ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ, ಓರ್ವ ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಮುಂದುವರೆದಿದೆ. ದೋಡಾದಿಂದ 30 ಕಿಮೀ ದೂರದಲ್ಲಿರುವ ಕೋಟಿ ಗ್ರಾಮದ ಶಿಯಾ ಧಾರ್ ಚೌಂಡ್ ಮಾತಾ ಪ್ರದೇಶದಲ್ಲಿ ಭಯೋತ್ಪಾದಕರ ಬಗ್ಗೆ ಮಾಹಿತಿ ಪಡೆದ ನಂತರ, ಸೇನೆಯು ಪ್ರದೇಶವನ್ನು ಸುತ್ತುವರೆದಿದೆ, ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು. ಈ ಎನ್‌ಕೌಂಟರ್‌ನಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ, ಓರ್ವ ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮ
ಭಾರತೀಯ ಸೇನೆ
Follow us
|

Updated on: Jul 16, 2024 | 8:05 AM

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಉಗ್ರರು ಹಾಗೂ ಸೇನೆಯ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ (ಜೆಕೆ ಪೊಲೀಸ್) ವಿಶೇಷ ಕಾರ್ಯಾಚರಣೆ ಗ್ರೂಪ್ ಸಿಬ್ಬಂದಿ ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ರಾತ್ರಿ 7.45 ರ ಸುಮಾರಿಗೆ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮಣಿಪುರದಲ್ಲಿ ಸಿಆರ್​ಪಿಎಫ್​, ಪೊಲೀಸ್ ಜಂಟಿ ​ ಪಡೆಯ ಮೇಲೆ ಹೊಂಚು ದಾಳಿ, ಓರ್ವ ಯೋಧ ಹುತಾತ್ಮ

ಆ ಪ್ರದೇಶಕ್ಕೆ ಹೆಚ್ಚುವರಿ ಯೋಧರನ್ನು ಕಳುಹಿಸಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿಯ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್ ವಕ್ತಾರರು ಎನ್‌ಕೌಂಟರ್ ಅನ್ನು ಖಚಿತಪಡಿಸಿದ್ದಾರೆ, ಆದರೆ ಹೆಚ್ಚಿನ ಮಾಹಿತಿಗಾಗಿ ಇನ್ನೂ ಕಾಯಲಾಗುತ್ತಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಭಯೋತ್ಪಾದಕರ ಅಡಗುತಾಣದಿಂದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. 30 ಸುತ್ತುಗಳ ಎಕೆ-47, ಎಕೆ-47 ರೈಫಲ್‌ನ ಒಂದು ಮ್ಯಾಗಜೀನ್ ಮತ್ತು ಒಂದು ಎಚ್‌ಇ-36 ಹ್ಯಾಂಡ್ ಗ್ರೆನೇಡ್ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 35 ದಿನಗಳಲ್ಲಿ ದೋಡಾ ಪ್ರದೇಶದಲ್ಲಿ ಇದು ನಾಲ್ಕನೇ ಎನ್‌ಕೌಂಟರ್ ಆಗಿದೆ. ದೇ ಸಮಯದಲ್ಲಿ, ಸೋಮವಾರ ಜಮ್ಮು ಮತ್ತು ಕಥುವಾ ಜಿಲ್ಲೆಗಳಲ್ಲಿ ಶಂಕಿತರು ಕಾಣಿಸಿಕೊಂಡಿದ್ದಾರೆ. ಇದಾದ ಬಳಿಕ ಭದ್ರತಾ ಪಡೆಗಳು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದವು.

ದೋಡಾ ಅರಣ್ಯದಲ್ಲಿ ಭಯೋತ್ಪಾದಕರ ಗುಂಪು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಈ ಕುರಿತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಪಡೆ (ಎಸ್‌ಒಜಿ) ಮತ್ತು ಸೇನಾ ಸಿಬ್ಬಂದಿ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು.

ಒಂದೂವರೆ ತಿಂಗಳಿನಿಂದ ಏನೇನಾಯ್ತು? ಜೂನ್ 9 ರಂದು ಶಿವಖೋಡಿ ಭಕ್ತರ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದರು. 9 ಜನರು ಸಾವನ್ನಪ್ಪಿದರು, 41 ಜನರು ಗಾಯಗೊಂಡರು. ಜೂನ್ 11ರಂದು ಕಥುವಾ ಗ್ರಾಮಕ್ಕೆ ಉಗ್ರರು ಪ್ರವೇಶಿಸಿದ್ದರು. ಇಬ್ಬರು ಭಯೋತ್ಪಾದಕರ ಹತ್ಯೆ, ಒಬ್ಬ ಯೋಧ ಹುತಾತ್ಮ.

-ಜೂನ್ 11 ರಂದು ದೋಡಾದಲ್ಲಿ ಎರಡು ಭಯೋತ್ಪಾದಕ ದಾಳಿಗಳು. ಕೆಲವು ಯೋಧರು ಗಾಯಗೊಂಡಿದ್ದಾರೆ. ಉಗ್ರರು ಪರಾರಿಯಾಗಿದ್ದರು.

-ಜುಲೈ 8 ರಂದು ಕಥುವಾದ ಬದ್ನೋಟಾದಲ್ಲಿ ಭದ್ರತಾ ಪಡೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಐವರು ಯೋಧರು ಬಲಿ, ಐವರು ಗಾಯಗೊಂಡಿದ್ದಾರೆ.

-ಜುಲೈ 10 ರಂದು ಉಧಮ್‌ಪುರದ ಬಸಂತ್‌ಗಢ ಪ್ರದೇಶದಲ್ಲಿ ಉಗ್ರರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ