ಅನಂತ್‌ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಹತ್ಯೆಗೀಡಾದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕನನ್ನು ಸಮೀರ್ ದಾರ್ ಎಂದು ಗುರುತಿಸಲಾಗಿದೆ. ಈತ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿಜಯ್ ಕುಮಾರ್ ತಿಳಿಸಿದ್ದಾರೆ. ಭದ್ರತಾ ಪಡೆಗಳು ಹತ್ಯೆಗೀಡಾದ ಭಯೋತ್ಪಾದಕನ ಡಿಎನ್ಎ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸುತ್ತಿವೆ.
ಡಿಸೆಂಬರ್ 30ರಂದು ಅನಂತನಾಗ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನ ಚಿತ್ರವು ಲೆಥ್‌ಪೋರಾ, ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನಾಗಿದ್ದ ಜೆಇಎಂ ಉನ್ನತ ಕಮಾಂಡರ್ ಸಮೀರ್ ದಾರ್‌ನೊಂದಿಗೆ ಹೋಲಿಕೆಯಾಗುತ್ತದೆ. ನಾವು ಡಿಎನ್ಎ ಮಾದರಿ ಮೂಲಕ ಹೋಲಿಕೆ ಮಾಡುತ್ತೇವೆ ಎಂದು ಕುಮಾರ್ ಹೇಳಿದರು.
ಬುಧವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರು. ಅಲ್ಲಿ ಇಬ್ಬರು ಸ್ಥಳೀಯ ಭಯೋತ್ಪಾದಕರು ಮತ್ತು ಪಾಕಿಸ್ತಾನಿ ಭಯೋತ್ಪಾದಕರು, ನಿಷೇಧಿತ ಭಯೋತ್ಪಾದಕ ಸಂಘಟನೆಯ ಜೆಎಂ ಜೊತೆ ಸೇರಿದ್ದರು.
2019ರ ಫೆಬ್ರವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ಬಾಂಬರ್‌ನಿಂದ ಭಯೋತ್ಪಾದಕ ದಾಳಿಯನ್ನು ನಡೆಸಲಾಗಿತ್ತು., ಇದರ ಪರಿಣಾಮವಾಗಿ 40 ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದರು. ಜೈಶ್-ಎ-ಮೊಹಮ್ಮದ್‌ನ ಆದಿಲ್ ಅಹ್ಮದ್ ದಾರ್ ಎಂದು ಗುರುತಿಸಲಾದ ಆತ್ಮಹತ್ಯಾ ಬಾಂಬರ್, ಪುಲ್ವಾಮಾ ಜಿಲ್ಲೆಯ ಲೆಥಾಪೋರಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯೊಂದಿಗೆ ತನ್ನ ವಾಹನವನ್ನು ಬಸ್‌ಗೆ ಡಿಕ್ಕಿ ಹೊಡೆದಿದ್ದ.
ಇದನ್ನೂ ಓದಿ: ಶ್ರೀನಗರದಲ್ಲಿ ಇಂದು 3 ಉಗ್ರರ ಹತ್ಯೆ; 24 ಗಂಟೆಗಳಲ್ಲಿ ಒಟ್ಟು 9 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಶೋಪಿಯಾನ್ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ