Jammu And Kashmir: ಶೋಪಿಯಾನ್ನಲ್ಲಿ 3 LET ಭಯೋತ್ಪಾದಕರ ಹತ್ಯೆ, ಶೋಧ ಮುಂದುವರಿಕೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರ(Terrorist)ರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರ(Terrorist)ರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋಪಿಯಾನ್‌ನ ಝೈನಾಪೋರಾ ಪ್ರದೇಶದ ಮುಂಜ್ ಮಾರ್ಗ್‌ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆಯು ನಂತರ ಅದು ಎನ್‌ಕೌಂಟರ್‌ಗೆ ತಿರುಗಿತು, ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಸಂಬಂಧ ಹೊಂದಿದ್ದ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ, ಗುರುತನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಬೇಕಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಕಾಶ್ಮೀರಿ ಪಂಡಿತರನ್ನು ಟಾರ್ಗೆಟ್ ಮಾಡಿದ ಲಷ್ಕರ್ ಉಗ್ರರು; ಹಿಟ್ಲಿಸ್ಟ್ನಲ್ಲಿರುವ 56 ಉದ್ಯೋಗಿಗಳ ಪಟ್ಟಿ ಬಿಡುಗಡೆ
ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದ ಕಾಶ್ಮೀರಿ ಪಂಡಿತ್ ಪುರಾಣ ಕೃಷ್ಣ ಭಟ್ ಮತ್ತು ಅನಂತನಾಗ್‌ನ ಉಮರ್ ನಜೀರ್ ಮತ್ತು 1 ಎಕೆ 47 ರೈಫಲ್ ಮತ್ತು 2 ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಾಶ್ಮೀರ ಎಡಿಜಿಪಿ ಹೇಳಿದ್ದಾರೆ.
ಶೋಪಿಯಾನ್ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್ ಕೌಂಟರ್ ನಡೆದಿದೆ. ಅಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಜ್ ಮಾರ್ಗ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು, 1RR, 178 CRPF ಮತ್ತು ಇತರರು ಕಾರ್ಯನಿರತರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ