ಜಮ್ಮು ಮತ್ತು ಕಾಶ್ಮೀರ: ಝೀಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್ ಪಲ್ಟಿ, ನಾಲ್ವರು ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್ ಪಲ್ಟಿಯಾಗಿದ್ದು, ಅನೇಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ಆರಂಭಿಸಿದೆ.

ಜಮ್ಮು ಮತ್ತು ಕಾಶ್ಮೀರ: ಝೀಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್ ಪಲ್ಟಿ, ನಾಲ್ವರು ಸಾವು, ಹಲವರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 16, 2024 | 11:04 AM

ಇಂದು (ಏ.16) ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಝೀಲಂ ನದಿಯಲ್ಲಿ ದೋಣಿ ಮುಳುಗಿರುವ ಘಟನೆ ನಡೆದಿದೆ. ಈ ಅನಾಹುತದಿಂದ ಹಲವು ಜನ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯರ ಪ್ರಕಾರ, ಈ ದೋಣಿಯಲ್ಲಿ ಹಲವಾರು ಶಾಲಾ ಮಕ್ಕಳಿದ್ದರು ಎಂದು ಹೇಳಲಾಗಿದೆ. ಇದೀಗ ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು,  ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.   ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ eನದಿಯ ಹರಿವು ಹೆಚ್ಚಾಗಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.  ಈ ದೋಣಿಯಲ್ಲಿ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮುಜಾಫರ್ ಜರ್ಗರ್, ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಲ್ಲಾಳಿಗಳಿಬ್ಬರ ಜಗಳ: ಬೆಂಕಿಗಾಹುತಿಯಾಯ್ತು 1 ಕೋಟಿ ರೂ. ಮೌಲ್ಯದ ಲಂಬೋರ್ಗಿನಿ ಕಾರು

ಇನ್ನು ಈ ಘಟನೆಯ ಬಗ್ಗೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ದುಃಖ ವ್ಯಕ್ತಪಡಿಸಿದರು. ಮತ್ತು ಮಕ್ಕಳನ್ನು ಕಳೆದುಕೊಂಡ ಮಕ್ಕಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ದೋಣಿಯೊಂದು ಮುಗಿರುವ ಸುದ್ದಿ ಕೇಳಿ ತುಂಬಾ ಆಘಾತವಾಗಿದೆ. ಹಲವರು ಮಕ್ಕಳು ಸತ್ತಿರುವ ಬಗ್ಗೆ ವರದಿ ಬರುತ್ತಿದೆ. ಆ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ. ಹಾಗೂ ಕೇಂದ್ರಕ್ಕೆ ಆ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸುವೆ ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:53 am, Tue, 16 April 24

ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!