AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದು ಆಟಿಕೆಯಲ್ಲ, ಚೀನಾ ನಿರ್ಮಿತ ಅಸಾಲ್ಟ್ ರೈಫಲ್ ಸ್ಕೋಪ್

ಜಮ್ಮುವಿನ ಪೊಲೀಸರು ಬಾಲಕನ ಕೈಯಿಂದ ಚೀನಾದಲ್ಲಿ ತಯಾರಿಸಿದ ದೂರದರ್ಶಕವನ್ನು ವಶಪಡಿಸಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಈ ದೂರದರ್ಶಕವನ್ನು ಅಸಾಲ್ಟ್ ರೈಫಲ್‌ಗಳಲ್ಲಿ ಬಳಸಲಾಗುತ್ತದೆ. ಬಾಲಕನಿಗೆ ಈ ದೂರದರ್ಶಕ ಕಸದ ರಾಶಿಯಲ್ಲಿ ಸಿಕ್ಕಿತ್ತು. ಪ್ರಸ್ತುತ, ಪೊಲೀಸರು ಅದನ್ನು ವಶಪಡಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಸಾಂಬಾದ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ. ಇದರೊಂದಿಗೆ, ಸಾರ್ವಜನಿಕರು ಇದರಿಂದ ಭಯಭೀತರಾಗುವ ಅಗತ್ಯವಿಲ್ಲ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಶಂಕಿತನ ಫೋನ್‌ನಲ್ಲಿ ಪಾಕಿಸ್ತಾನಿ ಸಂಖ್ಯೆಯೂ ಪತ್ತೆಯಾಗಿದ್ದು, ಈ ಬಗ್ಗೆ ಆತನನ್ನು ವಿಚಾರಣೆ ನಡೆಸಲಾಗುತ್ತಿದೆ.

ಜಮ್ಮು ಕಾಶ್ಮೀರದ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದು ಆಟಿಕೆಯಲ್ಲ, ಚೀನಾ ನಿರ್ಮಿತ ಅಸಾಲ್ಟ್ ರೈಫಲ್ ಸ್ಕೋಪ್
ಟೆಲಿಸ್ಕೋಪ್
ನಯನಾ ರಾಜೀವ್
|

Updated on: Dec 22, 2025 | 9:03 AM

Share

ನವದೆಹಲಿ, ಡಿಸೆಂಬರ್ 22: ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಧಾನ ಕಚೇರಿಯ ಬಳಿ ಚೀನಾ(China)ದಲ್ಲಿ ನಿರ್ಮಿತ ಅಸಾಲ್ಟ್ ರೈಫಲ್ ಸ್ಕೋಪ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಪ್ರದೇಶದ ಅಸ್ರಾಬಾದ್‌ನಲ್ಲಿ ಆರು ವರ್ಷದ ಬಾಲಕನೊಬ್ಬ ಸ್ಕೋಪ್‌ನೊಂದಿಗೆ ಆಟವಾಡುತ್ತಿರುವುದು ಕಂಡುಬಂದಿದ್ದು, ನಂತರ ಅಧಿಕಾರಿಗಳು ಬಾಲಕನ ಪೋಷಕರ ಬಳಿ ವಿಚಾರಿಸಿದ್ದರು. ಬೆಳಗ್ಗೆ  ಹತ್ತಿರದ ಕಸದ ತೊಟ್ಟಿಯಲ್ಲಿ ಅದು ಸಿಕ್ಕಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ಸ್ನೈಪರ್ ರೈಫಲ್‌ಗೆ ಜೋಡಿಸಬಹುದಾದ ಚೀನಾ ನಿರ್ಮಿತ ಸ್ಕೋಪ್ ಪತ್ತೆಯಾಗಿದ್ದು, ಜಮ್ಮು ಪ್ರದೇಶದ ಸಿಧ್ರಾದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಚೀನಾ ನಿರ್ಮಿತ ಶಸ್ತ್ರಾಸ್ತ್ರಗಳ ಜೋಡಣೆ ಕಂಡುಬಂದ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಸಹ ಹೋಗಿದ್ದರು.

ಜಮ್ಮು (ಗ್ರಾಮೀಣ) ಪೊಲೀಸರು ಸಿಧ್ರಾ ಪ್ರದೇಶದಲ್ಲಿ ಆಯುಧದ ಮೇಲೆ ಅಳವಡಿಸಬಹುದಾದ ದೂರದರ್ಶಕವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಸಾರ್ವಜನಿಕರು ಭಯಭೀತರಾಗದಂತೆ ಸೂಚಿಸಲಾಗಿದೆ.

ಪ್ರತ್ಯೇಕ ಘಟನೆಯಲ್ಲಿ, ಸಾಂಬಾ ಜಿಲ್ಲೆಯಿಂದ ತನ್ವೀರ್ ಅಹ್ಮದ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ, ಅವರ ಮೊಬೈಲ್‌ನಲ್ಲಿ ಪಾಕಿಸ್ತಾನಿ ಫೋನ್ ನಂಬರ್ ಕಂಡುಬಂದಿದೆ ಎಂದು ವರದಿಯಾಗಿದೆ ಎಂದು ಅವರು ಹೇಳಿದರು. ಅಹ್ಮದ್ ಮೂಲತಃ ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ನಿವಾಸಿಯಾಗಿದ್ದು, ಪ್ರಸ್ತುತ ಸಾಂಬಾದಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಂಸ್ಥೆಗಳನ್ನು ಆತಂಕಕ್ಕೀಡು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮುವಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಧಾನ ಕಚೇರಿ ಬಳಿ ಚೀನಾ ನಿರ್ಮಿತ ಅಸಾಲ್ಟ್ ರೈಫಲ್ ಸ್ಕೋಪ್ ಪತ್ತೆಯಾಗಿರುವುದು ಸಂಚಲನ ಮೂಡಿಸಿದೆ. ಪೊಲೀಸರ ಪ್ರಕಾರ, ಈ ಸ್ಕೋಪ್ ಅನ್ನು ಸ್ನೈಪರ್ ರೈಫಲ್‌ಗೆ ಸಹ ಅಳವಡಿಸಬಹುದು, ಇದು ಅದರ ಸೂಕ್ಷ್ಮತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಮತ್ತಷ್ಟು ಓದಿ: ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ

ಜಮ್ಮು ಪ್ರದೇಶದ ಅಸ್ರಾಬಾದ್ ಪ್ರದೇಶದಲ್ಲಿ ಆರು ವರ್ಷದ ಬಾಲಕನೊಬ್ಬ ಸ್ಕೋಪ್‌ನೊಂದಿಗೆ ಆಟವಾಡುತ್ತಿರುವುದು ಕಂಡುಬಂದಿದೆ. ಸ್ಥಳೀಯರಿಂದ ಬಂದ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಗುವಿನ ಪೋಷಕರನ್ನು ವಿಚಾರಿಸಿದರು. ಆ ದಿನ ಬೆಳಗ್ಗೆ ಬಾಲಕ ಹತ್ತಿರದ ಕಸದ ತೊಟ್ಟಿಯಲ್ಲಿ ಸ್ಕೋಪ್ ಅನ್ನು ಕಂಡುಕೊಂಡಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಚೀನಾ ಮೂಲದ ಈ ಆಯುಧ ಪತ್ತೆಯಾದ ನಂತರ, ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಪೊಲೀಸರು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಸ್ಥಳಕ್ಕೆ ಆಗಮಿಸಿ ಇಡೀ ಘಟನೆಯನ್ನು ಪರಿಶೀಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ