ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ಮರು ಸ್ಥಾಪನೆ ನಿರ್ಣಯ ಅಂಗೀಕರಿಸಿದ ಒಮರ್ ಸರ್ಕಾರ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರು ಸ್ಥಾಪನೆ ನಿರ್ಣಯವನ್ನು ಒಮರ್ ಅಬ್ದುಲ್ಲಾ ಸರ್ಕಾರ ಅಂಗೀಕರಿಸಿದೆ. ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವಂತೆ ಕೇಂದ್ರ ಸರ್ಕಾರವನ್ನು ಕೇಳುವ ಧ್ವನಿ ಮತದ ನಿರ್ಣಯದ ಮೂಲಕ ವಿಧಾನಸಭೆ ಅಂಗೀಕರಿಸಿತು. ಬಿಜೆಪಿ ನಾಯಕರ ಗದ್ದಲದ ನಡುವೆಯೇ ನಿರ್ಣಯ ಅಂಗೀಕರಿಸಲಾಯಿತು.

ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ಮರು ಸ್ಥಾಪನೆ ನಿರ್ಣಯ ಅಂಗೀಕರಿಸಿದ ಒಮರ್ ಸರ್ಕಾರ
ಒಮರ್ ಅಬ್ದುಲ್ಲಾImage Credit source: Mint
Follow us
ನಯನಾ ರಾಜೀವ್
|

Updated on:Nov 06, 2024 | 11:14 AM

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರು ಸ್ಥಾಪನೆ ನಿರ್ಣಯವನ್ನು ಒಮರ್ ಅಬ್ದುಲ್ಲಾ ಸರ್ಕಾರ ಅಂಗೀಕರಿಸಿದೆ. ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವಂತೆ ಕೇಂದ್ರ ಸರ್ಕಾರವನ್ನು ಕೇಳುವ ಧ್ವನಿ ಮತದ ನಿರ್ಣಯದ ಮೂಲಕ ವಿಧಾನಸಭೆ ಅಂಗೀಕರಿಸಿತು. ಬಿಜೆಪಿ ನಾಯಕರ ಗದ್ದಲದ ನಡುವೆಯೇ ನಿರ್ಣಯ ಅಂಗೀಕರಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ವರ್ಷಗಳ ಬಳಿಕ ಸರ್ಕಾರ ರಚನೆಯಾಗಿ, ಅಧಿವೇಶನ ಕರೆದ ಮೊದಲ ದಿನವೇ ಕೋಲಾಹಲಕ್ಕೆ ಸಾಕ್ಷಿಯಾಯಿತು. ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದತಿ ವಿರುದ್ಧ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಶಾಸಕ ವಹೀದ್ ಪಾರಾ ನಿರ್ಣಯ ಮಂಡಿಸಿದ ಬಳಿಕ ಗದ್ದಲ ಏರ್ಪಟ್ಟಿತ್ತು.

ಕೇಂದ್ರ ಸರ್ಕಾರವು 2019ರ ಅಗಸ್ಟ್ ತಿಂಗಳಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿತ್ತು. ವಿಶೇಷ ಸ್ಥಾನಮಾನವನ್ನು ಮರು ಸ್ಥಾಪನೆ ಮಾಡಬೇಕು ಎಂದು ಪಿಡಿಪಿ ಆಗ್ರಹಿಸಿದೆ.

ಮತ್ತಷ್ಟು ಓದಿ: ಜಮ್ಮು-ಕಾಶ್ಮೀರ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ, ನೂತನ ಅಧ್ಯಕ್ಷರಾಗಿ ಸತ್ ಶರ್ಮಾ ನೇಮಕ

ಮರುಸ್ಥಾಪನೆ ಪ್ರಕ್ರಿಯೆಯು ಜಮ್ಮು ಮತ್ತು ಕಾಶ್ಮೀರದ ಜನರ ಕಾನೂನುಬದ್ಧ ಆಕಾಂಕ್ಷೆಗಳೊಂದಿಗೆ ರಾಷ್ಟ್ರೀಯ ಏಕತೆಯನ್ನು ಸಮತೋಲನಗೊಳಿಸಬೇಕು ಎಂದು ನಿರ್ಣಯವು ಒತ್ತಿಹೇಳಿತು. ವಿರೋಧ ಪಕ್ಷದ ನಾಯಕ ಸುನೀಲ್ ಶರ್ಮಾ ಸೇರಿದಂತೆ ಬಿಜೆಪಿ ಸದಸ್ಯರು ನಿರ್ಣಯವನ್ನು ವಿರೋಧಿಸಿದರು.

ನಾವು ನಿರ್ಣಯವನ್ನು ತಿರಸ್ಕರಿಸುತ್ತೇವೆ. ನಮಗೆ ನೀಡಲಾದ ಕಾರ್ಯಸೂಚಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ಭಾಷಣದ ಮೇಲೆ ಚರ್ಚೆಯನ್ನು ನಿರ್ದಿಷ್ಟಪಡಿಸಲಾಗಿದೆ ಎಂದು ಶರ್ಮಾ ಹೇಳಿದರು, ಏನೂ ಬದಲಾಗುವುದಿಲ್ಲ ಎಂದು ತಿಳಿದಿದ್ದರೂ ಸ್ಥಳೀಯ ಪಕ್ಷಗಳು ಪಟ್ಟು ಹಿಡಿದಿವೆ ಎಂದರು.

ಸದನ ಆರಂಭದಲ್ಲಿ ಪಿಡಿಪಿ ಶಾಸಕ ವಹೀದ್ ಉರ್ ರೆಹಮಾನ್ ಪ್ಯಾರಾ ಅವರು ಅಧಿವೇಶನದ ಮೊದಲ ದಿನದಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು 370ನೇ ವಿಧಿ ರದ್ದುಗೊಳಿಸುವ ಕುರಿತು ನಿರ್ಣಯ ಮಂಡಿಸಿದ ನಂತರ ವಿಧಾನಸಭೆಯಲ್ಲಿ ಗದ್ದಲ ಏರ್ಪಟ್ಟಿತ್ತು.

ಮೊದಲ ಅಧಿವೇಶನ ನವೆಂಬರ್ 8 ರಂದು ಮುಕ್ತಾಯಗೊಳ್ಳಲಿದೆ. ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಭಾಷಣದ ಜೊತೆಗೆ, ನವೆಂಬರ್ 5 ರಂದು ಹಿಂದಿನ ವಿಧಾನಸಭೆಯ ಸದಸ್ಯರ ಅಗಲಿಕೆ ಸಂತಾಪ ಸೂಚಕ ನಡೆಯಿತು.

ಹೊಸ ಸರ್ಕಾರ ಜಮ್ಮು ಕಾಶ್ಮೀರಕ್ಕ ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.

ರಾಜ್ಯಕ್ಕೆ ಲಭ್ಯವಿರುವ ಸಾಂವಿಧಾನಿಕ ಖಾತರಿಗಳು. ನಮ್ಮ ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಜನರು ಇಟ್ಟಿರುವ ನಂಬಿಕೆಯ ಪ್ರತಿಫಲವಾಗಿದೆ ಎಂದು ಹೇಳಿದ್ದಾರೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Wed, 6 November 24

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್