Hardeep Nijjar case: ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ, ಮೂವರು ಭಾರತೀಯರ ಬಂಧನ: ಜೈಶಂಕರ್​ ಪ್ರತಿಕ್ರಿಯೆ

ಕೆನಡಾದಲ್ಲಿ ನಡೆದ ಖಲಿಸ್ತಾನ್​ ಪ್ರತ್ಯೇಕತಾವಾದಿ ಹರ್ದೀಪ್​ ಸಿಂಗ್​ ನಿಜ್ಜರ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವ ಎಸ್​ ಜೈಶಂಕರ್​ ಪ್ರತಿಕ್ರಿಯೆ ನೀಡಿದ್ದಾರೆ.

Hardeep Nijjar case: ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ, ಮೂವರು ಭಾರತೀಯರ ಬಂಧನ: ಜೈಶಂಕರ್​ ಪ್ರತಿಕ್ರಿಯೆ
ಎಸ್​ ಜೈಶಂಕರ್​
Follow us
|

Updated on: May 05, 2024 | 3:20 PM

ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಹತ್ಯೆಯ ವಿಷಯವಾಗಿ ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದ್ದರೂ ಅಲ್ಲಿನ ಆಂತರಿಕ ರಾಜಕೀಯವೇ ಕಾರಣವಾಗಿದ್ದು, ಅದಕ್ಕೂ ಭಾರತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್(S Jaishankar) ಹೇಳಿದ್ದಾರೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತವನ್ನು ಏಕೆ ಟೀಕಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ಇಲ್ಲಿ ಹಿರಿಯ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವರು, ‘ಅಭಿವೃದ್ಧಿ ಹೊಂದಿದ ಭಾರತ’ವನ್ನು ಮಾಡಲು ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಂತಹ ಬಲಿಷ್ಠ ಮತ್ತು ಕ್ರಿಯಾಶೀಲ ನಾಯಕ ದೇಶಕ್ಕೆ ಅಗತ್ಯವಿದೆ ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ ಭಾರತದ ಚಿತ್ರಣವು ಮೊದಲಿಗಿಂತ ಈಗ ಉತ್ತಮವಾಗಿದೆ ಕೆನಡಾ ಒಂದು ಅಪವಾದವಾಗಿದೆ. ವಿವಿಧ ದೇಶಗಳ ನಾಯಕರು ಭಾರತ ಮತ್ತು ಅದರ ಪ್ರಧಾನಿಯನ್ನು ಹೊಗಳುವುದನ್ನು ನೀವು ನೋಡಿದ್ದೀರಿ. ಕೆನಡಾದ ಆಡಳಿತ ಪಕ್ಷಕ್ಕೆ ಸಂಸತ್ತಿನಲ್ಲಿ ಬಹುಮತವಿಲ್ಲ ಮತ್ತು ಕೆಲವು ಪಕ್ಷಗಳು ಖಲಿಸ್ತಾನ್ ಪರ ನಾಯಕರ ಮೇಲೆ ಅವಲಂಬಿತವಾಗಿವೆ ಎಂದು ವಿದೇಶಾಂಗ ಸಚಿವರು ಹೇಳಿದರು.

ಮತ್ತಷ್ಟು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಕೆನಡಾ ಸರ್ಕಾರವು ಏನನ್ನೂ ಮಾಡಲಿಲ್ಲ – ಜೈಶಂಕರ್ ನಮಗೆ ಮತ್ತು ನಮ್ಮ ಸಂಬಂಧಗಳಿಗೆ ಸಮಸ್ಯೆ ಉಂಟುಮಾಡುವವರಿಗೆ ವೀಸಾ, ಮಾನ್ಯತೆ ಅಥವಾ ರಾಜಕೀಯ ಕ್ಷೇತ್ರದಲ್ಲಿ ಸ್ಥಾನ ನೀಡಬೇಡಿ ಎಂದು ನಾವು ಅವರಿಗೆ ಹಲವು ಬಾರಿ ಹೇಳಿದ್ದೇವೆ. ಕೆನಡಾ ಸರ್ಕಾರವು ಏನನ್ನೂ ಮಾಡಲಿಲ್ಲ, 25 ಜನರನ್ನು ಹಸ್ತಾಂತರಿಸುವಂತೆ ಭಾರತ ಒತ್ತಾಯಿಸಿದೆ, ಅವರಲ್ಲಿ ಹೆಚ್ಚಿನವರು ಖಲಿಸ್ತಾನ್ ಬೆಂಬಲಿಗರು, ಆದರೆ ಅವರು ಯಾವುದೇ ಗಮನ ಹರಿಸಲಿಲ್ಲ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೆನಡಾದ ಪ್ರಧಾನಿ ಟ್ರುಡೊ ಅವರು ನಿಜ್ಜರ್‌ನ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳು ಬಹುಶಃ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟವು. ಟ್ರುಡೊ ಆರೋಪವನ್ನು ಭಾರತ ತಳ್ಳಿ ಹಾಕಿತ್ತು.

ಚೀನಾದೊಂದಿಗಿನ ಗಡಿ ವಿವಾದದ ಕುರಿತು ಜೈಶಂಕರ್, ಕಳೆದ ನಾಲ್ಕು ವರ್ಷಗಳಲ್ಲಿ, ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಹೆಚ್ಚಿನ ಸಂಖ್ಯೆಯ ಸೈನಿಕರನ್ನು ಒಟ್ಟುಗೂಡಿಸುವ ಮೂಲಕ ನಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸಲಾಯಿತು. ಇದಕ್ಕೆ ದಿಟ್ಟ ಉತ್ತರ ನೀಡಿದ್ದೇವೆ. ಇಂದು ಸಾವಿರಾರು ಭಾರತೀಯ ಸೇನೆಯ ಸೈನಿಕರನ್ನು ಚೀನಾದೊಂದಿಗೆ ಎಲ್​ಎಸಿಯಲ್ಲಿ ನಿಯೋಜಿಸಲಾಗಿದೆ. ನಾವು ತುಂಬಾ ಸ್ಪಷ್ಟವಾಗಿದ್ದೇವೆ, ನಾವು ಅಲ್ಲಿದ್ದೇವೆ, ನಾವು ಬಲಶಾಲಿಯಾಗಿದ್ದೇವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ