Jamia Violence case: ಜಾಮಿಯಾ ಹಿಂಸಾಚಾರ ಪ್ರಕರಣ: ಶಾರ್ಜೀಲ್ ಇಮಾಮ್, ಆಸಿಫ್ ತನ್ಹಾ ಜೈಲಿನಿಂದ ಬಿಡುಗಡೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಶರ್ಜೀಲ್ ಇಮಾಮ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ನ್ಯಾಯಾಲಯವು ಶನಿವಾರ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ.

Jamia Violence case: ಜಾಮಿಯಾ ಹಿಂಸಾಚಾರ ಪ್ರಕರಣ: ಶಾರ್ಜೀಲ್ ಇಮಾಮ್, ಆಸಿಫ್ ತನ್ಹಾ ಜೈಲಿನಿಂದ ಬಿಡುಗಡೆ
Sharjeel Imam

Updated on: Feb 04, 2023 | 12:07 PM

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ದೆಹಲಿ ಪೊಲೀಸರು ಮತ್ತು ಜನರ ನಡುವಿನ ಘರ್ಷಣೆಯ ನಂತರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ (Jamia Violence case) ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಶರ್ಜೀಲ್ ಇಮಾಮ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ನ್ಯಾಯಾಲಯವು ಶನಿವಾರ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ. ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಲ್ ವರ್ಮಾ ಈ ಆದೇಶವನ್ನು ಪ್ರಕಟಿಸಿದರು.

ಈ ಪ್ರಕರಣದಲ್ಲಿ ಶಾರ್ಜೀಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಇಬ್ಬರಿಗೂ ಈ ಹಿಂದೆ ಜಾಮೀನು ನೀಡಲಾಗಿತ್ತು. ಫೆಬ್ರವರಿ 2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಅಥವಾ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಅವರು ಜೈಲಿನಲ್ಲಿ ಇಡಲಾಗಿದೆ.

ಇದನ್ನೂ ಓದಿ:BBC documentary row: ವಿವಾದಿತ ಬಿಬಿಸಿ ಸಾಕ್ಷ್ಯಚಿತ್ರ ಕೇರಳದಲ್ಲಿ ಪ್ರದರ್ಶಿಸಿದ ಕಾಂಗ್ರೆಸ್

ಪ್ರಾಸಿಕ್ಯೂಷನ್ ಪ್ರಕಾರ, ಇಮಾಮ್ ಅವರು ಡಿಸೆಂಬರ್ 13, 2019 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಮತ್ತು ಡಿಸೆಂಬರ್ 16, 2019 ರಂದು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿದರು, ಅಲ್ಲಿ ಅವರು ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳನ್ನು ಭಾರತದ ಉಳಿದ ಭಾಗಗಳಿಂದ ಕತ್ತರಿಸುವುದಾಗಿ ಎಂಬ ಹೇಳಿಕೆ ವಿವಾದವನ್ನು ಸೃಷ್ಟಿ ಮಾಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದುಲು ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Sat, 4 February 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us