AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Encounter: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ, ಪುಲ್ವಾಮಾದಲ್ಲಿ ಓರ್ವ ಉಗ್ರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಮೊನ್ನೆಯಷ್ಟೇ ದಾಳಿ ನಡೆದಿದ್ದು, ಓರ್ವ ಕಾಶ್ಮೀರಿ ಪಂಡಿತರು ಮೃತಪಟ್ಟಿದ್ದರು.

Pulwama Encounter: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಭಾರತೀಯ ಸೇನೆ
ನಯನಾ ರಾಜೀವ್
|

Updated on: Feb 28, 2023 | 8:20 AM

Share

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ, ಪುಲ್ವಾಮಾದಲ್ಲಿ ಓರ್ವ ಉಗ್ರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಮೊನ್ನೆಯಷ್ಟೇ ದಾಳಿ ನಡೆದಿದ್ದು, ಓರ್ವ ಕಾಶ್ಮೀರಿ ಪಂಡಿತರು ಮೃತಪಟ್ಟಿದ್ದರು. ತಕ್ಷಣವೇ ಉಗ್ರರನ್ನು ಹುಡುಕುವ ಕಾರ್ಯಾಚರಣೆಯನ್ನು ಸೇನೆ ಶುರು ಮಾಡಿತ್ತು. ಮಂಗಳವಾರ ಮುಂಜಾನೆ ಅವಂತಿಪೋರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲ ಸೇನೆ ಸಫಲವಾಗಿದೆ.

ಭಾನುವಾರ ಮುಂಜಾನೆ ಕಾಶ್ಮೀರಿ ಪಂಡಿತ್ (ಸಂಜಯ್ ಶರ್ಮಾ) ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಮತ್ತಷ್ಟು ಓದಿ: Kashmiri Pandits: ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ, ಓರ್ವ ಕಾಶ್ಮೀರಿ ಪಂಡಿತನ ಹತ್ಯೆ

ಸಂಜಯ್ ಶರ್ಮಾ ಜಮ್ಮು ಕಾಶ್ಮೀರದ ಬ್ಯಾಂಕ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದರು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ, ಕಣಿವೆಯಲ್ಲಿ ನಡೆದ ಮತ್ತೊಂದು ಉದ್ದೇಶಿತ ಹತ್ಯೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ತನ್ನ ಗ್ರಾಮದಲ್ಲಿ ಶಸ್ತ್ರಸಜ್ಜಿತ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಸಂಜಯ್ ಶರ್ಮಾ ಮೇಲೆ ಭಯೋತ್ಪಾದಕರು ಬೆಳಗ್ಗೆ ಗುಂಡು ಹಾರಿಸಿದ್ದಾರೆ. ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರನ್ನು ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ ಪೊಲೀಸರು ತಿಳಿಸಿದ್ದಾರೆ.

‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ವೃಥಾ ಹೇಳಿಕೆ ನೀಡುವ ಶಾಸಕರ ವಿರುದ್ಧ ಹೈಕಮಾಂಡ್ ಕ್ರಮ ತಗೊಳ್ಳುತ್ತೆ: ಸಚಿವ
ವೃಥಾ ಹೇಳಿಕೆ ನೀಡುವ ಶಾಸಕರ ವಿರುದ್ಧ ಹೈಕಮಾಂಡ್ ಕ್ರಮ ತಗೊಳ್ಳುತ್ತೆ: ಸಚಿವ