AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ, ವೈದ್ಯ ಸೇರಿ 7 ಮಂದಿ ಸಾವು

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ವೈದ್ಯ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್‌ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್​ಸೈಟ್ ಬಳಿ ಘಟನೆ ನಡೆದಿದೆ. ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ, ಸುರಂಗ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ, ವೈದ್ಯ ಸೇರಿ 7 ಮಂದಿ ಸಾವು
ಉಗ್ರರು-ಸಾಂದರ್ಭಿಕ ಚಿತ್ರImage Credit source: RAND
ನಯನಾ ರಾಜೀವ್
|

Updated on: Oct 21, 2024 | 8:31 AM

Share

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ವೈದ್ಯ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್‌ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್​ಸೈಟ್ ಬಳಿ ಘಟನೆ ನಡೆದಿದೆ. ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ, ಸುರಂಗ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಮೃತರನ್ನು ಡಾ.ಶಹನವಾಜ್, ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್, ಶಶಿ ಅಬ್ರೋಲ್, ಅನಿಲ್ ಶುಕ್ಲಾ ಮತ್ತು ಗುರ್ಮೀತ್ ಸಿಂಗ್ ಎಂದು ಗುರುತಿಸಲಾಗಿದೆ. ತಕ್ಷಣವೇ ಪೊಲೀಸರು, ಭದ್ರತಾ ಪಡೆಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳದಲ್ಲಿದ್ದ ಉಳಿದ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಆರೋಪಿಗಳನ್ನು ಗುರುತಿಸಲು ಮತ್ತು ಈ ಹಿಂಸಾತ್ಮಕ ಕೃತ್ಯದ ಹಿಂದಿನ ಉದ್ದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಸ್ತುತ ತನಿಖೆಗಳು ನಡೆಯುತ್ತಿವೆ. ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್ ನಿಂದ ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ಗೆ ಸಂಪರ್ಕಿಸುತ್ತದೆ.

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಂತಾಪ ವ್ಯಕ್ತಪಡಿಸಿದ್ದು, ಅಮಾಯಕ ಕಾರ್ಮಿಕರ ಮೇಲೆ ಹೇಡಿತನದ ದಾಳಿ ಎಂದು ಕರೆದಿದ್ದಾರೆ.

ಮತ್ತಷ್ಟು ಓದಿ: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಗಗಂಗೀರ್‌ನಲ್ಲಿ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇದು ಹೇಡಿತನದ ಭೀಕರ ಕೃತ್ಯ ಎಂದು ಬಣ್ಣಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಈ ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಭರವಸೆ ನೀಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?