ಉತ್ತರ ಪ್ರದೇಶದ ಜಲಾಲಾಬಾದ್ ಇನ್ಮುಂದೆ ಪರಶುರಾಮಪುರಿ; ಮರುನಾಮಕರಣಕ್ಕೆ ಅಮಿತ್ ಶಾ ಒಪ್ಪಿಗೆ

ಕೇಂದ್ರ ಗೃಹ ಸಚಿವಾಲಯದ ಅನುಮೋದನೆಯ ನಂತರ ಉತ್ತರ ಪ್ರದೇಶದ ಶಹಜಹಾನ್‌ಪುರದ ಜಲಾಲಾಬಾದ್ ಅನ್ನು ಪರಶುರಾಮಪುರಿ ಎಂದು ಮರುನಾಮಕರಣ ಮಾಡಲಾಗಿದೆ. ಉತ್ತರ ಪ್ರದೇಶ ಸರ್ಕಾರದ ಪ್ರಸ್ತಾವನೆಯನ್ನು ಗೃಹ ಸಚಿವ ಅಮಿತ್ ಶಾ ಅನುಮೋದಿಸಿದ ನಂತರ ಉತ್ತರ ಪ್ರದೇಶದ ಜಲಾಲಾಬಾದ್ ಅನ್ನು ಪರಶುರಾಮಪುರಿ ಎಂದು ಮರುನಾಮಕರಣ ಮಾಡಲಾಗಿದೆ.

ಉತ್ತರ ಪ್ರದೇಶದ ಜಲಾಲಾಬಾದ್ ಇನ್ಮುಂದೆ ಪರಶುರಾಮಪುರಿ; ಮರುನಾಮಕರಣಕ್ಕೆ ಅಮಿತ್ ಶಾ ಒಪ್ಪಿಗೆ
Amit Shah

Updated on: Aug 20, 2025 | 5:44 PM

ಲಕ್ನೋ, ಆಗಸ್ಟ್ 20: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಜಲಾಲಾಬಾದ್ (Jalalabad) ಹೆಸರನ್ನು ಬದಲಾಯಿಸುವ ಬಗ್ಗೆ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಇಂದು ಅಮಿತ್ ಶಾ (Amit Shah) ಒಪ್ಪಿಗೆ ನೀಡಿದ ನಂತರ ಜಲಾಲಾಬಾದ್ ಹೆಸರನ್ನು ಈಗ ಪರಶುರಾಮಪುರಿ ಎಂದು ಬದಲಾಯಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ಈ ಬಗ್ಗೆ ಮಾಹಿತಿಯನ್ನು ನೀಡಿದೆ. ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗೆ ಸಚಿವಾಲಯದಿಂದ ಬಂದ ಪತ್ರದಲ್ಲಿ “ಜಲಾಲಾಬಾದ್” ನಗರದ ಹೆಸರನ್ನು “ಪರಶುರಾಮಪುರಿ” ಎಂದು ಬದಲಾಯಿಸಲು ಭಾರತ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಲಾಗಿದೆ.

ಶಹಜಹಾನ್‌ಪುರ ಜಿಲ್ಲೆಯ ಜಲಾಲಾಬಾದ್ ಅನ್ನು ಪರಶುರಾಮಪುರಿ ಎಂದು ಮರುನಾಮಕರಣ ಮಾಡಲು ಗೃಹ ಸಚಿವಾಲಯ ಅನುಮೋದನೆ ನೀಡಿದ್ದಕ್ಕೆ ಕೇಂದ್ರ ಸಚಿವ ಮತ್ತು ಪಿಲಿಭಿತ್ ಸಂಸದ ಜಿತಿನ್ ಪ್ರಸಾದ್ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ ಪೋಸ್ಟ್ ಮೂಲಕ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಹೆಸರು ಬದಲಾವಣೆಗೆ ಅನುಮತಿ ನೀಡಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರಿಗೆ ಜಿತಿನ್ ಪ್ರಸಾದ್ ಧನ್ಯವಾದ ಅರ್ಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಾಯಕತ್ವಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.


ಇದನ್ನೂ ಓದಿ: ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ, ಸಚಿವರನ್ನು ಪದಚ್ಯುತಗೊಳಿಸುವ ಮಸೂದೆ ಮಂಡಿಸಿದ ಅಮಿತ್ ಶಾ

ಸನಾತನ ಸಮಾಜಕ್ಕೆ ಇದು ಹೆಮ್ಮೆಯ ಕ್ಷಣ ಎಂದು ಹೇಳಿದ ಜಿತಿನ್ ಪ್ರಸಾದ್, ಈ ನಿರ್ಧಾರವು ಭಗವಾನ್ ಪರಶುರಾಮನ ಭಕ್ತರಿಗೆ ಗೌರವ ಮತ್ತು ಸಂತೋಷವನ್ನು ತಂದಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ