ಇಂದು (ಏ.16) ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಝೀಲಂ ನದಿಯಲ್ಲಿ ದೋಣಿ ಮುಳುಗಿರುವ ಘಟನೆ ನಡೆದಿದೆ. ಈ ಅನಾಹುತದಿಂದ ಹಲವು ಜನ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯರ ಪ್ರಕಾರ, ಈ ದೋಣಿಯಲ್ಲಿ ಹಲವಾರು ಶಾಲಾ ಮಕ್ಕಳಿದ್ದರು ಎಂದು ಹೇಳಲಾಗಿದೆ. ಇದೀಗ ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ eನದಿಯ ಹರಿವು ಹೆಚ್ಚಾಗಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ದೋಣಿಯಲ್ಲಿ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.
ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮುಜಾಫರ್ ಜರ್ಗರ್, ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದಲ್ಲಾಳಿಗಳಿಬ್ಬರ ಜಗಳ: ಬೆಂಕಿಗಾಹುತಿಯಾಯ್ತು 1 ಕೋಟಿ ರೂ. ಮೌಲ್ಯದ ಲಂಬೋರ್ಗಿನಿ ಕಾರು
ಇನ್ನು ಈ ಘಟನೆಯ ಬಗ್ಗೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ದುಃಖ ವ್ಯಕ್ತಪಡಿಸಿದರು. ಮತ್ತು ಮಕ್ಕಳನ್ನು ಕಳೆದುಕೊಂಡ ಮಕ್ಕಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ದೋಣಿಯೊಂದು ಮುಗಿರುವ ಸುದ್ದಿ ಕೇಳಿ ತುಂಬಾ ಆಘಾತವಾಗಿದೆ. ಹಲವರು ಮಕ್ಕಳು ಸತ್ತಿರುವ ಬಗ್ಗೆ ವರದಿ ಬರುತ್ತಿದೆ. ಆ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ. ಹಾಗೂ ಕೇಂದ್ರಕ್ಕೆ ಆ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸುವೆ ಎಂದು ಹೇಳಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:53 am, Tue, 16 April 24