ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ.
ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನ ಗೋಹಲ್ಲಾನ್ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನವಲನವನ್ನು ಸೇನಾ ಸಿಬ್ಬಂದಿ ಗಮನಿಸಿದ್ದಾರೆ. ಇದನ್ನು ಪ್ರಶ್ನಿಸಿದ ಉಗ್ರರು ಗುಂಡಿನ ದಾಳಿ ನಡೆಸಿ, ಸೇನಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು.
ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಸೇನಾ ಸಿಬ್ಬಂದಿ ಪ್ರದೇಶದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡರು.
ಮತ್ತಷ್ಟು ಓದಿ: Khalistan Terrorist: ಲಾಹೋರ್ನಲ್ಲಿ ಖಲಿಸ್ತಾನಿ ಉಗ್ರ ಪರಮ್ಜಿತ್ ಸಿಂಗ್ನನ್ನು ಗುಂಡಿಕ್ಕಿ ಹತ್ಯೆ
ಕಳೆದ ವಾರದ ಆರಂಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು ಮತ್ತು ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.
ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ.
ಸೋಪೋರ್‌ನ ಹಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಕೊಂದಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ