ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಮುಂದಿನ ವಾರದಿಂದ ಬಿಜೆಪಿ ಪ್ರಚಾರ ಶುರು

|

Updated on: Aug 18, 2024 | 11:36 AM

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಮುಂದಿನ ವಾರದಿಂದ ಪ್ರಚಾರ ಆರಂಭಿಸಲಿದೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಪ್ರಚಾರ ಆರಂಭಗೊಳ್ಳಲಿದೆ. ಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರಾಡಳಿತ ಪ್ರದೇಶದಾದ್ಯಂತ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಚುನಾವಣೆ: ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಮುಂದಿನ ವಾರದಿಂದ ಬಿಜೆಪಿ ಪ್ರಚಾರ ಶುರು
ನರೇಂದ್ರ ಮೋದಿ
Image Credit source: The Print
Follow us on

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಮುಂದಿನ ವಾರದಿಂದ ಪ್ರಚಾರ ಆರಂಭಿಸಲಿದೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಪ್ರಚಾರ ಆರಂಭಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರಾಡಳಿತ ಪ್ರದೇಶದಾದ್ಯಂತ ರ್ಯಾಲಿಗಳನ್ನು ನಡೆಸಲಿದ್ದಾರೆ.

ಬಿಜೆಪಿಯು ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರೀಕ್ಷೆಯಿದೆ , ಕಾಶ್ಮೀರ ಕಣಿವೆಯಲ್ಲಿ ಸ್ವತಂತ್ರ ಮತ್ತು ಸಣ್ಣ ಪಕ್ಷಗಳೊಂದಿಗೆ ಸೀಟು ಹೊಂದಾಣಿಕೆಗಳನ್ನು ಮಾತ್ರ ಆರಿಸಿಕೊಳ್ಳುತ್ತದೆ. ಶೇ.80ರಷ್ಟು ಅಭ್ಯರ್ಥಿಗಳು ಹೊಸ ಮುಖಗಳಾಗಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಇಂದು ಜಮ್ಮುವಿನಲ್ಲಿ ಮಹತ್ವದ ಸಭೆ ನಡೆಸಲಿದ್ದು, ಕೇಂದ್ರ ಸಚಿವ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಉಸ್ತುವಾರಿ ಜಿ ಕಿಶನ್ ರೆಡ್ಡಿ, ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಮತ್ತು ಇತರ ಪ್ರಮುಖ ನಾಯಕರು ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆಯನ್ನು ಅಂತಿಮಗೊಳಿಸುತ್ತದೆ.

ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರ ಮತ್ತು ಹರ್ಯಾಣ ಚುನಾವಣೆ ವೇಳಾಪಟ್ಟಿ ಪ್ರಕಟ; ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.

2019 ರಲ್ಲಿ ಜಮ್ಮು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಸಂವಿಧಾನದ 370ನೇ ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿತ್ತು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ.

ಹರ್ಯಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 12ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಸೆಪ್ಟೆಂಬರ್ 16ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. 90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ರಾಜೀವ್ ಕುಮಾರ್ ಅವರು ತಿಳಿಸಿದರು.

ಇದೇ ವೇಳೆ 90 ವಿಧಾನಸಭಾ ಕ್ಷೇತ್ರಗಳಿರುವ ಹರ್ಯಾಣಕ್ಕೂ ಚುನಾವಣೆ ಘೋಷಿಸಿದ ರಾಜೀವ್ ಕುಮಾರ್ ಅವರು, ಅಕ್ಟೋಬರ್‌ 1 ರಂದು ಹರಿಯಾಣದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್‌ 4 ರಂದು ನಡೆಯಲಿದೆ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ