ಲೋಕಸಭೆ ಚುನಾವಣೆ: ಕರ್ನಾಟಕದಿಂದ ಜೈಶಂಕರ್, ನಿರ್ಮಲಾ ಸೀತಾರಾಮನ್ ಸ್ಪರ್ಧೆ ಸಾಧ್ಯತೆ: ಪ್ರಲ್ಹಾದ್ ಜೋಶಿ

ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಹೆಚ್ಚು ಕಡಿಮೆ ಅವರು (ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಅಂತಿಮವಾಗಿದೆ. ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ? ಅದು ಕರ್ನಾಟಕ ಅಥವಾ ಬೇರೆ ಯಾವುದಾದರೂ ರಾಜ್ಯವಾಗಿರಬಹುದು ಎಂದು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಜೋಶಿ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಲೋಕಸಭೆ ಚುನಾವಣೆ: ಕರ್ನಾಟಕದಿಂದ ಜೈಶಂಕರ್, ನಿರ್ಮಲಾ ಸೀತಾರಾಮನ್ ಸ್ಪರ್ಧೆ ಸಾಧ್ಯತೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Follow us
ರಶ್ಮಿ ಕಲ್ಲಕಟ್ಟ
|

Updated on: Feb 27, 2024 | 2:26 PM

ದೆಹಲಿ ಫೆಬ್ರವರಿ 27: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok sabha Election) ಕರ್ನಾಟಕದ ಕ್ಷೇತ್ರಗಳಿಂದ ಬಿಜೆಪಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಡಾ ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ಅಥವಾ ಇತರ ರಾಜ್ಯ ಕ್ಷೇತ್ರಗಳಿಂದ ಸ್ಪರ್ಧಿಸಬಹುದು. ಕ್ಷೇತ್ರದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದ ಇಬ್ಬರು ವಾಗ್ಮಿ ಮಂತ್ರಿಗಳು. ಅವರು ಸಂಸತ್ತಿನ ಮೇಲ್ಮನೆ, ರಾಜ್ಯಸಭೆಯ ಸದಸ್ಯರು. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದರೆ, ಎಸ್ ಜೈಶಂಕರ್ ಅವರು ವಿದೇಶಾಂಗ ವ್ಯವಹಾರಗಳ ಖಾತೆಯನ್ನು ಹೊಂದಿದ್ದಾರೆ. ಅವರು ಬಹಳ ಸಮಯದಿಂದ ಸಂಸದರಾಗಿದ್ದಾರೆ. ಆದರೆ ಚುನಾವಣೆಗಳನ್ನು ಎದುರಿಸಿಲ್ಲ. ಈ ವರ್ಷ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಇವರನ್ನು ಕಣಕ್ಕಿಳಿಸುವ ಯೋಜನೆಯಲ್ಲಿದೆ ಎಂದು ಜೋಶಿ ಹೇಳಿದ್ದಾರೆ

ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಹೆಚ್ಚು ಕಡಿಮೆ ಅವರು (ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಅಂತಿಮವಾಗಿದೆ. ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ? ಅದು ಕರ್ನಾಟಕ ಅಥವಾ ಬೇರೆ ಯಾವುದಾದರೂ ರಾಜ್ಯವಾಗಿರಬಹುದು ಎಂದು ಇನ್ನೂ ನಿರ್ಧರಿಸಲಾಗಿಲ್ಲ ಎಂದಿದ್ದಾರೆ ಜೋಶಿ.

ಬೆಂಗಳೂರಿನಿಂದ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಜೋಶಿ “ಏನೂ ಅಂತಿಮಗೊಳಿಸದಿರುವಾಗ ನಾನು ಹೇಗೆ ಉತ್ತರಿಸಲಿ? ಎಂದು ಕೇಳಿದ್ದಾರೆ.

ಸೀತಾರಾಮನ್ ಪ್ರಸ್ತುತ ಕರ್ನಾಟಕವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿದ್ದರೆ, ಎಸ್ ಜೈಶಂಕರ್ ಗುಜರಾತ್ ಅನ್ನು ಪ್ರತಿನಿಧಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರ ರಾಜಕೀಯ ಪ್ರವೇಶ

ನಿರ್ಮಲಾ ಸೀತಾರಾಮನ್ ಅವರು 2008 ರಲ್ಲಿ ಬಿಜೆಪಿ ಸೇರಿದ್ದು 2014 ರವರೆಗೆ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಸೇವೆ ಸಲ್ಲಿಸಿದರು. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ನಂತರ ಅವರು ಕ ರಾಜ್ಯ ಸಚಿವರಾದರು. ಅದೇ ವರ್ಷ ಆಂಧ್ರಪ್ರದೇಶದಿಂದ ರಾಜ್ಯಸಭಾ ಸದಸ್ಯೆಯಾದರು. ನಿರ್ಮಲಾ ಸೀತಾರಾಮನ್ ಅವರು 2017 ಮತ್ತು 2019 ರ ನಡುವೆ ದೇಶದ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಸಾದುದ್ದೀನ್ ಓವೈಸಿ ಮಾತನಾಡಿದಷ್ಟು ಪ್ರಧಾನಿ ಮೋದಿಗೆ ಲಾಭ ಹೆಚ್ಚು: ಬಾಬಾ ರಾಮ್​ದೇವ್

ಎಸ್ ಜೈಶಂಕರ್ ಅನುಭವಿ ರಾಜಕಾರಣಿ. 2015 ರಲ್ಲಿ ಅವರು ವಿದೇಶಾಂಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 2019 ರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಸಂಪುಟಕ್ಕೆ ಸೇರ್ಪಡೆಗೊಂಡರು. ರಾಜ್ಯಸಭೆಗೂ ನಾಮನಿರ್ದೇಶನಗೊಂಡಿದ್ದರು. ಅವರು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತೀಯ ವಿದೇಶಾಂಗ ನೀತಿಯ ದೃಢವಾದ ಸಮರ್ಥನೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆಯನ್ನು ಗಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ