AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದ ಉರಿಯಲ್ಲಿ ಎನ್​ಕೌಂಟರ್​, ಇಬ್ಬರು ಉಗ್ರರ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಇಬ್ಬರು ಉಗ್ರರನ್ನು ಸದೆಬಡಿದಿದೆ. ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನ ಗೋಹಲ್ಲಾನ್ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನವಲನವನ್ನು ಸೇನಾ ಸಿಬ್ಬಂದಿ ಗಮನಿಸಿದ್ದಾರೆ. ಇದನ್ನು ಪ್ರಶ್ನಿಸಿದ ಉಗ್ರರು ಗುಂಡಿನ ದಾಳಿ ನಡೆಸಿ, ಸೇನಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು.

ಜಮ್ಮು ಕಾಶ್ಮೀರದ ಉರಿಯಲ್ಲಿ ಎನ್​ಕೌಂಟರ್​, ಇಬ್ಬರು ಉಗ್ರರ ಹತ್ಯೆ
ನಯನಾ ರಾಜೀವ್
|

Updated on: Jun 23, 2024 | 11:21 AM

Share

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ.

ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನ ಗೋಹಲ್ಲಾನ್ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನವಲನವನ್ನು ಸೇನಾ ಸಿಬ್ಬಂದಿ ಗಮನಿಸಿದ್ದಾರೆ. ಇದನ್ನು ಪ್ರಶ್ನಿಸಿದ ಉಗ್ರರು ಗುಂಡಿನ ದಾಳಿ ನಡೆಸಿ, ಸೇನಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು.

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಸೇನಾ ಸಿಬ್ಬಂದಿ ಪ್ರದೇಶದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡರು.

ಮತ್ತಷ್ಟು ಓದಿ: Khalistan Terrorist: ಲಾಹೋರ್​ನಲ್ಲಿ ಖಲಿಸ್ತಾನಿ ಉಗ್ರ ಪರಮ್​ಜಿತ್ ಸಿಂಗ್​ನನ್ನು ಗುಂಡಿಕ್ಕಿ ಹತ್ಯೆ

ಕಳೆದ ವಾರದ ಆರಂಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು ಮತ್ತು ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.

ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ.

ಸೋಪೋರ್‌ನ ಹಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಕೊಂದಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್