ಜಮ್ಮು-ಕಾಶ್ಮೀರ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ, ನೂತನ ಅಧ್ಯಕ್ಷರಾಗಿ ಸತ್ ಶರ್ಮಾ ನೇಮಕ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಬಳಿಕ ನಡೆದ ಮಹತ್ವದ ಬದಲಾವಣೆಯಲ್ಲಿ, ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ಸತ್ ಶರ್ಮಾ ಅವರನ್ನು ನೇಮಿಸಿದೆ. ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಸತ್ ಶರ್ಮಾ ಅವರನ್ನು ಬಿಜೆಪಿ ನೇಮಕ ಮಾಡಿದ್ದು, ರವೀಂದ್ರ ರೈನಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಮಾಡಲಾಗಿದೆ.

ಜಮ್ಮು-ಕಾಶ್ಮೀರ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ, ನೂತನ ಅಧ್ಯಕ್ಷರಾಗಿ ಸತ್ ಶರ್ಮಾ ನೇಮಕ
ಸತ್ ಶರ್ಮಾ
Follow us
ನಯನಾ ರಾಜೀವ್
|

Updated on: Nov 03, 2024 | 11:36 AM

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಬಳಿಕ ನಡೆದ ಮಹತ್ವದ ಬದಲಾವಣೆಯಲ್ಲಿ, ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ಸತ್ ಶರ್ಮಾ ಅವರನ್ನು ನೇಮಿಸಿದೆ. ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಸತ್ ಶರ್ಮಾ ಅವರನ್ನು ಬಿಜೆಪಿ ನೇಮಕ ಮಾಡಿದ್ದು, ರವೀಂದ್ರ ರೈನಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಮಾಡಲಾಗಿದೆ.

ವಾಸ್ತವವಾಗಿ, ಸೆಪ್ಟೆಂಬರ್ 9, 2024 ರಂದು, ವಿಧಾನಸಭಾ ಚುನಾವಣೆ ನಡೆದು ಕೆಲವೇ ದಿನಗಳಲ್ಲಿ, ಬಿಜೆಪಿಯು ಸತ್ ಶರ್ಮಾ ಅವರನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕಾರ್ಯಾಧ್ಯಕ್ಷರನ್ನಾಗಿ ಮಾಡಿದೆ. ಈ ಬಾರಿ ಬಿಜೆಪಿ ಸತ್ ಶರ್ಮಾಗೆ ಟಿಕೆಟ್ ನೀಡಿರಲಿಲ್ಲ, ಕಳೆದ ವಿಧಾನಸಭಾ ಚುನಾವಣೆಯಲ್ಲಿ (2014), ಜಮ್ಮು ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಸತ್ ಶರ್ಮಾ ಗೆದ್ದಿದ್ದರು, ಆದರೆ ಈ ಬಾರಿ ಬಿಜೆಪಿ ಈ ಸ್ಥಾನದಿಂದ ಅರವಿಂದ್ ಗುಪ್ತಾಗೆ ಟಿಕೆಟ್ ನೀಡಿದೆ. ಈ ಕ್ಷೇತ್ರದಲ್ಲಿ ಅರವಿಂದ್ ಗುಪ್ತಾ ಗೆಲುವು ಸಾಧಿಸಿದ್ದಾರೆ. ಅವರು ಕಾಂಗ್ರೆಸ್‌ನ ಮನಮೋಹನ್ ಸಿಂಗ್ ಅವರನ್ನು 22127 ಮತಗಳಿಂದ ಸೋಲಿಸಿದರು. ಬಿಜೆಪಿ ಅಭ್ಯರ್ಥಿ ಗುಪ್ತಾ 41963 ಮತಗಳನ್ನು ಪಡೆದರೆ ಮನಮೋಹನ್ ಸಿಂಗ್ 19836 ಮತಗಳನ್ನು ಪಡೆದಿದ್ದಾರೆ.

ಎರಡನೇ ಬಾರಿಗೆ ಜಮ್ಮು-ಕಾಶ್ಮೀರದ ಕಮಾಂಡ್ ಪಡೆದ ಸತ್ ಶರ್ಮಾ ಯಾರು? ಸತ್ ಶರ್ಮಾ ಅವರಿಗೆ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ಕಮಾಂಡ್ ನೀಡಲಾಗಿದೆ. ಇದಕ್ಕೂ ಮುನ್ನ ಅವರು 2014-2018ರ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು. 2014ರಲ್ಲಿ ಸತ್ ಶರ್ಮಾ ನೇತೃತ್ವದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಸತ್ ಶರ್ಮಾ ಚಾರ್ಟರ್ಡ್ ಅಕೌಂಟೆಂಟ್. ಅವರು ಜಮ್ಮುವಿನ ಡೋಗ್ರಾ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಅವರ ಆರಂಭಿಕ ಶಿಕ್ಷಣ ಜಮ್ಮುವಿನಿಂದಲೇ ಶುರವಾಗಿತ್ತು.

ಅವರು 1981 ರಲ್ಲಿ ಜಮ್ಮು ವಿಶ್ವವಿದ್ಯಾನಿಲಯದ GGM ವಿಜ್ಞಾನ ಕಾಲೇಜಿನಿಂದ B.Sc. 1986 ರಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್‌ನ ಫೆಲೋ ಆದರು. 2014ರ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಬಿಜೆಪಿ-ಪಿಡಿಪಿ ಸರ್ಕಾರದಲ್ಲಿ ಸಚಿವರೂ ಆಗಿದ್ದರು. ಈ ಸರ್ಕಾರದಲ್ಲಿ ಸತ್ ಶರ್ಮಾ ಅವರು 40 ದಿನಗಳ ಕಾಲ ವಸತಿ ಮತ್ತು ಅಭಿವೃದ್ಧಿ ಇಲಾಖೆಯ ಕ್ಯಾಬಿನೆಟ್ ಸಚಿವರಾಗಿದ್ದರು.

ಮತ್ತಷ್ಟು ಓದಿ: Jammu Kashmir Election Results: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು?

ರವೀಂದ್ರ ರೈನಾಗೆ ಸೋಲಿನ ಶಿಕ್ಷೆಯೇ? ರವೀಂದ್ರ ರೈನಾ ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು. ಅವರ ನೇತೃತ್ವದಲ್ಲಿಯೇ ಪಕ್ಷ ಚುನಾವಣೆ ಎದುರಿಸಿದೆ. ಆದರೆ ರೈನಾ ಅವರೇ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. 7819 ಮತಗಳಿಂದ ಹೀನಾಯ ಸೋಲು ಕಂಡಿದ್ದಾರೆ. ಇದಾದ ಬಳಿಕ ಸೋಲಿನ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಅಧಿಕೃತವಾಗಿ ದೃಢಪಟ್ಟಿಲ್ಲ ಎಂಬ ಚರ್ಚೆಯೂ ನಡೆದಿದೆ. ಆದರೆ ಬಿಜೆಪಿ ನೂತನ ಅಧ್ಯಕ್ಷರನ್ನು ಭಾನುವಾರ ಪ್ರಕಟಿಸಿದೆ.

ಜೆಕೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚಿಸಿತು ಜಮ್ಮು-ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ ಈ ಬಾರಿ ವಿಧಾನಸಭೆ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಗೆದ್ದು ಸರ್ಕಾರ ರಚಿಸಿತು. ಒಮರ್ ಅಬ್ದುಲ್ಲಾ ರಾಜ್ಯದ ಸಿಎಂ ಆದರು. ನ್ಯಾಷನಲ್ ಕಾನ್ಫರೆನ್ಸ್‌ಗೆ ಬಂಪರ್ ಜಯ ಸಿಕ್ಕಿದೆ. ಎನ್‌ಸಿ 42 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ ಕೇವಲ 6 ಸ್ಥಾನಗಳನ್ನು ಪಡೆದುಕೊಂಡಿದೆ. ಅದೇ ಸಮಯದಲ್ಲಿ ಬಿಜೆಪಿ 2014 ಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ 29 ಸ್ಥಾನಗಳನ್ನು ಗೆದ್ದಿದೆ.

ಕಳೆದ ತಿಂಗಳ ಆರಂಭದಲ್ಲಿ, ಬಿಜೆಪಿಯ ಸಂಸದೀಯ ಮಂಡಳಿಯು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ವೀಕ್ಷಕರನ್ನಾಗಿ ನೇಮಿಸಿತ್ತು. ಮೂಲಗಳನ್ನು ನಂಬುವುದಾದರೆ, 5 ಹೆಸರುಗಳನ್ನು ಪರಿಗಣಿಸಲಾಗುತ್ತಿದೆ. ಆದರೆ ಸಭೆಯ ನಂತರವೇ ಸಂಪೂರ್ಣ ಚಿತ್ರಣ ಸ್ಪಷ್ಟವಾಗಲಿದೆ.

ಹೊಸದಾಗಿ ಚುನಾಯಿತವಾಗಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮೊದಲ ಅಧಿವೇಶನ ನವೆಂಬರ್ 4 ರಂದು ನಡೆಯಲಿದೆ. ವಿಧಾನಸಭಾಧ್ಯಕ್ಷರ ಆಯ್ಕೆಯೊಂದಿಗೆ ಅಧಿವೇಶನ ಆರಂಭವಾಗಲಿದೆ. ಇದಾದ ಬಳಿಕ ರಾಜ್ಯಪಾಲರ ಭಾಷಣವೂ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ