Jaish-e-Mohammed terrorists: ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

Jaish-e-Mohammed terrorists: ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆ
Security forces
Edited By:

Updated on: Sep 01, 2022 | 10:31 AM

ಜಮ್ಮು – ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಬುಧವಾರ ರಾತ್ರಿ ಸೋಪೋರ್ ಪಟ್ಟಣದ ಬೊಮೈ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಹೇಳಿದರು. ಗುಂಡಿನ ಚಕಮಕಿಯಲ್ಲಿ ಓರ್ವ ನಾಗರೀಕನಿಗೂ ಗಾಯಗಳಾಗಿವೆ. ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಇಬ್ಬರೂ ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು ಎಂದು ಹೇಳಿದರು.

ಕೊಲ್ಲಲ್ಪಟ್ಟ ಜೆಎಂ ಭಯೋತ್ಪಾದಕರನ್ನು ಸೋಪೋರ್‌ನ ಮೊಹಮ್ಮದ್ ರಫಿ ಮತ್ತು ಪುಲ್ವಾಮಾದ ಕೈಸರ್ ಅಶ್ರಫ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ರಫಿಯನ್ನು ಈ ಹಿಂದೆ ಎರಡು ಬಾರಿ ಪಿಎಸ್‌ಎ ಅಡಿಯಲ್ಲಿ ದಾಖಲಿಸಲಾಗಿತ್ತು. ಇಬ್ಬರೂ ಹಲವಾರು ಭಯೋತ್ಪಾದಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಇನ್‌ಪುಟ್‌ನ ಪ್ರಕಾರ ಅವರು ಸೋಪೋರ್ ಪ್ರದೇಶದಲ್ಲಿ ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸಿದ್ದರು. ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.