ಉರಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ಯೋಧರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರೀ ಶಸ್ತ್ರಾಸ್ತ್ರ ಸಜ್ಜಿತ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಮಾಹಿತಿ ನೀಡಿದ್ದವು.

ಭಾರತೀಯ ಸೇನೆ
Follow us
ನಯನಾ ರಾಜೀವ್
|

Updated on: Oct 23, 2023 | 9:21 AM

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ಯೋಧರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರೀ ಶಸ್ತ್ರಾಸ್ತ್ರ ಸಜ್ಜಿತ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಮಾಹಿತಿ ನೀಡಿದ್ದವು.

ಇದಾದ ಬಳಿಕ ಗಡಿಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿತ್ತು. ನಿರಂತರ ಮಳೆ ಕಡಿಮೆ ಗೋಚರತೆ ಹಾಗೂ ಕೆಟ್ಟ ಹವಾಮಾನದ ಲಾಭ ಪಡೆದು ಶಸ್ತ್ರಸಜ್ಜಿತ ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆಯನ್ನು ದಾಟಲು ಪ್ರಯತ್ನಪಟ್ಟರು. ಶುಕ್ರವಾರ, ಶನಿವಾರ ಮಧ್ಯರಾತ್ರಿ ಎನ್​ಕೌಂಟರ್​ ನಡೆಯಿತು. ಬೆಳಗಿನ ಜಾವದವರೆಗೂ ಎನ್​ಕೌಂಟರ್​ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ನಿಯಂತ್ರಣ ರೇಖೆಯ ಇನ್ನೊಂದು ಬದಿಯಲ್ಲಿದ್ದ ಭಯೋತ್ಪಾದಕರು ಎನ್​ಕೌಂಟರ್​ನಲ್ಲಿ ಹತರಾದ ಭಯೋತ್ಪಾದಕರ ದೇಹಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ

ಭಾನುವಾರ ಘಟನಾ ಸ್ಥಳದಲ್ಲಿ ಸಂಪೂರ್ಣ ಶೋಧ ನಡೆದಿದ್ದು, 2ಎಕೆ ಸಿರೀಸ್ ರೈಫಲ್​ಗಳು, 6 ಪಿಸ್ತೂಲ್​ಗಳು, 4 ಚೈನೀಸ್​ ನಿರ್ಮಿತ ಹ್ಯಾಂಡ್ ಗ್ರೆನೇಡ್​ಗಳು, ಬ್ಲಾಂಕೆಟ್​ಗಳು 2 ರಕ್ತ ಬಣ್ಣದ ಬ್ಯಾಗ್​ಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬ್ಯಾಗ್​ನಲ್ಲಿ ಪಾಕಿಸ್ತಾನ ಕರೆನ್ಸಿ ಮತ್ತು ಭಾರತ ಕರೆನ್ಸಿ, ಪಾಕಿಸ್ತಾನದಲ್ಲಿ ಉತ್ಪಾದಿಸಿದ ಔಷಧಿಗಳು, ಆಹಾರ ಪದಾರ್ಥಗಳು ಪತ್ತೆಯಾಗಿವೆ. ಇದೀಗ ಈ ಪ್ರದೇಶದಲ್ಲಿ ಸೇನೆ ಕಟ್ಟೆಚ್ಚರವಹಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್