Breaking News ಜಮ್ಮು ಕಾಶ್ಮೀರ: ಐಟಿಬಿಪಿ ಯೋಧರು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 7 ಸಾವು

| Updated By: ರಶ್ಮಿ ಕಲ್ಲಕಟ್ಟ

Updated on: Aug 16, 2022 | 4:11 PM

39 ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಸಿವಿಲ್ ಬಸ್  ಬ್ರೇಕ್ ಫೇಲ್ ಆದ  ನಂತರ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ. ಯೋಧರು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಹೋಗುತ್ತಿದ್ದರು. 

Breaking News ಜಮ್ಮು ಕಾಶ್ಮೀರ: ಐಟಿಬಿಪಿ ಯೋಧರು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 7 ಸಾವು
ಉರುಳಿ ಬಿದ್ದ ಬಸ್
Image Credit source: ANI
Follow us on

ಜಮ್ಮು ಕಾಶ್ಮೀರದಲ್ಲಿ (Jammu & Kashmir) ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸರನ್ನು (ITBP) ಕರೆದೊಯ್ಯುತ್ತಿದ್ದ ಬಸ್ ಪಹಲ್ಗಾಮ್​​ನಲ್ಲಿ ಉರುಳಿ ಬಿದ್ದು ಸಂಭವಿಸಿದ ಅಪಘಾತದಲ್ಲಿ 7 ಮಂದಿ ಯೋಧರು ಸಾವಿಗೀಡಾಗಿದ್ದಾರೆ. ಬಸ್ಸಿನಲ್ಲಿ 30ಕ್ಕಿಂತಲೂ ಹೆಚ್ಚು ಯೋಧರು ಪ್ರಯಾಣಿಸುತ್ತಿದ್ದರು. ಹಲವರಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಏರ್ ಲಿಫ್ಟ್ ಮಾಡಿ ಶ್ರೀನಗರದಲ್ಲಿರುನ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಚಂದನ್ವಾರಿ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 6 ಯೋಧರು ಹುತಾತ್ಮರಾಗಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವನ್ನು ಚಿಕಿತ್ಸೆಗಾಗಿ ಶ್ರೀನಗರದ ಸೇನಾ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಜಮ್ಮ ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಬಸ್ಸಿನಲ್ಲಿ 39 ಸಿಬ್ಬಂದಿಗಳಿದ್ದು ಇದರಲ್ಲಿ 37 ಐಟಿಬಿಪಿ ಮತ್ತು ಇಬ್ಬರು ಜಮ್ಮು ಮತ್ತು ಕಾಶ್ಮೀರ ಪೊಲೀಸರಾಗಿದ್ದಾರೆ. ಎಎಎನ್ಐ ಟ್ವೀಟ್ ಮಾಡಿದ ವಿಡಿಯೊದಲ್ಲಿ ಭದ್ರತಾ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿರುವುದು ಕಾಣಿಸುತ್ತದೆ. ಬ್ರೇಕ್ ಫೇಲ್ ಆಗಿ ಬಸ್ ಕೆಳಗೆ ಉರುಳಿ ಬಿದಿದ್ದು ಸಂಪೂರ್ಣ ಹಾನಿಯಾಗಿದೆ. ಅಮರನಾಥ ಯಾತ್ರೆಗೆ ನಿಯೋಜನೆಯಾದ ಯೋಧರಾಗಿದ್ದರವರು.

ಚಂದನ್ವಾರಿ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ನಾವು ನಮ್ಮ ವೀರ ಐಟಿಬಿಪಿ ಸಿಬ್ಬಂದಿಯನ್ನು ಕಳೆದುಕೊಂಡಿದ್ದು ಅತೀವ ನೋವು ತಂದಿದೆ . ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡ ಸಿಬ್ಬಂದಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರಗ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಅಪಘಾತದಲ್ಲಿ ಮಡಿದ ವೀರ ಐಟಿಬಿಪಿ ಯೋಧರ ಕುಟುಂಬಗಳು ಮತ್ತು ಸಹೋದ್ಯೋಗಿಗಳಿಗೆ ನನ್ನ ಸಂತಾಪಗಳು. ಹಲವಾರು ಐಟಿಬಿಪಿ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರು ಶೀಘ್ರವಾಗಿ ಮತ್ತು ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಟ್ವೀಟ್ ಮಾಡಿದ್ದಾರೆ

ಪೊಲೀಸ್ ಮತ್ತು ಇತರ  ಅಧಿಕಾರಿಗಳು ಘಟನಾ ಸ್ಥಳಕ್ಕೆ  ಧಾವಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Tue, 16 August 22