AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmi: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾದಕರ ಹತ್ಯೆ

ಬಾರಾಮುಲ್ಲಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯಿತು. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಕಾರ್ಯಾಚರಣೆಯಲ್ಲಿ ಕುಲ್ಗಾಮ್ ಜಿಲ್ಲೆಯ ಅವ್ಹೋಟು ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Jammu And Kashmi: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾದಕರ ಹತ್ಯೆ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 30, 2022 | 9:54 AM

Share

ಬಾರಾಮುಲ್ಲಾ: ಇಂದು ( ಶುಕ್ರವಾರ) ಮುಂಜಾನೆ ಬಾರಾಮುಲ್ಲಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯಿತು. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಚರಣೆ ಮಾಡುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಶುಕ್ರವಾರ ಮುಂಜಾನೆ ಶೋಪಿಯಾನ್ ಜಿಲ್ಲೆಯ ಚಿತ್ರಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಮತ್ತೊಂದು ಎನ್‌ಕೌಂಟರ್ ಪ್ರಾರಂಭವಾಯಿತು. ಮಂಗಳವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಕುಲ್ಗಾಮ್ ಜಿಲ್ಲೆಯ ಅವ್ಹೋಟು ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಕೌಂಟರ್ ಸ್ಥಳದ ಶೋಧ ಕಾರ್ಯವನ್ನು ಆರಂಭಿಸಲಾಗಿದೆ, ಎರಡು ಎಕೆ ಸರಣಿ ರೈಫಲ್‌ಗಳು, ಗ್ರೆನೇಡ್‌ಗಳು ಮತ್ತು ಇತರ ಯುದ್ಧೋಚಿತ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಟಸ್ಥಗೊಂಡ ಭಯೋತ್ಪಾದಕರನ್ನು ಕುಲ್ಗಾಮ್‌ನ ಟಾಕಿಯಾದ ಮೊಹಮ್ಮದ್ ಶಫಿ ಗನಿ ಮತ್ತು ಮೊಹಮ್ಮದ್ ಆಸಿಫ್ ವಾನಿ ಎಂದು ಪೊಲೀಸರು ಗುರುತಿಸಿದ್ದಾರೆ. ಇಬ್ಬರೂ ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಸಂಘಟನೆಯ ಸದಸ್ಯರಾಗಿದ್ದರು.

ಗ್ರಾಮದಲ್ಲಿ ಶಂಕಿತ ಮನೆಗಳ ಸಮೂಹದ ಸುತ್ತಲೂ ಸೇನೆಯು ತ್ವರಿತ ಆರಂಭಿಕ ಕಾರ್ಡನ್​ನ್ನು ಸ್ಥಾಪಿಸಿತು, ನಂತರ ಅದನ್ನು ಹೆಚ್ಚುವರಿ ಪಡೆಗಳಿಂದ ಬಲಪಡಿಸಲಾಯಿತು. ಶಂಕಿತ ಸ್ಥಳದಲ್ಲಿ ಭಯೋತ್ಪಾದಕರ ಇರುವುದನ್ನು ದೃಢಪಡಿಸಿದ ನಂತರ, ಕಾರ್ಡನ್‌ನಿಂದ ಸುರಕ್ಷಿತ ಸ್ಥಳಕ್ಕೆ ನಾಗರಿಕರನ್ನು ಸ್ಥಳಾಂತರಿಸಲಾಗಿದೆ.

ಉದ್ದೇಶಿತ ಮನೆಯ ಹುಡುಕಾಟದ ಸಮಯದಲ್ಲಿ, ಭಯೋತ್ಪಾದಕರು ಕಾರ್ಡನ್​ನ್ನು ನಾಶಪಡಿಸಲು ಮನಬಂದಂತೆ ಗುಂಡಿನ ದಾಳಿ ನಡೆಸಿದರು. ಪಡೆಗಳು ಪರಿಣಾಮಕಾರಿ ಗುಂಡಿನ ದಾಳಿಗೆ ಪ್ರತಿದಾಳಿ ನಡೆಸಿದರು, ಈ ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ, ಒಬ್ಬ ಸೈನಿಕನಿಗೆ ಪಾದದಲ್ಲಿ ಸ್ಪ್ಲಿಂಟರ್ ಗಾಯವಾಗಿದೆ.

ಸೈನಿಕನನ್ನು ಅವಂತಿಪುರದ 439 ಫೀಲ್ಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಭಯೋತ್ಪಾದಕರ  ಗುಂಡಿನ ದಾಳಿಯಿಂದಾಗಿ, ಅಲ್ಲಿದ ಮನೆಗಳ ಸುತ್ತಮುತ್ತಲಿನ ಗ್ಯಾಸ್ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು  ಸ್ಫೋಟಗಳಿಗೆ  ನಡೆದಿದೆ. ಬೆಂಕಿ ನಂದಿಸಲು ನೀರಿನ ಬೌಸರ್‌ಗಳು ಮತ್ತು ಫೋಮ್ ಸ್ಪ್ರಿಂಕ್ಲರ್‌ಗಳ ಮೂಲಕ ಬೆಂಕಿಯನ್ನು ನಂದಿಸಲು ಸೈನ್ಯ ಮತ್ತು ಪೊಲೀಸರ ಪ್ರಯತ್ನಗಳು ಮಾಡಿದ್ದಾರೆ, ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದೆ.  ನಂತರ ಮತ್ತೆ ಗುಂಡಿನ ದಾಳಿ ನಡೆದು ಇನ್ನೊಬ್ಬ ಭಯೋತ್ಪಾದಕನನ್ನು  ಕೂಡ ಹತ್ಯೆ ಮಾಡಲಾಗಿದೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್