ಜಮ್ಮು ಮತ್ತು ಕಾಶ್ಮೀರ; ಕುಲ್ಗಾಂನಲ್ಲಿ ಉಗ್ರರು, ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ, ನಾಲ್ವರು ಯೋಧರು ಹುತಾತ್ಮ

|

Updated on: Aug 05, 2023 | 11:08 AM

Jammu and Kashmir; ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ; ಕುಲ್ಗಾಂನಲ್ಲಿ ಉಗ್ರರು, ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ, ನಾಲ್ವರು ಯೋಧರು ಹುತಾತ್ಮ
ಸಾಂದರ್ಭಿಕ ಚಿತ್ರ
Image Credit source: ANI
Follow us on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ (Encounter) ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಇದೇ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ಅವರು ಹೇಳಿದರು.

ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕುಲ್ಗಾಮ್‌ನ ಹಲಾನ್‌ ಅರಣ್ಯ ಪ್ರದೇಶಗಳಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡು, ನಂತರ ಸಾವನ್ನಪ್ಪಿದರು. ಶೋಧ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ಟ್ವೀಟ್​​ನಲ್ಲಿ ತಿಳಿಸಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಈ ಪ್ರದೇಶಕ್ಕೆ ಹೆಚ್ಚುವರಿ ಪಡೆಗಳು ಧಾವಿಸಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೂಂಛ್​​ನಲ್ಲಿ ನಾಲ್ವರು ಉಗ್ರರ ಹತ್ಯೆ

ಇದಕ್ಕೂ ಮುನ್ನ ಭದ್ರತಾ ಪಡೆಗಳು ಪೂಂಛ್​ನಲ್ಲಿ ಉತ್ತಮ ಯಶಸ್ಸನ್ನು ಸಾಧಿಸಿದ್ದವು. ಪೂಂಛ್​​ನ ಸಿಂಧ್ರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿವೆ. ಜಂಟಿ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಉಗ್ರರನ್ನು ಹತ್ಯೆಗೈದಿವೆ. ಈ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಿಶೇಷ ಪಡೆ, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರು ವಿದೇಶಿ ಭಯೋತ್ಪಾದಕರು ಎನ್ನಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ