AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಅವಳಿ ಮಕ್ಕಳ ತಂದೆ ನಾನಲ್ಲ ಎಂದಿದ್ದಕ್ಕೆ ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿದ ತಾಯಿ

ಮಹಿಳೆಯೊಬ್ಬರು ತನ್ನ ಅವಳಿ ಮಕ್ಕಳ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್​ನಲ್ಲಿ ನಡೆದಿದೆ. ಆ ಇಬ್ಬರು ಮಕ್ಕಳ ತಂದೆ ನಾನಲ್ಲ ಎಂದು ಪತಿ ಹೇಳಿದ್ದಕ್ಕೆ ಕೋಪಗೊಂಡು ಮಹಿಳೆ ತನ್ನ ನವಜಾತ ಶಿಶುಗಳನ್ನು ಹತ್ಯೆ ಮಾಡಿದ್ದಾಳೆ.

ಈ ಅವಳಿ ಮಕ್ಕಳ ತಂದೆ ನಾನಲ್ಲ ಎಂದಿದ್ದಕ್ಕೆ ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿದ ತಾಯಿ
ಶಿಶುಗಳು
ನಯನಾ ರಾಜೀವ್
|

Updated on: Jul 12, 2024 | 12:09 PM

Share

ಈ ಮಕ್ಕಳ ತಂದೆ ನಾನಲ್ಲ ಎಂದು ಪತಿ ಹೇಳಿದ್ದಕ್ಕೆ ಪತ್ನಿಯೊಬ್ಬಳು ತನ್ನ ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ನಡೆದಿದೆ.  ತಾಯಿಯೊಬ್ಬಳು ತನ್ನ  ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ತನ್ನ ಪತಿ ತನ್ನನ್ನು ಮಕ್ಕಳ ತಂದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮಹಿಳೆ ತನ್ನ ನವಜಾತ ಅವಳಿ ಮಕ್ಕಳ ಕತ್ತು ಸೀಳಿದ್ದಾಳೆ ಎಂದು ಹೇಳಲಾಗುತ್ತಿದೆ.

ತನ್ನ ಶಿಶುವನ್ನು ಹೊಲಕ್ಕೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದ್ದಾಳೆ, ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಪೂಂಚ್‌ನಲ್ಲಿ ನಡೆದ ಈ ಘಟನೆ ನಡೆದಿದೆ. ಎನ್​ಡಿಟಿವಿ ವರದಿ ಪ್ರಕಾರ,  ಮೂರು ತಿಂಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಹಳ ಸಮಯದ ನಂತರ ಮನೆಗೆ ಮರಳಿದ್ದರು, ಸ್ವಲ್ಪವೇ ಸಮಯದ ಬಳಿಕ ಅವಳಿ ಮಕ್ಕಳಿಗೆ ಜನ್ಮ ನೀಡಿದಾಗ ಆತ ಪೊಲೀಸರ ಬಳಿ ಹೋಗಿ ಅಕ್ರಮ ಸಂಬಂಧದಿಂದ ತನ್ನ ಪತ್ನಿ ಮಕ್ಕಳನ್ನು ಪಡೆದಿದ್ದಾಳೆ ಎಂದು ಹೇಳಿದ್ದರು.

ಇದನ್ನು ತಿಳಿದ ಮಹಿಳೆ ಕೂಡಲೇ ನವಜಾತ ಶಿಶುಗಳನ್ನು ಹೊಲಕ್ಕೆ ಕರೆದೊಯ್ದು ಹತ್ಯೆ ಮಾಡಿದ್ದಾಳೆ. ಸ್ಥಳೀಯರು ಆರಂಭದಲ್ಲಿ ವ್ಯಕ್ತಿಯೇ ಕೊಲೆ ಮಾಡಿದ್ದಾನೆ ಎಂದು ಶಂಕಿಸಿದ್ದರು ಆದರೆ ಪೊಲೀಸರು ಪತ್ನಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ.

ಮತ್ತಷ್ಟು ಓದಿ: ಕೊಲೆಯತ್ನ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಉದ್ಯಮಿಯ ಹತ್ಯೆ

ಆ ಕ್ರೂರ ತಾಯಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಏನೂ ಅರಿಯದ ಮುಗ್ಧ ಕಂದಮ್ಮಗಳು ಸರಿಯಾಗಿ ಕಣ್ಣುಬಿಡುವ ಮುನ್ನವೇ ಶಾಶ್ವತವಾಗಿ ಕಣ್ಮುಚ್ಚಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ