತನೋಟ್ ಮತ್ತು ಸಾಧೇವಾಲಾ ಪ್ರದೇಶದ ಅಂತಾರಾಷ್ಟ್ರೀಯ ಗಡಿಯ ಒಳಗೆ 10 ರಿಂದ 12 ಕಿ.ಮೀ. ದೂರದಲ್ಲಿದೆ. ಶನಿವಾರ ಸಂಜೆ ಸ್ಥಳೀಯರು ಶವವನ್ನು ನೋಡಿ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನಿ ಮೊಬೈಲ್ ಸಿಮ್ ಮತ್ತು ಪಾಕಿಸ್ತಾನ ಗುರುತಿನ ಚೀಟಿಗಳು ಪತ್ತೆಯಾಗಿವೆ., ಇದು ಇಬ್ಬರೂ ಪಾಕಿಸ್ತಾನಿ ನಾಗರಿಕರು ಎಂದು ಖಚಿತಪಡಿಸುತ್ತದೆ. ಇಬ್ಬರ ವಯಸ್ಸು 20 ವರ್ಷಕ್ಕಿಂತ ಕಡಿಮೆ ಎಂದು ಹೇಳಲಾಗುತ್ತದೆ.

ಮತ್ತಷ್ಟು ಓದಿ: ಲುಧಿಯಾನಾ: ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ

ಮೇಲ್ನೋಟಕ್ಕೆ ಇಬ್ಬರೂ ಹಸಿವು ಮತ್ತು ಬಾಯಾರಿಕೆಯಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಬ್ಬರೂ ಹಿಂದೂ ಆಗಿದ್ದು, ಪಾಕಿಸ್ತಾನದಲ್ಲಿ ನಡೆಯುತ್ತಿರುವ ದೌರ್ಜನ್ಯಗಳಿಂದ ಬೇಸತ್ತು ಭಾರತಕ್ಕೆ ಬಂದಿರಬೇಕು ಎಂದು ಊಹಿಸಲಾಗುತ್ತಿದೆ. ಇಬ್ಬರೂ ಇಲ್ಲಿಗೆ ಹೇಗೆ ಬಂದರು ಎಂಬುದು ಬಹಿರಂಗಗೊಂಡಿಲ್ಲ. ಪೊಲೀಸರು ಮತ್ತು ಬಿಎಸ್‌ಎಫ್ ಅಧಿಕಾರಿಗಳು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರು ಪ್ರಸ್ತುತ ಎರಡೂ ಶವಗಳನ್ನು ರಾಮಗಢ ಶವಾಗಾರದಲ್ಲಿ ಇರಿಸಿದ್ದಾರೆ. ಈಗ ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ಬಹಿರಂಗಗೊಳ್ಳಲಿದೆ. ಇಬ್ಬರೂ ಪಾಕಿಸ್ತಾನದಿಂದ ಬಂದವರೇ ಅಥವಾ ಈಗಾಗಲೇ ಭಾರತದಲ್ಲಿದ್ದರೇ ಎಂಬುದು ಸಹ ಬಹಿರಂಗಗೊಂಡಿಲ್ಲ.

ಆ ಯುವಕನ ಹೆಸರು ರವಿ ಕುಮಾರ್ ಆತನಿಗೆ 18 ವರ್ಷ, ಹುಡುಗಿಗೆ 15 ವರ್ಷ ಇಬ್ಬರೂ ಪ್ರೇಮಿಗಳಿರಬಹುದು ಎಂದು ಊಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ಕಾರಣ ಹಸಿವು ಮತ್ತು ಬಾಯಾರಿಕೆಯೇ ಅಥವಾ ಇನ್ನೇನಾದರೂ ಆಗಿರಬಹುದೇ ಎಂಬುದು ತಿಳಿದುಬರುತ್ತದೆ.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!